ETV Bharat / state

ಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಜನರ ಕುಂದುಕೊರತೆ ಆಲಿಸಿದ ದಿನೇಶ್ ಗುಂಡೂರಾವ್

ಇಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ದತ್ತಾತ್ರೇಯ ವಾರ್ಡ್ ,ಗಾಂಧಿನಗರ ಸೇರಿದಂತೆ ವಿವಿಧ ಕಡೆ ಸಂಚರಿಸಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

Dinesh Gundu Rao
Dinesh Gundu Rao
author img

By

Published : Sep 2, 2020, 11:32 PM IST

ಬೆಂಗಳೂರು: ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಇಂದು ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಇಂದು ದಿನವಿಡಿ ಕ್ಷೇತ್ರದ ವಿವಿಧೆಡೆ ತೆರಳಿ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಕೆಲವೆಡೆ ನೂತನ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಮತ್ತೆ ಕೆಲವೆಡೆ ಜನರ ಕುಂದುಕೊರತೆ ಆಲಿಸಿದರು.

ಮೊದಲು ತಮ್ಮ ಮತಕ್ಷೇತ್ರದ ದತ್ತಾತ್ರೇಯ ವಾರ್ಡಿನ ಆಂಜನೇಯ ಬ್ಲಾಕ್ ಎರಡನೇ ಅಡ್ಡರಸ್ತೆಯ ನೂತನ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸ್ಥಳೀಯ ಪಾಲಿಕೆ ಸದಸ್ಯರಾದ ಸತ್ಯನಾರಾಯಣ ಅವವರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಗಾಂಧಿನಗರ ವಾರ್ಡಿನ ನೆಹರು ನಗರದ ಒಂದನೇ ಅಡ್ಡರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ನಿವಾಸಿಗಳ ಕುಂದು ಕೊರತೆಗಳನ್ನು ಆಲಿಸಿದರು. ಸ್ಥಳೀಯ ಪಾಲಿಕೆ ಸದಸ್ಯರಾದ ಲತಾ ನವೀನ್ ಕುಮಾರ್ ರವರು ಉಪಸ್ಥಿತರಿದ್ದರು.

ಇದಾದ ಬಳಿಕ ಬಿನ್ನಿಪೇಟೆ ವಾರ್ಡಿನ ಮಾರ್ಕಂಡೇಶ್ವರ ನಗರ ಪ್ರದೇಶಕ್ಕೆ ಭೇಟಿ ನೀಡಿ ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲು ಸ್ಥಳದಲ್ಲಿಯೇ ಇದ್ದ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಪಾಲಿಕೆ ಮಾಜಿ ಸದಸ್ಯರಾದ ವಿದ್ಯಾ ಶಶಿಕುಮಾರ್ ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.