ETV Bharat / state

ಕಾರ್ಯಾಧ್ಯಕ್ಷರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೊದಲ ಸಭೆ - ಕಾರ್ಯಾಧ್ಯಕ್ಷರ ಜೊತೆ ಕೆಪಿಸಿಸಿ ಅಧ್ಯಕ್ಷರ ಸಭೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಮ್​ ಅಹ್ಮದ್​ ಜತೆ ಮಾತುಕತೆ ನಡೆಸಿದ್ದಾರೆ.

DKShivkumar meeting in KPCC Office ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿ ಸಭೆ
ಡಿ.ಕೆ.ಶಿವಕುಮಾರ್ ಸಭೆ
author img

By

Published : Mar 16, 2020, 1:58 PM IST

ಬೆಂಗಳೂರು: ನಿಯೋಜಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರ ಜೊತೆ ಮೊದಲ ಸಭೆ ನಡೆಸಿದರು.

ರೇಸ್​ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸಭೆ ಆರಂಭವಾಗಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಮ್​ ಅಹ್ಮದ್​ ಜತೆ ಮಾತುಕತೆ ನಡೆಸಿದ್ದಾರೆ. ಪಕ್ಷ ಸಂಘಟನೆ, ರಾಜ್ಯದಲ್ಲಿ ಕಾಂಗ್ರೆಸ್​ನ್ನು ಅಧಿಕಾರಕ್ಕೆ ತರುವುದು, ಪರಸ್ಪರ ಸಮನ್ವಯ ಸಾಧಿಸುವುದು, ಬಿಜೆಪಿ ಹಣ ಬಲದಿಂದ ನಡೆಸುತ್ತಿರುವ ಪ್ರಚಾರಕ್ಕೆ ಪ್ರತಿಯಾಗಿ ಪಕ್ಷದ ಸಾಧನೆಯನ್ನು ವಿವರಿಸುವುದು, ಜನರನ್ನ ಸಮರ್ಥವಾಗಿ ತಲುಪುವುದು, ಪಕ್ಷದಲ್ಲಿರುವ ಆಂತರಿಕ ಭಿನ್ನಾಭಿಪ್ರಾಯವನ್ನು ಹೋಗಲಾಡಿಸಿ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುವ ಪ್ರಯತ್ನ ಸೇರಿದಂತೆ ಹಲವು ಯತ್ನಗಳು ಹಾಗೂ ವಿಚಾರಗಳ ಕುರಿತು ಇಂದಿನ ಸಭೆಯಲ್ಲಿ ನಾಯಕರು ಚರ್ಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಯಾಧ್ಯಕ್ಷರ ಜೊತೆ ಡಿ.ಕೆ.ಶಿವಕುಮಾರ್ ಸಭೆ

ಡಿಕೆಶಿಗೆ ಅದ್ಧೂರಿ ಸ್ವಾಗತ :

ಕಾಂಗ್ರೆಸ್ ಭವನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಕಚೇರಿ ಮುಂದಿರುವ ಗಾಂಧಿ ಪ್ರತಿಮೆಗೆ ಡಿಕೆಶಿ ಮಾಲಾರ್ಪಣೆ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.