ETV Bharat / state

ನಿಜಲಿಂಗಪ್ಪನವರ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗರು ಆಯ್ಕೆಯಾಗಿದ್ದು ನಮ್ಮ ಸೌಭಾಗ್ಯ: ಡಿಕೆಶಿ

ಕಾಂಗ್ರೆಸ್​ ಪಕ್ಷದಲ್ಲಿ 24 ವರ್ಷಗಳ ನಂತರ ಚುನಾವಣೆ ನಡೆದಿದೆ. ನಿಜಲಿಂಗಪ್ಪನವರ ನಂತರ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗರು ಆಯ್ಕೆಯಾಗಿರುವುದು ನಮ್ಮ ಪಾಲಿನ ಸೌಭಾಗ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಹೇಳಿದ್ದಾರೆ.

author img

By

Published : Oct 19, 2022, 9:56 PM IST

kpcc-president-dk-shivkumar-celebrates-vitory-of-mallikarjuna-kharge
ನಿಜಲಿಂಗಪ್ಪನವರ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗರು ಆಯ್ಕೆಯಾಗಿರುವುದು ನಮ್ಮ ಸೌಭಾಗ್ಯ :ಡಿಕೆಶಿ

ಬೆಂಗಳೂರು: ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು, ಪ್ರಜಾಪ್ರಭುತ್ವ ಉಳಿಸಲು ಶ್ರಮಿಸಿದೆ. ಇದಕ್ಕೆ ಈಗ ಪಕ್ಷದ ಆಂತರಿಕ ಚುನಾವಣೆ ಸಾಕ್ಷಿ. ನಾವು ದೇಶ ಹಾಗೂ ಪಕ್ಷದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಿಕೊಂಡಿದ್ದೇವೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ, 24 ವರ್ಷಗಳ ನಂತರ ಪಕ್ಷದಲ್ಲಿ ಚುನಾವಣೆ ನಡೆದಿದೆ. ನಿಜಲಿಂಗಪ್ಪನವರ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗರು ಆಯ್ಕೆಯಾಗಿರುವುದು ನಮ್ಮ ಪಾಲಿನ ಭಾಗ್ಯ. ದೇಶಾದ್ಯಂತ ಮಲ್ಲಿಕಾರ್ಜುನ ಖರ್ಗೆ ಅವರಿಗೆ 7,897 ಮತಗಳು ಸಿಕ್ಕಿದ್ದು, ಪ್ರತಿಸ್ಪರ್ಧಿ ಶಶಿ ತರೂರ್ ಅವರಿಗೆ 1,072 ಮತಗಳು ಸಿಕ್ಕಿವೆ. 472 ಮತಗಳು ಅಮಾನ್ಯವಾಗಿವೆ. ರಾಜ್ಯದ ಪರವಾಗಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸುವುದರ ಜತೆಗೆ ಶಶಿ ತರೂರ್ ಅವರಿಗೂ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.

ಇದು ಆರೋಗ್ಯಕರ ಚುನಾವಣೆಯಾಗಿದ್ದು ಪ್ರಜಾಪ್ರಭುತ್ವ ಮೌಲ್ಯ ರಕ್ಷಣೆಯಾಗಿದೆ. ಖರ್ಗೆ 50 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಶಾಸಕರಿಂದ ಹಿಡಿದು ಮಂತ್ರಿಯಾಗಿ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ, ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕರಾಗಿ, ಲೋಕಸಭೆಗೆ ಆಯ್ಕೆಯಾಗಿ, ಸಚಿವರಾಗಿ, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಈಗ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಪಕ್ಷಕ್ಕೆ ನಿಷ್ಠರಾಗಿ ಶ್ರಮಿಸಿದರೆ ಯಾವ ಹಂತದವರೆಗೂ ಬೇಕಾದರೂ ಬೆಳೆಯಬಹುದು ಎಂಬುದಕ್ಕೆ ಖರ್ಗೆ ಅವರೇ ಸಾಕ್ಷಿ ಎಂದರು.

ನಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ: ಪಕ್ಷದಲ್ಲಿ ಒಬ್ಬರಿಗೆ ಒಂದು ಹುದ್ದೆ ಎಂಬ ನಿಯಮ ಇರುವ ಹಿನ್ನೆಲೆಯಲ್ಲಿ ಖರ್ಗೆ ಅವರು ಚುನಾವಣೆಗೆ ಸ್ಪರ್ಧಿಸುವ ಮುನ್ನ ರಾಜ್ಯಸಭೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದು ಈ ಪಕ್ಷದ ಆಂತರಿಕ ಪ್ರಜಾಪ್ರಭುತ್ವ. ದೇಶದಲ್ಲಿ ಬೇರೆ ಯಾವುದೇ ಪಕ್ಷದಲ್ಲಿ ಇಂತಹ ಚುನಾವಣೆ ನಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ನಡ್ಡಾರನ್ನು ಏನೆಂದು ಕರೆಯಬೇಕು?: ಖರ್ಗೆ ಅವರು ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಆಗಿರುತ್ತಾರೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ಜೆ ಪಿ ನಡ್ಡಾ ಅವರನ್ನು ಏನೆಂದು ಕರೆಯಬೇಕು?. ಅವರು ಚುನಾವಣೆಯಲ್ಲಿ ಗೆದ್ದಿದ್ದಾರಾ? ಅಮಿತ್ ಶಾ ಯಾವ ರಾಜ್ಯದವರು? ಹೇಗೆ ಆಯ್ಕೆಯಾದರು ಎಂದು ಪ್ರಶ್ನಿಸಿದರು.

