ETV Bharat / state

ಇನ್ವೆಸ್ಟ್ ಕರ್ನಾಟಕ ಮೂಲಕ ಸರ್ಕಾರ ಕೊಡಿಸಿರುವ ಜಮೀನಿನ ಮಾಹಿತಿಯ ಶ್ವೇತ ಪತ್ರ ಹೊರಡಿಸಲಿ: ಲಕ್ಷ್ಮಣ್ ಆಗ್ರಹ

ಬೆಂಗಳೂರಿನಲ್ಲಿ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯ ಸರ್ಕಾರ ಯಾರಿಗೆ ಎಷ್ಟು ಜಮೀನು ಕೊಡಿಸಿದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ಎಂ ಲಕ್ಷ್ಮಣ್ ಆಗ್ರಹಿಸಿದ್ದಾರೆ.

kpcc-spokeperson-lakshman-press-meet
ಇನ್ವೆಸ್ಟ್ ಕರ್ನಾಟಕ ಮೂಲಕ ಸರ್ಕಾರ ಕೊಡಿಸಿರುವ ಜಮೀನಿನ ಮಾಹಿತಿಯ ಶ್ವೇತ ಪತ್ರ ಹೊರಡಿಸಲಿ: ಲಕ್ಷ್ಮಣ್ ಆಗ್ರಹ
author img

By

Published : Nov 16, 2022, 6:12 PM IST

ಬೆಂಗಳೂರು : ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯ ಸರ್ಕಾರ ಯಾರಿಗೆ ಎಷ್ಟು ಜಮೀನು ಕೊಡಿಸಿದೆ ಎಂಬ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಸಂವಹನ ವಿಭಾಗ ಉಪಾಧ್ಯಕ್ಷರಾದ ರಮೇಶ್ ಬಾಬು ಜತೆ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಘೋಷಣೆ ಆಗಿದ್ದು 6.77 ಲಕ್ಷ ಕೋಟಿ, ಹೂಡಿಕೆ ಆಗಿದ್ದು 54 ಸಾವಿರ ಕೋಟಿ. ಈಗ 2022ರಲ್ಲಿ ಘೋಷಣೆ ಆಗಿರುವುದು 9.98 ಲಕ್ಷ ಕೋಟಿ ಅದರಲ್ಲಿ ಮಾಡಿಕೊಂಡಿರುವ ಒಪ್ಪಂದ 2.83 ಲಕ್ಷ ಕೋಟಿ ಎಂದು ಹೇಳುತ್ತಿದ್ದು, 7 ಲಕ್ಷ ಮಂದಿಗೆ ಉದ್ಯೋಗ ಸಿಗಲಿದೆ ಎಂದು ಸರ್ಕಾರ ಹೇಳುತ್ತಿದೆ. ಇದೆಲ್ಲವೂ ರಾಜಕೀಯ ಗಿಮಿಕ್ ಎಂದು ಆರೋಪಿಸಿದರು.

