ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪದಡಿ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ನಾಲ್ವರು ಕಾಂಗ್ರೆಸ್ ಕಾರ್ಪೋರೇಟರ್ಗಳನ್ನು ಕೆಪಿಸಿಸಿ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ.


ಬಸವಪುರ ವಾರ್ಡ್ ಕಾರ್ಪೋರೇಟರ್ ಜಯಪ್ರಕಾಶ್, ದೇವಸಂದ್ರ ವಾರ್ಡ್ನ ಶ್ರೀಕಾಂತ್, ವಿಜ್ಞಾನ ನಗರದ ನಾಗರಾಜ್ ಹಾಗೂ ನಾರಾಯಣಪುರ ವಾರ್ಡ್ನ ಸುರೇಶ್ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದ್ಯಸತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕೆಪಿಸಿಸಿ ಕಾರ್ಯದರ್ಶಿ ಹಾಜಿ ಷಫಿ ಉಲ್ಲಾ ಆದೇಶಿಸಿದ್ದಾರೆ.
ಇನ್ನೊಂದೆಡೆ ಕಾಂಗ್ರೆಸ್ ಕೆ.ಆರ್.ಪುರ ಬ್ಲಾಕ್ನ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ಮೇಲಿದ್ದ ಉಚ್ಚಾಟನೆ ಆದೇಶವನ್ನು ರದ್ದುಗೊಳಿಸಲಾಗಿದೆ.