ETV Bharat / state

ಬೆಂಗಳೂರು ಸಮಗ್ರ ಅಭಿವೃದ್ಧಿ ಅಲ್ಲ, ಬಿಜೆಪಿ ಕ್ಷೇತ್ರದ ಅಭಿವೃದ್ಧಿ ಮಾತ್ರ ಆಗಿದೆ: ರಾಮಲಿಂಗಾ ರೆಡ್ಡಿ - ಬಿಜೆಪಿ ಸರ್ಕಾರದ ವಿರುದ್ಧ ರಾಮಲಿಂಗಾ ರೆಡ್ಡಿ ಗರಂ

ಬಿಜೆಪಿಯ ಇಂದಿನ ಹಾಗೂ ಈ ಹಿಂದೆ ಇದ್ದ ಮುಖ್ಯಮಂತ್ರಿಗಳು ಈ ರೀತಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ನಮ್ಮ ಕ್ಷೇತ್ರದ ಜನರು ಕೂಡ ತೆರಿಗೆ ಪಾವತಿಸುತ್ತಿದ್ದು, ಬಿಜೆಪಿ ಸರ್ಕಾರದಲ್ಲಿ ಇಂತಹ ತಾರತಮ್ಯ ನಿರಂತರವಾಗಿ ನಡೆಯುತ್ತಿದೆ ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.

ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ
author img

By

Published : Mar 12, 2022, 5:50 PM IST

ಬೆಂಗಳೂರು : ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಬಿಜೆಪಿ ಸರ್ಕಾರ ಸಮಗ್ರ ಬೆಂಗಳೂರು ಅಭಿವೃದ್ಧಿ ಎಂದು ಹೇಳಿಕೊಳ್ಳುವ ಬದಲು, ಬಿಜೆಪಿ ಶಾಸಕರ ಕ್ಷೇತ್ರದ ಅಭಿವೃದ್ಧಿ ಎಂದು ಹೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ನಿರಂತರವಾಗಿ ತಾರತಮ್ಯ ಮಾಡುತ್ತಿದೆ. ಮುಖ್ಯಮಂತ್ರಿಗಳು ಈ ತಾರತಮ್ಯವನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಸುದ್ದಿಗೋಷ್ಟಿ

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಶಾಸಕರ 15 ಕ್ಷೇತ್ರಗಳಿಗೆ ಒಟ್ಟು 9,888 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದು, ಕಾಂಗ್ರೆಸ್ ಶಾಸಕರ 12 ಕ್ಷೇತ್ರಗಳಿಗೆ 2,186.48 ಕೋಟಿ ರೂಪಾಯಿ ನೀಡಿದೆ. ಇನ್ನು ಜೆಡಿಎಸ್ ಶಾಸಕರಿರುವ ದಾಸರಹಳ್ಳಿಗೆ 288.5 ಕೋಟಿ ಕೊಟ್ಟಿದ್ದಾರೆ. ಆ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಕ್ಷೇತ್ರಗಳಿಗಿಂತ 5 ಪಟ್ಟು ಹೆಚ್ಚಿನ ಅನುದಾನವನ್ನು ಬಿಜೆಪಿಯವರಿಗೆ ನೀಡಲಾಗಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಬೆಂಗಳೂರಿಗೆ 7,200 ಕೋಟಿ, ಸಮ್ಮಿಶ್ರ ಸರ್ಕಾರದಲ್ಲಿ 1 ಸಾವಿರ ಕೋಟಿ ಹಣವನ್ನು ವಿವಿಧ ಕ್ಷೇತ್ರಗಳಿಗೆ ಅನುದಾನವಾಗಿ ನೀಡಿತ್ತು. ಈ ಹಣವನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೊಡಲಾಗಿದ್ದ ಅನುದಾವನ್ನು ಹಿಂಪಡೆದು, ಮುಖ್ಯಮಂತ್ರಿಗಳ ನಗರೊತ್ಥಾನ ಮರುಹಂಚಿಕೆ ಮಾಡಲಾಗಿದೆ. ಇತ್ತೀಚೆಗೆ ಅಮೃತ್ ನಗರ ಯೋಜನೆ ಅಡಿಯಲ್ಲಿ 3,600 ಕೋಟಿ ಕೊಟ್ಟಿದ್ದಾರೆ. 1,500 ಕೋಟಿಯನ್ನು ಮಳೆ ನೀರುಗಾಲುವೆಗಾಗಿ ನೀಡಲಾಗಿದೆ ಎಂದು ವಿವರಿಸಿದರು.