ಸರ್ಕಾರ ಶ್ವೇತಪತ್ರ ಹೊರಡಿಸಬೇಕು : ಈ ಬಂಡವಾಳ ಹೂಡಿಕೆದಾರರ ಕಾರ್ಯಕ್ರಮಕ್ಕಾಗಿ ಪ್ರಪಂಚದಾದ್ಯಂತ ಇವರು ಪ್ರಚಾರಕ್ಕಾಗಿ ಖರ್ಚು ಮಾಡಿರುವ ಹಣ 300 ಕೋಟಿ. ಭೂ ಬ್ಯಾಂಕ್ ಮೂಲಕ 1.5 ಲಕ್ಷ ಎಕರೆ ಮೀಸಲಿಟ್ಟಿರುವುದಾಗಿ ಹೇಳಿದ್ದಾರೆ. ಈ ಹಿಂದೆಯೂ ಭೂ ಬ್ಯಾಂಕ್ ಎಂದು ಮಾಡಿ ಕೈಗಾರಿಕೆಗೂ ನೀಡಲಿಲ್ಲ, ಎಲ್ಲವೂ ರಿಯಲ್ ಎಸ್ಟೇಟ್ ಪಾಲಾಯಿತು. ದೇವನಹಳ್ಳಿ ಸುತ್ತಮುತ್ತ ಸಾವಿರಾರು ಎಕರೆಯನ್ನು ರೈತರಿಂದ ಕಸಿದು ರಿಯಲ್ ಎಸ್ಟೇಟ್ ನವರಿಗೆ ನೀಡಿದ್ದಾರೆ. ಸಚಿವ ಮುರುಗೇಶ್ ನಿರಾಣಿ ಅವರ ಪುತ್ರ ಈ ಕಾರ್ಯಕ್ರಮದಲ್ಲಿ ದೊಡ್ಡ ಪಾತ್ರ ವಹಿಸಿದ್ದರು. ಆ ಸಮಿತಿಯಲ್ಲಿ ಅವರು ಇದ್ದು, ಕಾರ್ಯಕ್ರಮದ ಆಯೋಜನೆಯಲ್ಲೂ ಅವರ ಪಾತ್ರವಿತ್ತು. ಸಚಿವರ ಪುತ್ರ ಎನ್ನುವುದು ಹೊರತಾಗಿ ಉಳಿದ ಯಾವುದೇ ಅರ್ಹತೆ ಅವರಿಗೆ ಇಲ್ಲವಾಗಿದೆ. ಅವರನ್ನು ಯಾಕೆ ಇದರಲ್ಲಿ ಭಾಗವಹಿಸಲು ಅವಕಾಶ ನೀಡಿ ಅವರ ಮೂಲಕ ಯಾರಿಗೆ ಎಷ್ಟು ಎಕರೆ ಜಮೀನು ಕೊಡಿಸಿದ್ದೀರಿ ಎಂದು ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸುತ್ತದೆ ಎಂದರು.

ಈ ಕಾರ್ಯಕ್ರಮದಲ್ಲಿ ಅತಿಥಿಗಳ ವಾಸ್ತವ್ಯಕ್ಕೆ ಸ್ಟಾರ್ ಹೋಟೇಲ್ ಗಳಿಗಾಗಿ 85 ಕೋಟಿಯಷ್ಟು ಖರ್ಚು ಮಾಡಿದ್ದಾರೆ. ಮೊನ್ನೆ ಪ್ರಧಾನಿ ಅವರು 4 ಗಂಟೆ ಆಗಮಿಸಿದ್ದಕ್ಕೆ ಜಾಹೀರಾತು ಹೊರತುಪಡಿಸಿ 48 ಕೋಟಿ ಖರ್ಚು ಮಾಡಲಾಗಿದೆ. ಇದು ಜನಸಾಮಾನ್ಯರ ಹಣವಾಗಿದೆ. ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ ಸರ್ಕಾರ ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 144 ಪೊಲೀಸ್ ಠಾಣೆಗಳಿವೆ. 44 ಟ್ರಾಫಿಕ್ ಪೊಲೀಸ್ ಠಾಣೆಗಳಿವೆ. ಒಟ್ಟು 188 ಠಾಣೆಗಳಿವೆ. ಇವುಗಳಿಂದ ಭ್ರಷ್ಟಾಚಾರದ ಮೂಲಕ ಬರುತ್ತಿರುವ ಆದಾಯ ವಾರ್ಷಿಕವಾಗಿ 250 ಕೋಟಿ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಹುದ್ದೆಗೆ 1.50 ಕೋಟಿ. ಉಪ್ಪಾರಪೇಟೆ ಠಾಣೆಯಲ್ಲಿ 1.25 ಕೋಟಿ, ಬಸವೇಶ್ವರ ನಗರ 1 ಕೋಟಿ. ಕೇವಲ ವರ್ಗಾವಣೆ ಧಂದೆಯಲ್ಲಿ 188 ಪೊಲೀಸ್ ಠಾಣೆಗಳ ಮೂಲಕ 250 ಕೋಟಿ ವಸೂಲಿ ಮಾಡಲಾಗಿದೆ. ಈ ವಿಚಾರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಹಸ್ಯವಾಗಿ ನೀಡಿರುವ ಮಾಹಿತಿ ಎಂದು ಹೇಳಿದರು.

ಕಳೆದ ಮೂರುವರೆ ವರ್ಷಗಳಿಂದ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾದ ನಂತರ ಸುಮಾರು 1 ಲಕ್ಷ ಕೋಟಿ ವಸೂಲಿ ಮಾಡಲಾಗಿದೆ. ಇದು ಹಾಲಿ 6 ಸಚಿವರು ಇಬ್ಬರು ಆಪ್ತರ ಬಳಿ ಈ ಹಣವಿದೆ. ಈ ವಿಚಾರವಾಗಿ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಇಡಿ ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು. ಆದರೆ 8 ಜನರ ಹೆಸರನ್ನು ನಾವು ನೀಡುತ್ತೇವೆ ಎಂದು ಸವಾಲು ಹಾಕುತ್ತೇವೆ ಎಂದರು.