ಖರ್ಗೆಯವರ ಆಯ್ಕೆ ಇಡೀ ಭಾರತಕ್ಕೆ ಶಕ್ತಿ ಬರುತ್ತದೆ: ಖರ್ಗೆ ಅವರ ಆಯ್ಕೆ ಕರ್ನಾಟಕದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ ಪ್ರಶ್ನೆಗೆ, ನಿಷ್ಠೆ, ಸಮಾಜ, ಹಿರಿತನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದ ರಾಜಕಾರಣಿ ರಾಜ್ಯಕ್ಕೆ ಸಿಕ್ಕಿರುವುದು ಶಕ್ತಿಯಲ್ಲವೇ?. ಕೇವಲ ರಾಜ್ಯ ಅಥವಾ ದಕ್ಷಿಣ ಭಾರತಕ್ಕೆ ಮಾತ್ರವಲ್ಲ ಅಖಂಡ ಭಾರತಕ್ಕೆ ಖರ್ಗೆಯವರ ಆಯ್ಕೆಯಿಂದ ಶಕ್ತಿ ಬರುತ್ತದೆ ಎಂದರು.

ಖರ್ಗೆ ಅವರು ರಾಜ್ಯದಲ್ಲಿ ಮೂರನೇ ಶಕ್ತಿ ಕೇಂದ್ರ ಆಗುತ್ತಾರಾ ಎಂಬ ಪ್ರಶ್ನೆಗೆ, ಮೂರನೇ ಶಕ್ತಿ ಕೇಂದ್ರ ಯಾಕೆ? ಎಐಸಿಸಿ ಅಧ್ಯಕ್ಷರು ಎಂದರೆ ಅದು ಒಂದೇ ಶಕ್ತಿ ಕೇಂದ್ರ ಎಂದರು. ಖರ್ಗೆ ಅವರು ಅಧ್ಯಕ್ಷರಾದ ನಂತರ ಶಿವಕುಮಾರ್ ಶಕ್ತಿಶಾಲಿಯಾಗಿದ್ದಾರಾ ಎಂಬ ಪ್ರಶ್ನೆಗೆ, ಡಿ ಕೆ ಶಿವಕುಮಾರ್ ಮಾತ್ರವಲ್ಲ ಪಕ್ಷದ ಎಲ್ಲ ಕಾರ್ಯಕರ್ತರೂ ಹೆಚ್ಚು ಶಕ್ತಿಶಾಲಿ ಆಗಿದ್ದಾರೆ ಎಂದು ಪ್ರತಿಕ್ರಿಯಿಸಿದರು. 2023ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಸವಾಲು ಖರ್ಗೆ ಅವರಿಗಿದೆಯೇ ಎಂಬ ಪ್ರಶ್ನೆಗೆ, ಕೇವಲ ನಮ್ಮ ರಾಜ್ಯ ಮಾತ್ರವಲ್ಲ ದೇಶದ ಎಲ್ಲ ರಾಜ್ಯಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಸವಾಲು ಇದೆ. ಕರ್ನಾಟಕ ಕೂಡ ದೇಶದ ಭಾಗ ಎಂದರು.

ಕಾಂಗ್ರೆಸ್ ಸರ್ಕಾರದ ಅಕ್ರಮಗಳ ದಾಖಲೆಯನ್ನು ರಾಹುಲ್ ಗಾಂಧಿ ಅವರಿಗೆ ನೀಡುವ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿದ್ಯುತ್ ಇಲಾಖೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮದ ಮಾಹಿತಿ ಸಾಕ್ಷಿಗಳನ್ನು ಸಿಬಿಐಗೆ ನೀಡಿ ಎಂದು ನಾನು ಈಗಾಗಲೇ ಘೋಷಿಸಿದ್ದೇನೆ ಎಂದು ಹೇಳಿದರು.

ಕಾರ್ಯಕರ್ತರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ಡಿಕೆಶಿ: ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಾರ್ಯಕರ್ತರ ಜತೆ ಕೆಪಿಸಿಸಿ ಕಚೇರಿಯಲ್ಲಿ ಸಿಹಿ ಹಂಚಿ, ಸಂಭ್ರಮಾಚರಣೆ ಮಾಡಿದರು.

ಪ್ರಿಯಾಂಕಾ ಗಾಂಧಿ ಬರುವ ವಿಶ್ವಾಸವಿದೆ: ರಾಯಚೂರಿನ ಭಾರತ ಜೋಡೋ ಯಾತ್ರೆಗೆ ಪ್ರಿಯಾಂಕಾ ಗಾಂಧಿ ಆಗಮಿಸುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಭಾರತ ಜೋಡೋ ಯಾತ್ರೆಗಾಗಿ ಸೋನಿಯಾ ಗಾಂಧಿ ಅವರು ಮೂರು ದಿನಗಳ ಕಾಲ ರಾಜ್ಯದಲ್ಲಿ ವಾಸ್ತವ್ಯ ಹೂಡಿ ಇಲ್ಲೇ ದಸರಾ ಹಬ್ಬ ಆಚರಿಸಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಪಾದಯಾತ್ರೆ ಮಾಡುತ್ತಿದ್ದು, ಇನ್ನು ಎರಡು ದಿನಗಳ ಕಾಲ ಹೆಜ್ಜೆ ಹಾಕಲಿದ್ದಾರೆ. ಅವರ ಜತೆಗೆ ಪ್ರಿಯಾಂಕ ಗಾಂಧಿ ಅವರು ಕೂಡ ಹೆಜ್ಜೆ ಹಾಕಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದರು.

ಇದನ್ನೂ ಓದಿ : ಕಾಂಗ್ರೆಸ್ ನಾಯಕರಿಂದ ಸಿಎಂ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ: ರಾಮಲಿಂಗರೆಡ್ಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.