ETV Bharat / state

ಸಮಾಜಘಾತುಕ ಶಕ್ತಿಗಳು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ: ಈಶ್ವರ್ ಖಂಡ್ರೆ - ಕಾಂಗ್ರೆಸ್​ನಿಂದ ಮಡಿಕೇರಿ ಚಲೋ

ಕಾಂಗ್ರೆಸ್ ನೋಡಿ ಬಿಜೆಪಿಗೆ ಭಯ ಶುರುವಾಗಿದೆ. ಹಾಗಾಗಿ ವಾಮ ಮಾರ್ಗದ ಮೂಲಕ ಭಯ ಬೀಳಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಮೇಲೆ ಸಮಾಜಘಾತುಕ ಶಕ್ತಿಗಳು ಮೊಟ್ಟೆ ಎಸೆದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

KPCC Working President Ishwar Khandre
ಈಶ್ವರ್ ಖಂಡ್ರೆ
author img

By

Published : Aug 21, 2022, 3:19 PM IST

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಸಮಾಜಘಾತುಕ ಶಕ್ತಿಗಳು ಮೊಟ್ಟೆ ಎಸೆದಿದ್ದಾರೆ. ಇದೊಂದು ಹೀನ ಕೃತ್ಯ. ಇದನ್ನು ನಾನು ಖಂಡಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.

ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನೆರೆ ವಿಚಾರವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ಅಧ್ಯಯನ ಮಾಡಲು ಹೋಗಿದ್ರು. ಅಂದು ಅವರ ಕಾರಿನ ಮೇಲೆ ಕಿಡಿಗೇಡಿಯೊಬ್ಬ ಮೊಟ್ಟೆ ಎಸೆದಿದ್ದಾನೆ. ಸರ್ಕಾರದ ಪ್ರಾಯೋಜಕತ್ವದಲ್ಲಿ ಈ ಕೃತ್ಯ ನಡೆದಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ನೋಡಿ ಬಿಜೆಪಿಗೆ ಭಯ ಶುರುವಾಗಿದೆ. ಹಾಗಾಗಿ ವಾಮ ಮಾರ್ಗದ ಮೂಲಕ ಭಯ ಬೀಳಿಸುತ್ತಿದ್ದಾರೆ. ಆದ್ರೆ ಬಿಜೆಪಿಯ ಈ ತಂತ್ರಕ್ಕೆ ಕಾಂಗ್ರೆಸ್ ಹೆದರಲ್ಲ ಎಂದು ಗುಡುಗಿದರು.

ಕೆಲ ಕಿಡಿಗೇಡಿಗಳು ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿದರೆ ಸಂಪತ್​ ಎಂಬಾತ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾನೆ. ಸಿದ್ದರಾಮಯ್ಯ ಕೊಡಗಿಗೆ ಹೋಗಿದ್ದು, ರಾಜಕೀಯ ಮಾಡುವುದಕ್ಕೆ ಅಲ್ಲ. ಅಲ್ಲಿ ನೆರೆಯಿಂದ ಹಾನಿ ಉಂಟಾಗಿದೆ. ಜನರು ಕಷ್ಟದಲ್ಲಿದ್ದಾರೆ. ಅದರ ಬಗ್ಗೆ ಅಧ್ಯಯನ ಮಾಡುವುದಕ್ಕೆ ಹೋಗಿದ್ರು. ಆದ್ರೆ ಅಲ್ಲಿ ಅವರ ಮೇಲೆಯೇ ಮೊಟ್ಟೆ ಎಸೆಯಲಾಗಿದೆ ಎಂದು ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತ ಎಂಬ ವಿಚಾರವಾಗಿ ಮಾತನಾಡಿ, ಸಂಪತ್ ಯಾರ ಜೊತೆ ನಿಂತು ಫೋಟೋ ತೆಗೆಸಿಕೊಂಡಿದ್ದಾನೆ. ಆರ್​​ಎಸ್​​ಎಸ್​, ಬಿಜೆಪಿ ಶಾಸಕರ ಜೊತೆ ನಿಂತು ಫೋಟೋ ತೆಗೆಸಿಕೊಂಡಿದ್ದಾನೆ. ಆ ವ್ಯಕ್ತಿಯನ್ನು ಜೈಲಿನಿಂದ ಬಿಡಿಸಿಕೊಂಡು ಬಂದವರು ಯಾರು?. ಇದೇ 26 ಕ್ಕೆ ಮಡಿಕೇರಿಯಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ಮಾಡುತ್ತೇವೆ. ಮಡಿಕೇರಿ ಚಲೋ ರೂಪುರೇಷೆ ಬಗ್ಗೆ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್​ ಪ್ರತಿಕ್ರಿಯೆ

ಜಟಾಪಟಿ ಇಲ್ಲ.. ಕಾಂಗ್ರೆಸ್​​ನಲ್ಲಿ ಲಿಂಗಾಯತ ನಾಯಕತ್ವ ಫೈಟ್ ವಿಚಾರವಾಗಿ ಮಾತನಾಡಿ, ನನ್ನ ಹಾಗೂ ಎಂ ಬಿ ಪಾಟೀಲ್​​ ನಡುವೆ ಯಾವುದೇ ಜಟಾಪಟಿ ಇಲ್ಲ. ನಾವಿಬ್ಬರು ಸಹೋದರರಂತೆ ಇದ್ದೇವೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತರಾಗಿ ದುಡಿಯುತ್ತಿದ್ದೇವೆ. ಸೇವೆ ಮುಂದುವರೆಸಿಕೊಂಡು ಹೋಗುತ್ತೇವೆ‌. ಯಾವುದೇ ಸ್ಥಾನ ಕೊಟ್ಟರೂ, ಪ್ರಾಮಾಣಿಕತೆ, ಸೇವಾ ಮನೋಭಾವದಿಂದ ಕೆಲಸ ಮಾಡ್ತೇವೆ ಎಂದು ಈಶ್ವರ್​ ಖಂಡ್ರೆ ಸ್ಪಷ್ಟಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.