ETV Bharat / state

ಕೈ-ತೆನೆ ಮೈತ್ರಿ ಅಂತ್ಯದ ಸುಳಿವು ಕೊಟ್ಟ ಕೆಪಿಸಿಸಿ ಅಧ್ಯಕ್ಷರು! - ಬೆಂಗಳೂರು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಂತ್ಯ ಸಾಧ್ಯತೆ,  ಕೆಪಿಸಿಸಿ ಅಧ್ಯಕ್ಷರಿಂದ ಈ ಬಗ್ಗೆ ಸುಳಿವು, ಕನ್ನಡ ವಾರ್ತೆ, ಈ ಟಿವಿ ಭಾರತ

ಕಳೆದ ಹದಿನಾಲ್ಕು ತಿಂಗಳ ಹಿಂದೆ ಪರಸ್ಪರ ಮೈತ್ರಿ ಮಾಡಿಕೊಳ್ಳುವ ಮೂಲಕ ಅಧಿಕಾರಕ್ಕೇರಿದ್ದ ಕುಮಾರಸ್ವಾಮಿ ಸರ್ಕಾರ ಬಹುಮತವಿಲ್ಲದೆ ಪತನಗೊಂಡಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಹಿನ್ನೆಲೆ ಕೈ-ತೆನೆ ದೋಸ್ತಿ ಅಂತ್ಯಗೊಳಿಸುವ ಬಗ್ಗೆ ಎರಡೂ ಪಕ್ಷದ ನಾಯಕರು ಯೋಚಿಸಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಸುಳಿವು ನೀಡಿದ್ದಾರೆ.

ಕೈ-ತೆನೆ ಮೈತ್ರಿ ಅಂತ್ಯದ ಸುಳಿವು ಕೊಟ್ಟ ಕೆಪಿಸಿಸಿ ಅಧ್ಯಕ್ಷರು
author img

By

Published : Aug 2, 2019, 2:32 AM IST

ಬೆಂಗಳೂರು: ಕಳೆದ 14 ತಿಂಗಳ ಹಿಂದೆ ರಾಜ್ಯದಲ್ಲಿ ಏರ್ಪಟ್ಟಿದ್ದ ಕೈ-ತೆನೆ ಮೈತ್ರಿ ಅಂತ್ಯಗೊಳ್ಳುವ ಹಂತಕ್ಕೆ ತಲುಪಿದೆ. ಈ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುಳಿವು ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಹಿರಿಯ ಕಾಂಗ್ರೆಸ್ ನಾಯಕರ ಸಭೆಯ ಬಳಿಕ ಮಾತನಾಡಿ, ಮೈತ್ರಿ ಉಳಿಸಿಕೊಳ್ಳುವುದು ಅಥವಾ ಮುಗಿಸುವುದು ಹೈಕಮಾಂಡ್​ಗೆ ಬಿಟ್ಟಿದ್ದು ಎಂದಿದ್ದಾರೆ. ಅಲ್ಲದೆ, ಮೈತ್ರಿ ಮುರಿದುಕೊಳ್ಳುವುದಾಗಿ ನೇರವಾಗಿ ಹೇಳದಿದ್ದರೂ ಪರೋಕ್ಷವಾಗಿ ಮೈತ್ರಿ ಮುಂದುವರಿಸುವ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಒಮ್ಮತವಿಲ್ಲ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕೈ-ತೆನೆ ಮೈತ್ರಿ ಅಂತ್ಯದ ಸುಳಿವು ಕೊಟ್ಟ ಕೆಪಿಸಿಸಿ ಅಧ್ಯಕ್ಷರು

ಕಾರಣವೇನು?

2018 ರಲ್ಲಿ ಸ್ವತಂತ್ರವಾಗಿ ವಿಧಾನಸಭೆ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಒಟ್ಟು 78 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಎರಡು ಕ್ಷೇತ್ರಗಳಿಗೆ ನಂತರ ನಡೆದ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಈ ಸಂಖ್ಯೆಯನ್ನು 80ಕ್ಕೆ ಹೆಚ್ಚಿಸಿಕೊಂಡಿತ್ತು. ನಂತರ ಉಮೇಶ್ ಜಾಧವ್ ರಾಜೀನಾಮೆ ಹಾಗೂ ಅವರ ಸ್ಥಾನಕ್ಕೆ ಅವರ ಪುತ್ರ ಕಣಕ್ಕಿಳಿದು ಬಿಜೆಪಿಯಿಂದ ಗೆಲ್ಲುವ ಮೂಲಕ ಸಂಖ್ಯಾಬಲ 79ಕ್ಕೆ ಕುಸಿದಿತ್ತು. ಇದೀಗ ಆಪರೇಷನ್ ಕಮಲಕ್ಕೆ ಸಿಲುಕಿ 13 ಶಾಸಕರನ್ನು ಕಳೆದುಕೊಂಡು ಸಂಖ್ಯಾಬಲದಲ್ಲಿ 66 ಕ್ಕೆ ಕುಸಿದಿದೆ.

