ETV Bharat / state

ರಾಜ್ಯ ಸರ್ಕಾರ ಮಹಾನಗರವನ್ನು ಭ್ರಷ್ಟಾಚಾರದ ರಾಜಧಾನಿಯನ್ನಾಗಿಸಿದೆ.. ಡಿಕೆಶಿ - ಈಟಿವಿ ಭಾರತ ಕನ್ನಡ ನ್ಯೂಸ್

ರಾಜ್ಯ ಬಿಜೆಪಿ ಸರ್ಕಾರ ಬೆಂಗಳೂರು ಮಹಾನಗರವನ್ನು ಭ್ರಷ್ಟಾಚಾರದ ರಾಜಧಾನಿಯನ್ನಾಗಿ ಮಾಡಿದ್ದು, ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

kpcc-president-dk-shivkumar-spoke-against-state-govt
ರಾಜ್ಯ ಸರ್ಕಾರ ಮಹಾನಗರವನ್ನು ಭ್ರಷ್ಟಾಚಾರದ ರಾಜಧಾನಿಯನ್ನಾಗಿಸಿದೆ...ಡಿಕೆಶಿ
author img

By

Published : Sep 13, 2022, 9:30 PM IST

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಇದೀಗ ಭ್ರಷ್ಟಾಚಾರದ ರಾಜಧಾನಿಯಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಮಹಾನಗರ ಬಲಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ 40 ರಷ್ಟು ಸರ್ಕಾರ- ಬಿಜೆಪಿ ಅಂದರೆ ಭ್ರಷ್ಟಾಚಾರ’ ಅಭಿಯಾನ ಉದ್ಘಾಟಿಸಿ ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೂ ನಾವು ಭ್ರಷ್ಟಾಚಾರದ ವಿಚಾರವನ್ನು ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಿರುವುದೇಕೆ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು. ಅಧಿವೇಶನ 10 ದಿನಗಳ ಕಾಲ ನಡೆಯಲಿದ್ದು, ಇಂದು ಪ್ರಕೃತಿ ವಿಕೋಪದ ಚರ್ಚೆ ಆಗುತ್ತಿದೆ. ಅಧಿವೇಶನದಲ್ಲಿ ಭ್ರಷ್ಟಾಚಾರದ ವಿಚಾರವನ್ನು ವ್ಯಾಪಕವಾಗಿ ಚರ್ಚೆ ಮಾಡಬೇಕಿದೆ.

ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಚರ್ಚೆ : ಕಾಂಗ್ರೆಸ್ ಈ ಜವಾಬ್ದಾರಿ ವಹಿಸಿಕೊಂಡಿದೆ. ನಮ್ಮ ಶಾಸಕರುಗಳಿಗೆ ಜವಾಬ್ದಾರಿ ನೀಡಿದ್ದು, ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಲು ತಿಳಿಸಿದ್ದೇವೆ. ಅಧಿವೇಶನದಲ್ಲಿ ಹಾಗೂ ಹೊರಗೆ ರಾಜ್ಯದ ಇತರ ಭಾಗಗಳಲ್ಲಿ ಸಾರ್ವಜನಿಕವಾಗಿ ಈ ಬಗ್ಗೆ ಚರ್ಚೆ ಆಗಬೇಕಿದೆ. ನಮ್ಮ ರಾಜ್ಯ ಹಾಗೂ ಬೆಂಗಳೂರು ನಗರ ಐಟಿ ಕ್ಯಾಪಿಟಲ್, ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ, ಎಜುಕೇಶನ್ ಹಬ್ ಎಂದು ಖ್ಯಾತಿ ಪಡೆದಿದೆ. ಇದಕ್ಕೆ ಹಲವರ ಕೊಡುಗೆ ಇದೆ. ಆದರೆ, ಈಗ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ‘ದೇಶದ ಭ್ರಷ್ಟಾಚಾರದ ರಾಜಧಾನಿ’ ಎಂದು ಕುಖ್ಯಾತಿ ಬಂದಿದೆ ಟೀಕಿಸಿದರು.

ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲೂ ಭ್ರಷ್ಟಾಚಾರ: ಈ ಸರ್ಕಾರ ಬಂದ ನಂತರ ರಾಜ್ಯಕ್ಕೆ ಯಾವುದಾದರೂ ರಾಷ್ಟ್ರೀಯ ಯೋಜನೆ ನೀಡಿದ್ದೀರಾ? ಇಲ್ಲ. ಆದರೆ, ಈ ಸರ್ಕಾರಕ್ಕೆ ಭ್ರಷ್ಟಾಚಾರದ ಹೆಸರು ಬಂದಿದೆ. ಪೊಲೀಸ್ ಇಲಾಖೆಯಲ್ಲಿ ಎಲ್ಲ ಹುದ್ದೆಗಳಿಗೂ ಒಂದೊಂದು ದರ ನಿಗದಿ ಮಾಡಿದ್ದೀರಿ. ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳ ನೇಮಕಾತಿಯಲ್ಲಂತೂ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದರು.

ಯಾವ ಕಾಲದಲ್ಲೂ ಈ ಮಟ್ಟದ ಭ್ರಷ್ಟಾಚಾರ ಇರಲಿಲ್ಲ. ಪಿಎಸ್ಐ ಹಗರಣದಲ್ಲಿ ಸಣ್ಣ ಪುಟ್ಟ ಅಪರಾಧಿಗಳನ್ನು ಬಂಧಿಸಿದ್ದಾರೆ. ಈ ಅಕ್ರಮದಲ್ಲಿ ಸಚಿವರು ಭಾಗಿಯಾಗದಿದ್ದರೆ ಅಧಿಕಾರಿಗಳಿಗೆ ಇಷ್ಟು ದೊಡ್ಡ ಹಗರಣ ಮಾಡಲು ಹೇಗೆ ಸಾಧ್ಯ? ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಅಭ್ಯರ್ಥಿಯನ್ನು ವಿಚಾರಣೆಗೆ ಕರೆದುಕೊಂಡು ಹೋದರೆ ಸಚಿವರು ಕರೆ ಮಾಡಿ ಆತನನ್ನು ಬಿಡುಗಡೆ ಮಾಡಿಸುತ್ತಾರೆ ಎಂದು ತಿಳಿಸಿದರು.

ಇತ್ತೀಚೆಗೆ ಕನಕಗಿರಿ ಶಾಸಕರು ನಾನು 15 ಲಕ್ಷ ಪಡೆದು ಸರ್ಕಾರಕ್ಕೆ ನೀಡಿರುವುದಾಗಿ ಹೇಳಿದ್ದು, ಈ ಧ್ವನಿ ನನ್ನದೇ ಎಂದು ಒಪ್ಪಿಕೊಂಡಿದ್ದಾರೆ. ಈ ಹಗರಣದ ಬಗ್ಗೆ ನಮ್ಮ ಪಕ್ಷದ ಶಾಸಕರು ಪ್ರಶ್ನೆ ಮಾಡಿದಾಗ ಅವರಿಗೆ ನೋಟೀಸ್ ಕೊಟ್ಟ ನೀವು, ನಿಮ್ಮ ಶಾಸಕರಿಗೆ ಯಾಕೆ ನೊಟೀಸ್ ನೀಡಿಲ್ಲ? 15 ಲಕ್ಷ ನೀಡಿರುವುದಾಗಿ ಹೇಳಿದ್ದರೂ ಯಾಕೆ ಪ್ರಕರಣ ದಾಖಲಾಗಿಲ್ಲ? ಲಂಚ ಪಡೆಯುವುದು ಎಷ್ಟು ಅಪರಾಧವೋ ಲಂಚ ನೀಡುವುದು ಅಪರಾಧ. ನಿಮ್ಮ ಸರ್ಕಾರ, ಪೊಲೀಸ್ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು.

