ಬೆಂಗಳೂರು: ಜೆಪಿ ಪಾರ್ಕ್ ವಾರ್ಡ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.
ಸಿದ್ದರಾಮಯ್ಯ ರಾಜ್ಯ ದೇಶ ಕಂಡ ಪ್ರಭಾವಿ ನಾಯಕರಾಗಿದ್ದಾರೆ. ಚುನಾವಣಾ ಆಯೋಗ ಪಕ್ಷಪಾತ ಮಾಡಿದೆ ಹಾಗೂ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ ತರಲಾಗಿದೆ ಎಂದು ಆಪಾದಿಸಿದರು.
ಈ ಕ್ಷೇತ್ರದಲ್ಲಿ ಪ್ರಬುದ್ಧ ಮತದಾರರು ಇದ್ದು, ಕಾಂಗ್ರೆಸ್ ಆಡಳಿತ ಕಾಲದಲ್ಲಿ ಅಭಿವೃದ್ಧಿ ಹೊಂದಿರುವುದನ್ನ ಜನತೆ ಮನಗಂಡು ಬೆಂಬಲಿಸುವರೆಂಬ ವಿಶ್ವಾಸವಿದೆ ಎಂದರು.