ಇದರ ಜೊತೆ ಕಾಂಗ್ರೆಸ್​ನೊಂದಿಗೆ ವಿಲೀನಗೊಂಡಿದ್ದ ಕೆಪಿಜೆಪಿ ಶಾಸಕ ಶಂಕರ್ ಕೂಡ ಇಂದು ಕೈ ಜೊತೆ ಉಳಿದಿಲ್ಲ. ಇನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಿಂದ ಕಾಂಗ್ರೆಸ್ ಗೆ ಲಾಭ ಆಗಿಲ್ಲ. ಈ ಹಿಂದೆ 10 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್, ಈ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಕುಸಿದಿದೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆ ಮುಂದಿನ ಯಾವುದೇ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಕೈ ಜೋಡಿಸುವುದು ಬೇಡ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರು ಬಂದಿದ್ದಾರೆ ಎನ್ನಲಾಗ್ತಿದೆ. ಅಲ್ಲದೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಕೂಡ ಇದೇ ರೀತಿಯಲ್ಲಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮುಗಿಯುವ ದಿನ ಹತ್ತಿರವಾಗುತ್ತಿದೆ ಎಂಬ ಸೂಚನೆ ನೀಡಿದ್ದಾರೆ.

17 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹುಡುಕಾಟ:

ನಾವು ಮುಂದಿನ ಉಪಚುನಾವಣೆಗೆ 17 ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಹುಡುಕುವ ಕಾರ್ಯ ಮಾಡುತ್ತೇವೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆಯುವ ಕೆಲಸ ಮಾತ್ರ ನಾವು ಮಾಡುತ್ತೇವೆ. ಉಳಿದ ಕಾರ್ಯವನ್ನು ಹೈಕಮಾಂಡ್​​ಗೆ ಬಿಡುತ್ತೇವೆ. ಹೈಕಮಾಂಡ್ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಹೈಕಮಾಂಡ್ ಅನುಮತಿ ನೀಡಿದ್ರೆ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆಗೆ ತಯಾರಿ ಮಾಡಿಕೊಳ್ಳುತ್ತೇವೆ ಎಂದು ದಿನೇಶ್ ಗುಂಡೂರಾವ್ ಹೇಳಿರುವುದು ಈ ಬೆಳವಣಿಗೆಗೆ ಇನ್ನಷ್ಟು ಪುಷ್ಠಿ ನೀಡುತ್ತಿದೆ.

ಮೈತ್ರಿ ಇಲ್ಲವೆಂದು ನಾನು ಹೇಳುತ್ತಿಲ್ಲ, ಪಕ್ಷದ ಹೈಕಮಾಂಡ್​ಗೆ ಈ ಸಂಬಂಧ ನಿರ್ಧಾರ ಕೈಗೊಳ್ಳುವ ಅವಕಾಶ ನೀಡುತ್ತೇವೆ. ಮುಂದಿನದನ್ನು ಮುಂದೆ ನಿರ್ಧರಿಸುತ್ತೇವೆ ಎಂದು ಗುಂಡುರಾವ್ ಹೇಳಿದ್ದಾರೆ. ಈ ಮೂಲಕ ಎರಡನೇ ಬಾರಿ ಕೈಜೋಡಿಸಿದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಕ್ತಾಯ ಹಂತ ತಲುಪಿದೆ ಎಂದು ಹೇಳಲಾಗುತ್ತಿದೆ.

