ETV Bharat / state

ಕೆಪಿಸಿಸಿ ಅಧ್ಯಕ್ಷ ಪಟ್ಟ: ಡಿ.ಕೆ.ಶಿವಕುಮಾರ್ ಹೆಸರು ಬಹುತೇಕ ಫೈನಲ್?

ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಇಂದು ಅಥವಾ ನಾಳೆಯೊಳಗೆ ಘೋಷಣೆ ಮಾಡುವ ಸಾಧ್ಯತೆ ಇದ್ದು, ಡಿ.ಕೆ.ಶಿವಕುಮಾರ್ ಹೆಸರು ಬಹುತೇಕ ಅಂತಿಮವಾಗಿದೆ ಎನ್ನಲಾಗಿದೆ.

D.K Shivakumar
ಡಿ.ಕೆ.ಶಿವಕುಮಾರ್
author img

By

Published : Jan 16, 2020, 8:01 PM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಇಂದು ಅಥವಾ ನಾಳೆಯೊಳಗೆ ಘೋಷಣೆ ಮಾಡುವ ಸಾಧ್ಯತೆ ಇದ್ದು, ಡಿ.ಕೆ.ಶಿವಕುಮಾರ್ ಹೆಸರು ಬಹುತೇಕ ಅಂತಿಮವಾಗಿದೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷಗಿರಿಗೆ ರಾಜ್ಯ ಕೈ ನಾಯಕರು ಹೈಕಮಾಂಡ್ ಮಟ್ಟದಲ್ಲಿ ಸಾಕಷ್ಟು ಕಸರತ್ತು ನಡೆಸಿದ್ದರು. ಕೆಪಿಸಿಸಿ ಪಟ್ಟಕ್ಕಾಗಿ ವಲಸೆ ಹಾಗೂ ಮೂಲ ಕಾಂಗ್ರೆಸ್ ಮಧ್ಯೆಯೇ ಸಾಕಷ್ಟು ಜಟಾಪಟಿ ನಡೆಯುತ್ತಿತ್ತು. ಮೂಲ‌ ಕಾಂಗ್ರೆಸ್ಸಿಗರು ಹಾಗೂ ವಲಸೆ ಕಾಂಗ್ರೆಸ್ಸಿಗರು ತಮ್ಮ ಅಭ್ಯರ್ಥಿ ಪರ ದೆಹಲಿಯಲ್ಲಿ ಭರ್ಜರಿ ಲಾಬಿ ನಡೆಸಿದ್ದರು. ಕಳೆದೊಂದು ತಿಂಗಳಿಂದ ಕೆಪಿಸಿಸಿ ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ, ಕೆ.ಎಚ್.ಮುನಿಯಪ್ಪ, ಡಿ.ಕೆ.ಶಿವಕುಮಾರ್ ಬಣದಿಂದ ಸಾಕಷ್ಟು ಕಸರತ್ತು ನಡೆಯುತ್ತಿತ್ತು.

ಇದೀಗ ಕೆಪಿಸಿಸಿ ಅಧ್ಯಕ್ಷ ಪಟ್ಟ ಆಯ್ಕೆ ಪ್ರಕ್ರಿಯೆ ಫೈನಲ್ ಹಂತಕ್ಕೆ ಬಂದಿದ್ದು, ಬಹುತೇಕ ಡಿಕೆಶಿ ಹೆಸರು ಫೈನಲ್ ಆಗಿದೆ ಎನ್ನಲಾಗಿದೆ. ತಮ್ಮ ಹೆಸರು ಘೋಷಣೆಯಾಗುವ ಬಗ್ಗೆ ಆಪ್ತರ ಬಳಿ ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಇದೆ. ಇತ್ತ ಸಿದ್ದರಾಮಯ್ಯ ಬಣವನ್ನೂ ಹೈಕಮಾಂಡ್​ ಸಮಾಧಾನ ಮಾಡುವ ಪ್ರಯತ್ನ ನಡೆಸಿದೆ ಎಂದು ಹೇಳಲಾಗಿದೆ. ಸತೀಶ್ ಜಾರಕಿಹೊಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿಯೂ ಇದೆ. ಈಶ್ವರ ಖಂಡ್ರೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Intro:Body:KN_BNG_06_KPCCPRESIDENT_DKSNAME_SCRIPT_7201951

