ETV Bharat / state

ಗಲಭೆ ಪ್ರಕರಣದಲ್ಲಿ ಬಂಧಿಸಲಾದ ಅಮಾಯಕರ ಬಿಡುಗಡೆಗೆ ಸಲೀಂ ಅಹ್ಮದ್​​​ ಮನವಿ - ಅಮಾಯಕರನ್ನು ಬಿಡುಗಡೆಗೊಳಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷದಿಂದ ಮನವಿ,

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿಸಲಾದ ಅಮಾಯಕರನ್ನು ಬಿಡುಗಡೆ ಮಾಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

DJ Halli KG Halli riot case, KPCC president appeals for release of innocents, KPCC President Salim Ahmed, KPCC President Salim Ahmed news, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮನವಿ, ಗೃಹಸಚಿವರಿಗೆ ಮನವಿ ಮಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸುದ್ದಿ, ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣ, ಅಮಾಯಕರನ್ನು ಬಿಡುಗಡೆಗೊಳಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷದಿಂದ ಮನವಿ, ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣ ಸುದ್ದಿ,
ಗಲಭೆ ಪ್ರಕರಣದಲ್ಲಿ ಬಂಧಿಸಲಾದ ಅಮಾಯಕರ ಬಿಡುಗಡೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮನವಿ
author img

By

Published : Aug 17, 2020, 5:32 PM IST

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಕೆಲವು ಅಮಾಯಕ ಯುವಕರನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಗಮನ ಹರಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮನವಿ ಮಾಡಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಮಾನಿ, ಬಿಜೆಪಿ ಕಾರ್ಯಕರ್ತ ನವೀನ್ ಎಂಬಾತ ಪ್ರವಾದಿ ಮಹಮದ್ ಅವರ ಕುರಿತು ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್ ಪ್ರಕಟಿಸಿದ್ದಕ್ಕೆ ಗಲಭೆ ನಡೆದಿದೆ. ಈ ಪೋಸ್ಟ್​ಗೆ ಸಂಬಂಧಿಸಿದಂತೆ ನಡೆದ ಗಲಭೆ, ದೊಂಬಿ, ಆಸ್ತಿ ನಷ್ಟವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತೆ ಎಂದು ಹೇಳಿದ್ದಾರೆ.

ಈ ಪೋಸ್ಟ್​ನಿಂದ ನೊಂದವರು ಕೊಟ್ಟ ದೂರನ್ನು ದಾಖಲಿಸಿಕೊಂಡು ಸಂಬಂಧಿಸಿದವರನ್ನು ಬಂಧಿಸುವಲ್ಲಿ ಪೊಲೀಸ್ ಠಾಣಾಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದಾಗಿ ಆ. 11ರಂದು ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ಅಹಿತಕರ ಘಟನೆ ನಡೆದು ಹೋಗಿದೆ. ಈ ಗಲಭೆ ಪ್ರಕರಣದಲ್ಲಿ ರಾಜಕೀಯ ದುರುದ್ದೇಶದಿಂದ ಕೆಲವು ಅಮಾಯಕ ಯುವಕರನ್ನು ಪೊಲೀಸರು ಬಂಧಿಸಿ ಹಿಂಸಿಸುತ್ತಿರುವುದು ಖಂಡನೀಯ ಎಂದರು.

ಅಮಾಯಕ ಯುವಕರನ್ನು ಬಂಧಿಸಿರುವ ಸಂಬಂಧ ಪೋಷಕರು ಹಾಗೂ ಸ್ಥಳೀಯ ಹಿರಿಯ ನಾಗರಿಕರು ಅಸಹಾಯಕತೆಯಿಂದ, ನೋವಿನಿಂದ ನಮ್ಮಲ್ಲಿ ಮನವಿ ಮಾಡಿಕೊಂಡಿರುತ್ತಾರೆ ಎಂದು ಹೇಳಿದ್ದಾರೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಗೆ ಕಾರಣರಾದ ನಿಜವಾದ ಆರೋಪಿಗಳನ್ನು ಬಂಧಿಸಿ ಕಾನೂನಿನ ಚೌಕಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುವುದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ ತಪ್ಪಿತಸ್ಥರಲ್ಲದ ಅಮಾಯಕರನ್ನು ರಾಜಕೀಯ ದುರುದ್ದೇಶದಿಂದ ಬಂಧಿಸಿರುವುದನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಅಮಾಯಕರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕೆಂದು ತಮ್ಮಲ್ಲಿ ಒತ್ತಾಯಿಸುತ್ತೇನೆ ಎಂದಿದ್ದಾರೆ.

ದಯಮಾಡಿ ಪ್ರಕರಣ ಸಂಬಂಧ ಆರೋಪಿಗಳೆಂದು ಬಂಧಿಸಿರುವವರನ್ನು ಹಿರಿಯ ಅಧಿಕಾರಿಗಳಿಂದ ಪುನರ್‌ ಪರಿಶೀಲಿಸಲು ಸೂಚನೆ ನೀಡಿ. ಈ ಮೂಲಕ ಅಮಾಯಕರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ ಅಂತಾ ಪತ್ರದ ಮೂಲಕ ಸಲೀಂ ಅಹ್ಮದ್ ಗೃಹ ಸಚಿವರಿಗೆ ಕೇಳಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.