ರಸ್ತೆ ಗುಂಡಿ ಮುಚ್ಚುವಲ್ಲಿ ಸರ್ಕಾರದಿಂದ ಭ್ರಷ್ಟಾಚಾರ : ಬಿಬಿಎಂಪಿ ವ್ಯಾಪ್ತಿಯಲ್ಲಿ 15 ಸಾವಿರ ಕಿ.ಮೀ ರಸ್ತೆಗಳಿದ್ದು, 32 ಸಾವಿರ ರಸ್ತೆಗುಂಡಿಗಳಿವೆ ಎಂದು ಸರ್ಕಾರ ಹೈಕೋರ್ಟ್ ಗೆ ನೀಡಿರುವ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ 10 ಸಾವಿರ ರಸ್ತೆಗುಂಡಿ ಮುಚ್ಚಲಾಗಿದೆ ಎಂದು ಹೇಳಿದ್ದಾರೆ. ಅದಕ್ಕೆ ಖರ್ಚಾಗಿರುವ ಹಣ 790 ಕೋಟಿ. ಇನ್ನು ಉಳಿದ 22 ಸಾವಿರ ಕೋಟಿ ರಸ್ತೆಗುಂಡಿ ಮುಚ್ಚಲು 1500 ಕೋಟಿ ಬೇಕಾಗುತ್ತದೆ. ಒಟ್ಟಾರೆ 2200 ಕೋಟಿ ಯನ್ನು ರಸ್ತೆ ಗುಂಡಿ ಮುಚ್ಚಲು ಬೇಕಾಗಿದೆ. ಕೇಂದ್ರದ ಇಂಡಿಯನ್ ರೋಡ್ ಕಾಂಗ್ರೆಸ್ ಸಂಸ್ಥೆ ಪ್ರಕಾರ 1 ಕಿ.ಮೀ ರಸ್ತೆಯ ಡಾಂಬರೀಕರಣಕ್ಕೆ 1.5 ಕೋಟಿ ವೆಚ್ಚ ಬೀಳುತ್ತದೆ. ಇವರು 1 ಕಿ.ಮೀ ರಸ್ತೆಯ ರಸ್ತೆಗುಂಡಿ ಮುಚ್ಚಲು 2.25 ಕೋಟಿ ವೆಚ್ಚ ಮಾಡಿದ್ದಾರೆ. ಈ ಸರ್ಕಾರದಲ್ಲಿ ಯಾವ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಹೇಳಿದರು.

ಪ್ರತಾಪ್ ಸಿಂಹ ವಿರುದ್ಧ ಕಿಡಿ : ಮೈಸೂರಿನಲ್ಲಿ ಕಿಡಿ ಹೊತ್ತಿಸಲು ಪ್ರತಾಪ್ ಸಿಂಹ ಸಂಸದರಾಗಿದ್ದಾರೆ. ಈ ಹಿಂದಿನ ಸರ್ಕಾರಗಳು ಮೈಸೂರು ಸಿಟಿಯನ್ನು ಪಾರಂಪರಿಕ ನಗರಿ ಎಂದು ಪರಿಗಣಿಸಬೇಕು ಎಂದು ಆರ್ಕಿಯಾಲಜಿ ಇಲಾಖೆಗೆ ಪ್ರಸ್ತಾವನೆ ನೀಡಲಾಗಿತ್ತು. ಈ ಪರ್ಸ್ತಾವನೆಯಲ್ಲಿ 350 ಕಟ್ಟಡಗಳನ್ನು ಪಾರಂಪರಿಕ ಕಟ್ಟಡ ಎಂದು ಗುರುತಿಸಿದ್ದು, ಇದರಲ್ಲಿ ಅರಮನೆ ಸೇರಿದಂತೆ 180 ಕಟ್ಟಡಗಳು ಸರ್ಕಾರಿ ಕಟ್ಟಡಗಳಾಗಿವೆ. ಇಡೀ ಪ್ರಪಂಚದಲ್ಲಿ 8 ಬಗೆಯ ಆರ್ಕಿಟೆಕ್ಚರ್ ಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದರು.