ರಮೇಶ್ ಜಾರಕಿಹೊಳಿ ಅವರು 680 ಕೋಟಿಯಷ್ಟು ಹಣವನ್ನು ಸಹಕಾರಿ ಬ್ಯಾಂಕುಗಳ ಸಾಲ ಹಾಗೂ ರೈತರಿಗೆ ನೀಡಬೇಕಾದ ಹಣ ಬಾಕಿ ಉಳಿಸಿಕೊಂಡಿದ್ದು, ಸಹಕಾರ ಸಚಿವ ಸೋಮಶೇಖರ್ ಅವರು ಇವರನ್ನು ರಕ್ಷಣೆ ಮಾಡುತ್ತಿರುವುದೇಕೆ? ಈ 680 ಕೋಟಿ ಹಣ ಈ ರಾಜ್ಯದ ರೈತರ, ಸಹಕಾರಿ ಬ್ಯಾಂಕಿನ ಹಣ. ನಿಮ್ಮ ಭ್ರಷ್ಟ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ರಕ್ಷಣೆ ಮಾಡುತ್ತೀರಾ ಎಂದು ಪ್ರಶ್ನಿಸಿದರು.

ಈ ಭ್ರಷ್ಟ ಸರ್ಕಾರವನ್ನು ಕಿತ್ತು ಹಾಕಬೇಕಿದೆ: ಶಿಕ್ಷಣ ಸಂಸ್ಥೆಗಳ ಸಂಘವೂ ಸರ್ಕಾರದ ವಿರುದ್ಧ ಪತ್ರ ಬರೆದಿದೆ. ಇನ್ನು ರೈತರಿಗೆ ನೀಡುವ ಪರಿಹಾರದಲ್ಲಿ ತೋಟಗಾರಿಕಾ ಸಚಿವರಿಗೆ ಶೇ.11ರಷ್ಟು ಕಮಿಷನ್ ಎಂದು ರಶೀದಿಯಲ್ಲಿ ನಮೂದಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಯಾಕೆ ಮಾತನಾಡುತ್ತಿಲ್ಲ. ಇವರಿಂದ ನಿಮ್ಮ ಸರ್ಕಾರ ಬಂದಿದೆ ಎಂದು ಸುಮ್ಮನಿದ್ದೀರಾ? ಈ ಭ್ರಷ್ಟ ಸರ್ಕಾರವನ್ನು ಕಿತ್ತು ಹಾಕಬೇಕಿದೆ. ಹೀಗಾಗಿ ನಾವು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದು, ನೀವು ಕೂಡ ಈ ಸರ್ಕಾರದ ಭ್ರಷ್ಟಾಚಾರಕ್ಕೆ ಬಲಿಯಾಗಿದ್ದರೆ, ನೀವು ಸಹಾಯವಾಣಿ 8447704040ಗೆ ಕರೆ, ವಾಟ್ಸ್​ಆ್ಯಪ್​ ಮೂಲಕ ತಿಳಿಸಿ. ಅಥವಾ www.40percentsarkaara.com ವೆಬ್ ಸೈಟ್ ನಲ್ಲಿ ತಿಳಿಸಬಹುದು. ನಿಮ್ಮ ಮಾಹಿತಿಯನ್ನು ಗೌಪ್ಯವಾಗಿ ಇಡುತ್ತೇವೆ ಎಂದರು.

ಇದನ್ನೂ ಓದಿ : ನಾನು ಒಮ್ಮೊಮ್ಮೆ ಸುಳ್ಳು ಹೇಳುತ್ತೇನೆ, ನೂರಕ್ಕೆ ನೂರು ಪ್ರಾಮಾಣಿಕನಲ್ಲ: ಸದನದಲ್ಲಿ ಸಿದ್ದರಾಮಯ್ಯ ಹೇಳಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.