ಬೆಂಗಳೂರು : ವೆಂಟಿಲೇಟರ್ ಖರೀದಿಯಲ್ಲಿ ರಾಜ್ಯ ಸರ್ಕಾರ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿರುವ ಅವರು, ವೆಂಟಿಲೇಟರ್ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ತಮಿಳುನಾಡು ಸರ್ಕಾರ ₹4.78 ಲಕ್ಷಕ್ಕೆ ಖರೀದಿಸಿದೆ. ಅದೇ ವೆಂಟಿಲೇಟರ್ಗೆ ರಾಜ್ಯ ಸರ್ಕಾರ ದುಪ್ಪಟ್ಟು ನೀಡಿದೆ. ಒಂದು ವೆಂಟಿಲೇಟರ್ಗೆ ₹18.20 ಲಕ್ಷ ನೀಡಿದೆ. ಮೂರು ಪಟ್ಟು ಹೆಚ್ಚಿನ ಹಣ ನೀಡಿ ಖರೀದಿಸಿದೆ. ವೆಂಟಿಲೇಟರ್ ಸಿಗದೆ ಸೋಂಕಿತರು ಸಾಯುತ್ತಿದ್ದಾರೆ. ಬಿಜೆಪಿ ಸಚಿವರು ಎಲ್ಲದರಲ್ಲೂ ಲೂಟಿ ಮಾಡುತ್ತಿದ್ದಾರೆ ಎಂದಿದ್ದಾರೆ.
-
ವೆಂಟಿಲೇಟರ್ ಸಿಗದೆ ಕರ್ನಾಟಕದ ಕೊರೊನಾ ಸೋಂಕಿತರು ಸಾಯ್ತಾ ಇದ್ದರೆ, ಬಿಜೆಪಿ ಮಂತ್ರಿಗಳು ಪಿಪಿಇ ಕಿಟ್ ಗಳಿಂದ ಹಿಡಿದು ಬೆಡ್ ಗಳವರೆಗೂ ಎಲ್ಲ ಕೊರೊನಾ ಚಿಕಿತ್ಸೆ ಸಲಕರಣೆಗಳ ಖರೀದಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ.
— DK Shivakumar (@DKShivakumar) July 18, 2020 " class="align-text-top noRightClick twitterSection" data="
ಬಿಜೆಪಿ ಸರಕಾರ ಕೊರೊನಾ ಸಂಕಷ್ಟ ಸಂದರ್ಭವನ್ನೂ ಲೂಟಿ ಮಾಡಲು ಬಳಸಿಕೊಂಡಿದೆ!!#ಉತ್ತರಕೊಡಿಬಿಜೆಪಿ #AnswerUsBJP
">ವೆಂಟಿಲೇಟರ್ ಸಿಗದೆ ಕರ್ನಾಟಕದ ಕೊರೊನಾ ಸೋಂಕಿತರು ಸಾಯ್ತಾ ಇದ್ದರೆ, ಬಿಜೆಪಿ ಮಂತ್ರಿಗಳು ಪಿಪಿಇ ಕಿಟ್ ಗಳಿಂದ ಹಿಡಿದು ಬೆಡ್ ಗಳವರೆಗೂ ಎಲ್ಲ ಕೊರೊನಾ ಚಿಕಿತ್ಸೆ ಸಲಕರಣೆಗಳ ಖರೀದಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ.
— DK Shivakumar (@DKShivakumar) July 18, 2020
ಬಿಜೆಪಿ ಸರಕಾರ ಕೊರೊನಾ ಸಂಕಷ್ಟ ಸಂದರ್ಭವನ್ನೂ ಲೂಟಿ ಮಾಡಲು ಬಳಸಿಕೊಂಡಿದೆ!!#ಉತ್ತರಕೊಡಿಬಿಜೆಪಿ #AnswerUsBJPವೆಂಟಿಲೇಟರ್ ಸಿಗದೆ ಕರ್ನಾಟಕದ ಕೊರೊನಾ ಸೋಂಕಿತರು ಸಾಯ್ತಾ ಇದ್ದರೆ, ಬಿಜೆಪಿ ಮಂತ್ರಿಗಳು ಪಿಪಿಇ ಕಿಟ್ ಗಳಿಂದ ಹಿಡಿದು ಬೆಡ್ ಗಳವರೆಗೂ ಎಲ್ಲ ಕೊರೊನಾ ಚಿಕಿತ್ಸೆ ಸಲಕರಣೆಗಳ ಖರೀದಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ.
— DK Shivakumar (@DKShivakumar) July 18, 2020
ಬಿಜೆಪಿ ಸರಕಾರ ಕೊರೊನಾ ಸಂಕಷ್ಟ ಸಂದರ್ಭವನ್ನೂ ಲೂಟಿ ಮಾಡಲು ಬಳಸಿಕೊಂಡಿದೆ!!#ಉತ್ತರಕೊಡಿಬಿಜೆಪಿ #AnswerUsBJP
ವೆಂಟಿಲೇಟರ್,ಪಿಪಿಇ ಕಿಟ್, ಬೆಡ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಇಂತಹ ಸಂದರ್ಭದಲ್ಲೂ ಸರ್ಕಾರ ಲೂಟಿ ಹೊಡೆಯುತ್ತಿದೆ. ಉತ್ತರ ಕೊಡಿ ಸಿಎಂ, ಉತ್ತರ ಕೊಡಿ ಬಿಜೆಪಿ ನಾಯಕರೇ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಈಗಾಗಲೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಳೆದ ಒಂದು ವಾರದಿಂದ ಉತ್ತರ ಕೊಡಿ ಅಭಿಯಾನ ಆರಂಭಿಸಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷರ ಸೇರ್ಪಡೆಯೂ ಆಗಿದೆ. ಕೋವಿಡ್ ವಿಚಾರದಲ್ಲಿ ಸರ್ಕಾರ ಹಾಗೂ ಸಚಿವರು ಕೈಗೊಂಡ ಪ್ರತಿ ನಿರ್ಧಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದೆ. ಇದಕ್ಕೆ ಉತ್ತರಿಸುವ ಯತ್ನವನ್ನು ಸರ್ಕಾರ ಮಾಡುತ್ತಿದೆ.