ಬೆಂಗಳೂರು: ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತವೆ ಎಂದು ಹುಬ್ಬಳ್ಳಿಯಲ್ಲಿ ಜಮೀರ್ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ , ಕಾಂಗ್ರೆಸ್ ಪಕ್ಷ ಆ ಹೇಳಿಕೆ ಒಪ್ಪುವುದಿಲ್ಲ. ಅವರು ಕ್ಷಮೆ ಕೇಳಬೇಕು ಎಂದು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಜಮೀರ್ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಜಮೀರ್ ಹೇಳಿಕೆಯನ್ನು ಕಾಂಗ್ರೆಸ್ ಒಪ್ಪುವುದಿಲ್ಲ. ನಮ್ಮ ನಿಲುವು ಸ್ಪಷ್ಟ. ಆ ವಿಚಾರವಾಗಿ ಮಾತನಾಡಬಾರದು ಎಂದು ಹೇಳಿದ್ದೇನೆ. ಆದರೂ ಮಾತನಾಡುತ್ತಿದ್ದಾರೆ. ಅವರಿಂದ ವಿವರಣೆ ಕೇಳುತ್ತೇನೆ. ಆ ಹೇಳಿಕೆಯನ್ನು ವಾಪಸು ಪಡೆಯಬೇಕು. ಅವರು ಕ್ಷಮೆ ಕೋರಬೇಕು ಎಂದು ಹೇಳಿದರು.
ಮಕ್ಕಳಿಗೆ ಅನ್ಯಾಯವಾಗುತ್ತಿದೆ. ರಾಜಕೀಯಕ್ಕಾಗಿ ಮಕ್ಕಳನ್ನು ಬಳಸುತ್ತಿದ್ದಾರೆ. ನಿರುದ್ಯೋಗ ಹೆಚ್ಚಾಗುತ್ತಿದೆ. ಮಕ್ಕಳನ್ನು ಎತ್ತಿಕಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಇಲ್ಲ. ಅಧಿಕಾರಿಗಳನ್ನೂ ರಾಜಕಾರಣಕ್ಕೆ ಬಳಸಲಾಗುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ನಾರಾಯಣ ಹೃದಯಾಲಯದ 100 ಕೋವಿಡ್ ಹಾಸಿಗೆಗಳಿಗೆ ಸೌರವ್ ಗಂಗೂಲಿ ಚಾಲನೆ
ಈಶ್ಚರಪ್ಪ ರಾಷ್ಟ್ರ ಧ್ವಜ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪರನ್ನು ವಜಾ ಮಾಡಬೇಕು. ಅವರ ವಿರುದ್ಧ ದೇಶದ್ರೋಹ ಪ್ರಕರಣ ಹಾಕಬೇಕು. ರೈತರ ವಿರುದ್ಧ ಕೇಸ್ ಹಾಕುತ್ತೀರಿ, ಮುಗ್ದರ ಮೇಲೆ ಕೇಸ್ ಹಾಕುತ್ತೀರಿ. ಆದರೆ ಈಶ್ವರಪ್ಪರ ಮೇಲೆ ಇನ್ನೂ ಕೇಸ್ ಹಾಕಿಲ್ಲ. ಮಂತ್ರಿಗಿರಿಯಿಂದ ಅವರನ್ನು ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದರು.