ETV Bharat / state

ಯಾರೂ ಕೂಡ ಕಾಂಗ್ರೆಸ್​​​ನಿಂದ ಬಿಜೆಪಿಗೆ ಹೋಗುವವರಿಲ್ಲ: ಖಂಡ್ರೆ - ಬೆಂಗಳೂರಿನ ಕುಮಾರಕೃಪ ಅತಿಥಿಗೃಹ

ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೂ ಟಾಂಗ್ ಕೊಟ್ಟ ಖಂಡ್ರೆ, ಇಲ್ಲಿಂದ ಯಾರೂ ಅಲ್ಲಿಗೆ ಹೋಗಲ್ಲ. ಅಲ್ಲಿಂದ ಬರುವವರೆ ಕ್ಯೂನಲ್ಲಿ ನಿಂತಿದ್ದಾರೆ, ನಾವೇ ಅವರ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಸಮಯ ಬಂದಾಗ ಅದನ್ನ ಹೇಳುತ್ತೇವೆ. ಬಿಜೆಪಿಯಲ್ಲಿರುವವರೇ ಭ್ರಮನಿರಸನಗೊಂಡಿದ್ದು, ಇಲ್ಲಿಂದ ಹೋದವರಷ್ಟೇ ಅಲ್ಲ, ಅಲ್ಲಿರುವವರೂ ಬರೋಕೆ‌ ರೆಡಿಯಾಗಿದ್ದಾರೆ..

KPCC President Ishwar Khandre
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
author img

By

Published : Feb 17, 2021, 6:45 PM IST

ಬೆಂಗಳೂರು : ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಎಲ್ಲಾ ರಂಗದಲ್ಲೂ ವಿಫಲವಾಗಿವೆ. ನಾಯಕರು ತಮ್ಮ ಅಸ್ತಿತ್ವ ಕಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್‌ ಪಕ್ಷದಿಂದ ಯಾರೂ ಅನ್ಯ ಪಕ್ಷಕ್ಕೆ ಹೋಗಲ್ಲ.. ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ

ಓದಿ: ನಾನು ರಾಜಕುಮಾರ್ ಅಭಿಮಾನಿ, ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿಲ್ಲ: ಹ್ಯಾರಿಸ್

ಬೆಂಗಳೂರಿನ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಜಾಬ್ ಸ್ಥಳೀಯ ಮಟ್ಟದಲ್ಲಿ ಬಿಜೆಪಿ ಸಂಪೂರ್ಣ ನೆಲೆ ಕಳೆದುಕೊಂಡಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ದೂರಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರ್ತಾರೆಂದು ಹೇಳಿದ್ದಾರೆ. ಕಟೀಲ್‌ಗೆ ಸುಳ್ಳು ಹೇಳುವ ಚಾಳಿಯಿದೆ, ಸುಳ್ಳನ್ನೇ ಸತ್ಯವೆಂದು ಬಿಂಬಿಸುತ್ತಿದ್ದಾರೆ.

ಸಣ್ಣ ಪುಟ್ಟ ವಿಚಾರದಿಂದ ಕೆಲವರು ಅಲ್ಲಿಗೆ ಹೋಗಿದ್ದು, ಅವರು ಈಗಾಗಲೇ ಪಶ್ಚಾತ್ತಾಪ ಪಡ್ತಿದ್ದಾರೆ. ರಾಜ್ಯ, ರಾಷ್ಟ್ರದಲ್ಲಿ ಬಿಜೆಪಿ ಬಣ್ಣ ಬಯಲಾಗಿದ್ದು, ಕಾಂಗ್ರೆಸ್ ಬೇರೆ ಪಕ್ಷಗಳು ಅಧಿಕಾರಕ್ಕೆ ಬರ್ತಾ ಇವೆ ಎಂದರು.

ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೂ ಟಾಂಗ್ ಕೊಟ್ಟ ಖಂಡ್ರೆ, ಇಲ್ಲಿಂದ ಯಾರೂ ಅಲ್ಲಿಗೆ ಹೋಗಲ್ಲ. ಅಲ್ಲಿಂದ ಬರುವವರೆ ಕ್ಯೂನಲ್ಲಿ ನಿಂತಿದ್ದಾರೆ, ನಾವೇ ಅವರ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಸಮಯ ಬಂದಾಗ ಅದನ್ನ ಹೇಳುತ್ತೇವೆ. ಬಿಜೆಪಿಯಲ್ಲಿರುವವರೇ ಭ್ರಮನಿರಸನಗೊಂಡಿದ್ದು, ಇಲ್ಲಿಂದ ಹೋದವರಷ್ಟೇ ಅಲ್ಲ, ಅಲ್ಲಿರುವವರೂ ಬರೋಕೆ‌ ರೆಡಿಯಾಗಿದ್ದಾರೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ಸುರ್ಜೇವಾಲ ಎರಡು ದಿನ ಸಭೆ ನಡೆಸುತ್ತಾರೆ. ಇಂದು ಶಾಸಕರ ಜೊತೆ ಸಭೆ ನಡೆಸಿ, ನಾಳೆ ಬಿಬಿಎಂಪಿ, ಜಿಲ್ಲಾಧ್ಯಕ್ಷರು, ಮಾಜಿ‌ ಮೇಯರ್ ಭೇಟಿ ಮಾಡುತ್ತಾರೆ. ಬೆಂಗಳೂರು ವ್ಯಾಪ್ತಿ ಪಕ್ಷ ಸಂಘಟನೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಇಂದು ಒನ್ ಟು ಒನ್ ಸಭೆ ಮಾಡಿ, ನಮ್ಮ ಮುಖಂಡರ ಜೊತೆ ಸಭೆ ನಡೆಸುತ್ತಾರೆ. ಚುನಾವಣೆ ಸಂಬಂಧ ಮಾಹಿತಿ ಪಡೆಯುತ್ತಾರೆ. ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ. ಮುಂದಿನ ತಿಂಗಳು ವಿಭಾಗವಾರು ಪ್ರವಾಸ ಮಾಡಲಿದ್ದೇವೆ.

ಆ ಭಾಗದ ಮುಖಂಡರ ಭೇಟಿ ಮಾಡಲಿದ್ದಾರೆ ರಂದೀಪ್ ಸಿಂಗ್ ಸುರ್ಜೇವಾಲಾ ಎಂದರು. ಬೆಳಗಾವಿ, ಬಸವಕಲ್ಯಾಣ, ಮಸ್ಕಿ, ಸಿಂದಗಿ ಬಗ್ಗೆ ಚರ್ಚೆ ನಡೆಯಲಿದೆ. ಚುನಾವಣೆ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಿದ್ದು, ಈಗಾಗಲೇ ಸಮಿತಿಗಳನ್ನ ಮಾಡಿದ್ದೇವೆ ಎಂದು ವಿವರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.