ಕೆಪಿಸಿಸಿ ಅಧ್ಯಕ್ಷ ಪಟ್ಟ: ಡಿ.ಕೆ.ಶಿವಕುಮಾರ್ ಹೆಸರು ಬಹುತೇಕ ಫೈನಲ್?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಹೆಸರು ಇಂದು ಅಥವಾ ನಾಳೆಯೊಳಗೆ ಘೋಷಣೆ ಮಾಡುವ ಸಾಧ್ಯತೆ ಇದ್ದು, ಡಿಕೆಶಿ ಹೆಸರು ಬಹುತೇಕ ಅಂತಿಮವಾಗಿದೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷಗಿರಿಗೆ ರಾಜ್ಯ ಕೈ ನಾಯಕರಿಂದ ಹೈ ಕಮಾಂಡ್ ಮಟ್ಟದಲ್ಲಿ ಸಾಕಷ್ಟು ಕಸರತ್ತು ನಡೆಸಲಾಗುತ್ತಿದೆ. ಕೆಪಿಸಿಸಿ ಪಟ್ಟಕ್ಕಾಗಿ ವಲಸೆ ಹಾಗೂ ಮೂಲ ಕಾಂಗ್ರೆಸ್ ಮಧ್ಯೆನೇ ಸಾಕಷ್ಟು ಜಟಾಪಟಿ ನಡೆಯುತ್ತಿತ್ತು. ಮೂಲ‌ ಕಾಂಗ್ರೆಸಿಗರು ಹಾಗೂ ವಲಸೆ ಕಾಂಗ್ರೆಸಿಗರು ತಮ್ಮ ಅಭ್ಯರ್ಥಿ ಪರ ದೆಹಲಿಯಲ್ಲಿ ಭರ್ಜರಿ ಲಾಬಿ ನಡೆಸಿದ್ದರು. ಕಳೆದ ಒಂದು ತಿಂಗಳಿಂದ ಕೆಪಿಸಿಸಿ ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ, ಕೆ.ಎಚ್.ಮುನಿಯಪ್ಪ, ಡಿ.ಕೆ.ಶಿವಕುಮಾರ್ ಬಣದಿಂದ ಸಾಕಷ್ಟು ಕಸರತ್ತು ನಡೆಯುತ್ತಿದೆ.

ಇದೀಗ ಕೆಪಿಸಿಸಿ ಅಧ್ಯಕ್ಷ ಪಟ್ಟ ಆಯ್ಕೆ ಪ್ರಕ್ರಿಯೆ ಫೈನಲ್ ಹಂತಕ್ಕೆ ಬಂದಿದ್ದು, ಬಹುತೇಕ ಡಿಕೆಶಿ ಹೆಸರು ಫೈನಲ್ ಆಗಿದೆ ಎನ್ನಲಾಗಿದೆ. ತಮ್ಮ ಹೆಸರು ಘೋಷಣೆಯಾಗುವ ಬಗ್ಗೆ ಆಪ್ತರ ಬಳಿ ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತ ಸಿದ್ದರಾಮಯ್ಯ ಬಣಕ್ಕೂ ಹೈಕಮಾಂಡ್ ನಿಂದ ಸಮಾಧಾನಿಸುವ ಯತ್ನ ನಡೆಸಲಾಗಿದೆ ಎಂದು ಹೇಳಲಾಗಿದೆ. ಸತೀಶ್ ಜಾರಕಿಹೊಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈಶ್ವರ ಖಂಡ್ರೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆ ಇದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.