Intro:newsBody:ಮೈತ್ರಿ ಮುರಿದುಕೊಳ್ಳುವ ಸೂಚನೆ ಕೊಟ್ಟರು ಕೆಪಿಸಿಸಿ ಅಧ್ಯಕ್ಷರು

ಬೆಂಗಳೂರು: ರಾಜ್ಯದಲ್ಲಿ ಕಳೆದ ಹದಿನಾಲ್ಕು ತಿಂಗಳ ಹಿಂದೆ ಏರ್ಪಟ್ಟಿದ್ದ ಮೈತ್ರಿಯನ್ನು ಮುರಿದುಕೊಳ್ಳುವ ಸೂಚನೆಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ನೀಡಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕರ ಸಭೆಯ ನಂತರ ಮಾತನಾಡಿದ ಅವರು ಮೈತ್ರಿ ಮುರಿದು ಕೊಳ್ಳುವುದಾಗಿ ನೇರವಾಗಿ ಹೇಳದಿದ್ದರೂ ಪರೋಕ್ಷವಾಗಿ ಮೈತ್ರಿ ಮುಂದುವರಿಸುವ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಒಮ್ಮತವಿಲ್ಲ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ವಿಶೇಷ ಎಂದರೆ ರಾಜ್ಯ ನಾಯಕರ ಮೇಲೆ ಈ ಜವಾಬ್ದಾರಿ ಹೊರಿಸಿದ ಅವರು ಮೈತ್ರಿ ಉಳಿಸಿಕೊಳ್ಳುವುದು ಅಥವಾ ಮುಗಿಸುವುದು ಹೈಕಮಾಂಡ್ಗೆ ಬಿಟ್ಟದ್ದು ಎಂದು ವಿವರಿಸಿದರು.
ಕಾರಣವೇನು?
ಸ್ವತಂತ್ರವಾಗಿ ವಿಧಾನಸಭೆ ಚುನಾವಣೆ ಎದುರಿಸಿದ ಕಾಂಗ್ರೆಸ್ 2018 ರಲ್ಲಿ ಒಟ್ಟು 78 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಎರಡು ಕ್ಷೇತ್ರಗಳಿಗೆ ನಂತರ ನಡೆದ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಈ ಸಂಖ್ಯೆಯನ್ನು 80ಕ್ಕೆ ಹೆಚ್ಚಿಸಿಕೊಂಡಿತ್ತು. ನಂತರ ಉಮೇಶ್ ಜಾಧವ್ ರಾಜೀನಾಮೆ ಹಾಗೂ ಅವರ ಸ್ಥಾನಕ್ಕೆ ಅವರ ಪುತ್ರ ಕಣಕ್ಕಿಳಿದು ಬಿಜೆಪಿಯಿಂದ ಗೆಲ್ಲುವ ಮೂಲಕ ಸಂಖ್ಯಾಬಲ 79ಕ್ಕೆ ಕುಸಿದಿತ್ತು ಆದರೆ ಆಪರೇಷನ್ ಕಮಲಕ್ಕೆ ಸಿಲುಕಿ 13 ಶಾಸಕರನ್ನು ಕಳೆದುಕೊಂಡು ಇದೀಗ ಸಂಖ್ಯಾಬಲದಲ್ಲಿ 66 ಕ್ಕೆ ಕುಸಿದಿದೆ. ಇವರ ಜೊತೆ ಕಾಂಗ್ರೆಸ್ ಜೊತೆ ವಿಲೀನಗೊಂಡಿದ್ದ ಕೆಪಿಜೆಪಿ ಶಾಸಕ ಶಂಕರ್ ಕೂಡ ಕೈ ಜೊತೆ ಉಳಿದಿಲ್ಲ. ಇನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಿಂದ ಕಾಂಗ್ರೆಸ್ಗೆ ಲಾಭ ಆಗಿಲ್ಲ. 10 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಕುಸಿದಿದೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆ ಮುಂದಿನ ಯಾವುದೇ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಕೈಜೋಡಿಸುವುದು ಬೇಡ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರು ಬಂದಿದ್ದಾರೆ. ಅಲ್ಲದೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಕೂಡ ಇದೇ ಧಾಟಿಯಲ್ಲಿ ಮಾತನಾಡಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮುಗಿಯುವ ದಿನ ಹತ್ತಿರವಾಗುತ್ತದೆ ಎಂಬ ಸೂಚನೆ ನೀಡುತ್ತಿದೆ.
17 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹುಡುಕಾಟ
ನಾವು ಮುಂದಿನ ಉಪಚುನಾವಣೆಗೆ 17 ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಹುಡುಕುವ ಕಾರ್ಯ ಮಾಡುತ್ತೇವೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಕೂಡ ಚರ್ಚಿಸಿದ್ದೇವೆ. ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆಯುವ ಕಾರ್ಯವನ್ನು ಮಾತ್ರ ನಾವು ಮಾಡುತ್ತೇವೆ ಉಳಿದ ಕಾರ್ಯವನ್ನು ಹೈಕಮಾಂಡಿಗೆ ಬಿಡುತ್ತೇವೆ. ಹೈಕಮಾಂಡ್ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ಕೊಟ್ಟರೆ ಎಲ್ಲಾ ಕ್ಷೇತ್ರದಲ್ಲೂ ನಮ್ಮ ಸಿದ್ಧತೆ ಹಾಗೂ ಸ್ಪರ್ಧೆಗೆ ತಯಾರಿಯನ್ನು ಮಾಡಿಕೊಳ್ಳುತ್ತೇವೆ ಎಂದು ದಿನೇಶ್ ಗುಂಡೂರಾವ್ ಹೇಳಿರುವುದು ಈ ಬೆಳವಣಿಗೆಗೆ ಇನ್ನಷ್ಟು ಪುಷ್ಟಿ ನೀಡುತ್ತಿದೆ.
ಮೈತ್ರಿ ಇಲ್ಲ ಎಂದು ನಾನು ಹೇಳುತ್ತಿಲ್ಲ ಪಕ್ಷದ ಹೈಕಮಾಂಡಿಗೆ ಈ ಸಂಬಂಧ ನಿರ್ಧಾರ ಕೈಗೊಳ್ಳುವ ಅವಕಾಶ ನೀಡುತ್ತೇವೆ. ಮುಂದಿನದನ್ನು ಮುಂದೆ ನಿರ್ಧರಿಸುತ್ತೇವೆ ಎಂದಿದ್ದಾರೆ.
ಈ ಮೂಲಕ ಎರಡನೇ ಬಾರಿ ಕೈಜೋಡಿಸಿದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಕ್ತಾಯ ಹಂತ ತಲುಪಿದೆ ಎಂದು ಹೇಳಲಾಗುತ್ತಿದೆ.
Conclusion:news

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.