ಬೆಂಗಳೂರು: ಕೆಪಿಎಸ್‌ಸಿ ಈ ಹಿಂದೆ ಅರ್ಜಿ ಆಹ್ವಾನಿಸಿದ ಗ್ರೂಪ್ ಸಿ ಹುದ್ದೆಗಳಿಗೆ, ಗ್ರೂಪ್ ಬಿ ಹಂತದ 238 ಹುದ್ದೆಗಳನ್ನು ಸೇರಿಸಿ ಹೊಸ ಅಧಿಸೂಚನೆ ಹೊರಡಿಸಿದೆ. 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಕೆಪಿಎಸ್‌ಸಿ ಉಳಿಕೆ ವೃಂದದಲ್ಲಿ ಮತ್ತೆ ನೂರು ಹುದ್ದೆಗಳನ್ನು ಸೇರ್ಪಡೆಗೊಳಿಸಲು ನಿರ್ಧರಿಸಿದೆ. ಪ್ರಸ್ತುತ ಒಟ್ಟು ಉಳಿದ ಮೂಲವೃಂದದ 229 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ವಿಧಾನ, ವಿದ್ಯಾರ್ಹತೆ, ವಯೋಮಿತಿ ಸೇರಿದಂತೆ ಹೆಚ್ಚಿನ ವಿವರಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಆನ್‌ಲೈನ್ ಅರ್ಜಿ: ಆನ್‌ಲೈನ್ ಅರ್ಜಿಯನ್ನು ವೆಬ್ ವಿಳಾಸ https://www.schooleducation.kar.nic.in/ ಮೂಲಕ ಸಲ್ಲಿಸಬೇಕು. ಆನ್‌ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದ ಮೂಲಕ ಅರ್ಜಿ ಸಲ್ಲಿಸುವಂತೆ ಇಲ್ಲ. ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ನೀಡಲಾದ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಂಡು, ಕೂಲಂಕಷವಾಗಿ ಓದಿ ಅರ್ಥೈಸಿಕೊಂಡು, ಅದರಂತೆ ಸೂಕ್ತ ಸಿದ್ಧತೆಯೊಂದಿಗೆ ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕೆಪಿಎಸ್‌ಸಿ: 106 ಗೆಜೆಟೆಡ್ ಪ್ರೊಬೇಷನರಿ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