ETV Bharat / state

ಜಿಲ್ಲಾ ಪ್ರವಾಸಕ್ಕೆ ತೆರಳಿದ ಡಿ ಕೆ ಶಿವಕುಮಾರ್.. ಸಿಂದಗಿಯಲ್ಲಿ ಇಂದು ಕಾರ್ಯಕ್ರಮ - ಬಾಗಲಕೋಟೆ ಜಿಲ್ಲೆಗೆ ಡಿಕೆ ಶಿವಕುಮಾರ್ ಭೇಟಿ

ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಹಿಂದುಳಿದ ವರ್ಗಗಳ ಕುಂದುಕೊರತೆ ಆಲಿಸುವ ಉದ್ದೇಶಕ್ಕೆ ರಾಜ್ಯ ಪ್ರವಾಸ ಕೈಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

dk shivkumar
ಡಿಕೆ ಶಿವಕುಮಾರ್
author img

By

Published : Jul 17, 2021, 11:16 AM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಎರಡು ದಿನ ರಾಜ್ಯ ಪ್ರವಾಸ ನಿಮಿತ್ತ ಇಂದು ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಹಿಂದುಳಿದ ವರ್ಗಗಳ ಕುಂದುಕೊರತೆ ಆಲಿಸುವ ಜೊತೆಗೆ ಅತ್ಯಂತ ಪ್ರಮುಖವಾಗಿ ಸಿಂದಗಿ ವಿಧಾನಸಭೆ ಉಪಚುನಾವಣೆ ಸಂಬಂಧ ಪಕ್ಷದ ಮುಖಂಡರ ಜತೆ ಚರ್ಚಿಸಿ ಗೆಲುವಿನ ಕಾರ್ಯತಂತ್ರ ಹೆಣೆಯುವ ಉದ್ದೇಶದಿಂದಾಗಿ ಅವರು ತೆರಳಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಿಂದ ಇಂದು ಬೆಳಗ್ಗೆ ಹೊರಟಿರುವ ಅವರು ಇಂದು ಮತ್ತು ನಾಳೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ ಬೆಂಗಳೂರಿನಿಂದ ಕಲಬುರಗಿ ವಿಮಾನದ ಮೂಲಕ ತೆರಳಿರುವ ಡಿಕೆಶಿ, ಕಲಬುರಗಿಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ತೆರಳಿ ಅಲ್ಲಿ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಂಡಿರುವ ದಲಿತ ಸಮುದಾಯದ ಕುಂದುಕೊರತೆಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಿಂದಗಿ ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದ ಎಂಸಿ ಮನಗೂಳಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಘೋಷಣೆಯಾಗಲಿದೆ. ಎಂ ಸಿ ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರನ್ನು ಜೆಡಿಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವಲ್ಲಿ ಸಫಲವಾಗಿದೆ. ಅಲ್ಲದೆ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಮಾಡಿದೆ. ರಾಜ್ಯದಲ್ಲಿ ಪಕ್ಷ ಸಂಘಟನೆಗೆ ನಿರಂತರವಾಗಿ ಸಂಚರಿಸುತ್ತಿರುವ ಡಿಕೆಶಿ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ವಿಧಾನಸಭೆ ಉಪ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

ತಾಂಡಾ ನಿವಾಸಿಗಳ ಭೇಟಿ:

ಈ ಕಾರ್ಯಕ್ರಮ ಮುಗಿಸಿ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂದಗಿಯ ಪಡಗನೂರು ತಾಂಡಾಗೆ ತೆರಳಿ ಅಲ್ಲಿನ ತಾಂಡಾದ ಲಂಬಾಣಿ ಸಮುದಾಯದ ನಾಗರಿಕರ ಕುಂದುಕೊರತೆ ಆಲಿಸಲಿದ್ದಾರೆ. ಈ ಎರಡು ಕಾರ್ಯಕ್ರಮಗಳನ್ನು ಮುಗಿಸಿಕೊಂಡು ವಿಜಯಪುರ ಜಿಲ್ಲಾ ಕೇಂದ್ರಕ್ಕೆ ಆಗಮಿಸುವ ಅವರು ಅಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆ ನಡೆಸುವರು. ಸಂಜೆ ಸಭೆಯನ್ನು ಮುಗಿಸಿ ವಿಜಯಪುರದಿಂದ ಹೊರಟು ಜಮಖಂಡಿಗೆ ಆಗಮಿಸಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ವಿವಿಧ ಮುಖಂಡರ ಜೊತೆ ಚರ್ಚೆ:

ಸಂಜೆ ವಾಸ್ತವ್ಯ ಹೂಡಿದ ಸಂದರ್ಭ ವಿಜಯಪುರ ಹಾಗೂ ಸಿಂದಗಿ ಕ್ಷೇತ್ರದ ವಿವಿಧ ಮುಖಂಡರನ್ನು ಕರೆಸಿಕೊಂಡು ರಾತ್ರಿ ಚರ್ಚೆ ನಡೆಸಲಿದ್ದಾರೆ. ಮುಂಬರುವ ವಿಧಾನಸಭಾ ಉಪ ಚುನಾವಣೆಯನ್ನು ಶತಾಯಗತಾಯ ಕಾಂಗ್ರೆಸ್ ಗೆದ್ದುಕೊಳ್ಳಬೇಕು. ಈ ಮೂಲಕ 2023ರ ವಿಧಾನಸಭೆ ಚುನಾವಣೆಗೆ ಹೊಸ ಉತ್ಸಾಹದೊಂದಿಗೆ ತೆರಳಲು ಅನುಕೂಲ ಆಗಲಿದೆ ಎಂಬ ಸಂದೇಶವನ್ನು ಪಕ್ಷದ ಮುಖಂಡರು ಹಾಗೂ ನಾಯಕರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.

ನಾಳೆ ಬಾಗಲಕೋಟೆ ಭೇಟಿ:

ನಾಳೆ ಬೆಳಗ್ಗೆ ತೇರದಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬನಹಟ್ಟಿ ನೇಕಾರ ಸಮುದಾಯದೊಂದಿಗೆ ಕುಂದುಕೊರತೆ ಸಂವಾದ ನಡೆಸುವರು. ಇದು ಪೂರ್ಣಗೊಂಡ ಬಳಿಕ ಮಧ್ಯಾಹ್ನ ಬಾಗಲಕೋಟೆ ತಾಲೂಕಿನ ನೀಲಾನಗರ ಶಿರೂರು ತಾಂಡಾಗೆ ಭೇಟಿ ಕೊಟ್ಟು ಅಲ್ಲಿನ ಲಂಬಾಣಿ ಸಮುದಾಯದವರ ಕುಂದುಕೊರತೆ ಆಲಿಸಲಿದ್ದಾರೆ.

ಬಳಿಕ ಸಂಜೆ ಬಾಗಲಕೋಟೆ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಭಾಗಿಯಾಗುವರು. ಈ ಸಭೆಯ ಬಳಿಕ ಬಾಗಲಕೋಟೆ ಜಿಲ್ಲೆಯ ನೇಕಾರ ಸಮುದಾಯದ ನಾಯಕರೊಂದಿಗೆ ಸಮುದಾಯದ ಕುಂದುಕೊರತೆಗಳ ಬಗ್ಗೆ ಚಿಂತನಾ ಸಭೆ ನಡೆಸಲಿದ್ದಾರೆ. ಎಲ್ಲಾ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿ ಸಂಜೆ 7 ಗಂಟೆಗೆ ಹುಬ್ಬಳ್ಳಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.