ಈ ಮೂರು ಯೋಜನೆಗಳು ಸೇರಿದಂತೆ ಬಿಜೆಪಿ ಶಾಸಕರ ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ 821.75 ಕೋಟಿ, ಬಸವನಗುಡಿ 377.5 ಕೋಟಿ, ಬೊಮ್ಮನಹಳ್ಳಿ 915.83, ಸಿವಿ ರಾಮನ್ ನಗರ 485.93, ಚಿಕ್ಕಪೇಟೆ 380.4, ಗೋವಿಂದರಾಜನಗರ 630.5, ಮಹದೇವಪುರ 752.85, ಮಲ್ಲೇಶ್ವರಂ 403.6, ಪದ್ಮನಾಭನಗರ 415.24, ರಾಜಾಜಿನಗರ 335.2, ಯಲಹಂಕ, 665.56, ಕೆ.ಆರ್ ಪುರಂ 926.7, ಮಹಾಲಕ್ಷ್ಮಿ ಬಡಾವಣೆ 527.25, ರಾಜರಾಜೇಶ್ವರಿ ನಗರ 1253.35, ಯಶವಂತಪುರ 1046.48 ಕೋಟಿ ಅನುದಾನ ವಿತರಿಸಲಾಗಿದೆ ಎಂದು ತಿಳಿಸಿದರು.

ಉಳಿದಂತೆ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಾದ ಬಿಟಿಎಂ ಬಡಾವಣೆ 232.84, ಬ್ಯಾಟರಾಯನಪುರ 253.39, ಚಾಮರಾಜಪೇಟೆ 136, ಗಾಂಧಿನಗರ 202.41, ಹೆಬ್ಬಾಳ 196.84, ಜಯನಗರ 182, ಪುಲಕೇಶಿನಗರ 140.95, ಸರ್ವಜ್ಞನಗರ 225.52, ಶಾಂತಿನಗರ 159.75, ವಿಜಯನಗರ 198.26, ಆನೇಕಲ್ 10, ಶಿವಾಜಿ ನಗರಕ್ಕೆ 248.52 ಕೋಟಿ ನೀಡಲಾಗಿದೆ.ಇನ್ನು ಜೆಡಿಎಶ್ ಶಾಸಕರಿರುವ ದಾಸರಹಳ್ಳಿ ಕ್ಷೇತ್ರಕ್ಕೆ 288.5 ಕೋಟಿ ಅನುದಾನ ಕೊಡಲಾಗಿದೆ.

ಹೀಗೆ ಬಿಜೆಪಿಯ ಇಂದಿನ ಹಾಗೂ ಈ ಹಿಂದೆ ಇದ್ದ ಮುಖ್ಯಮಂತ್ರಿಗಳು ಈ ರೀತಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ನಮ್ಮ ಕ್ಷೇತ್ರದ ಜನರು ಕೂಡ ತೆರಿಗೆ ಪಾವತಿಸುತ್ತಿದ್ದು, ಬಿಜೆಪಿ ಸರ್ಕಾರದಲ್ಲಿ ಇಂತಹ ತಾರತಮ್ಯ ನಿರಂತರವಾಗಿ ನಡೆಯುತ್ತಿದೆ. ಈ ವಿಚಾರವಾಗಿ ನಾನು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಹಾಗೂ ಈ ವಿಚಾರವನ್ನು ವಿಧಾನಸಭೆ ಕಲಾಪದಲ್ಲಿ ಚರ್ಚಿಸುತ್ತೇನೆ ಎಂದು ತಿಳಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.