ಇದಕ್ಕೆ ರಾಮದಾಸ್ ಅವರು ಸ್ಪಷ್ಟೀಕರಣ ನೀಡಿದ್ದು, ಇದು ಯಾವುದೇ ಧರ್ಮದ ಪ್ರತೀಕವಾಗಿಲ್ಲ. ಇದಕ್ಕೂ ಮಸೀದಿಗೆ ಸಂಬಂಧವಿಲ್ಲ ಹಾಗಾಗಿ ಇದನ್ನು ಒಡೆಯುವ ಪ್ರಶ್ನೆಯೇ ಇಲ್ಲ. ಪ್ರತಾಪ್ ಸಿಂಹ ಅವರು ರಾಜಕೀಯ ಮಾಡುವ ನಿಟ್ಟಿನಲ್ಲಿ ಹೇಳಿಕೆ ನೀಡುತ್ತಿದ್ದಾರೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಎಂದರು.

ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಹೇಳುತ್ತಾರೆ. ಅವರು ಏನು ಅನ್ಯಾಯ ಮಾಡಿದ್ದಾರೆ ಗೊತ್ತಿಲ್ಲ. ಶ್ರೀರಾಮುಲು ಅವರೇ ನೀವು ಮುಂದಿನ ಚುನಾವಣೆಯಲ್ಲಿ 25 ಸಾವಿರ ಮತಗಳ ಅಂತರದಲ್ಲಿ ಸೋಲುವುದು ನಿಶ್ಚಿತ ಎಂದು ಹೇಳಿದರು.

ಶಾಸಕ ಪ್ರಿಯಾಂಕ್​ ಖರ್ಗೆ ವಿರುದ್ಧ ಷಡ್ಯಂತ್ರ : ರಮೇಶ್ ಬಾಬು ಮಾತನಾಡಿ, ಕಳೆದ ಒಂದು ವಾರದಿಂದ ಕಲ್ಬರ್ಗಿಯ ಚಿತ್ತಾಪುರದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ನಾಪತ್ತೆಯಾಗಿದ್ದಾರೆ ಎಂಬ ಷಡ್ಯಂತ್ರ ಮಾಡಿದ್ದಾರೆ. ಈಗ ಗೋವಿಂದ ಕಾರಜೋಳ ಅವರ ಕ್ಷೇತ್ರದಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ದೂರು ದಾಖಲಾಗಿದೆ. ಅಲ್ಲಿ ಪೋಸ್ಟರ್ ಅಂಟಿಸಿದವರ ವಿರುದ್ಧ ಪೊಲೀಸರು ಕ್ರಮ ಜರುಗಿಸಿದ್ದು, ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಪೋಸ್ಟರ್ ಅಂಟಿಸಿ ಪ್ರತಿಭಟನೆ ಮಾಡಿದವರ ವಿರುದ್ಧ ಯಾವುದೇ ಕ್ರಮ ಜರುಗಿಸಿರಲಿಲ್ಲ. ಅವರಂತೆ ಜನ ಪೋಸ್ಟರ್ ಅಂಟಿಸಲು ಆರಂಭಿಸಿದರೆ ಮೊದಲ ಪೋಸ್ಟರ್ ಬೀಳುವುದು ಶಿಗ್ಗಾಂವ್ ನಲ್ಲಿ ಎಂದರು. ಮುಖ್ಯಮಂತ್ರಿಗಳು ಎಷ್ಟು ದಿನ ಶಿಗ್ಗಾಂವ್ ಗೆ ಹೋಗಿ ಕೆಲಸ ಮಾಡಿದ್ದಾರೆ ಎಂದು ಹೇಳಬೇಕಾಗುತ್ತದೆ. ನಾವು ಅವರಂತೆ ಕಾಣೆಯಾಗಿದ್ದಾರೆ ಎಂಬ ಅಭಿಯಾನ ಮಾಡುವುದಿಲ್ಲ ಎಂದರು.

ಇದನ್ನೂ ಓದಿ : ಎಲೆಕ್ಟ್ರಾನಿಕ್‌ ವಲಯದಲ್ಲಿ 36 ಸಾವಿರ ಕೋಟಿ ರೂ.ಗೂ ಹೆಚ್ಚು ಹೂಡಿಕೆ: ಸಚಿವ ಅಶ್ವತ್ಥನಾರಾಯಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.