ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಲೆಕ್ಕ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 242 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇರ ನೇಮಕಾತಿ ಮೂಲಕ ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 242 ಲೆಕ್ಕ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ರಾಜ್ಯದ ಯಾವುದೇ ಜಿಲ್ಲೆಗಳಲ್ಲಿ ಲೆಕ್ಕಪತ್ರ ಇಲಾಖೆಯಲ್ಲಿ ಕಾರ್ಯನಿರ್ವಹಿಸಬೇಕು.
ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿಕಾಂ, ಬಿಬಿಎ ಅಥವಾ ಬಿಬಿಎಂನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. 2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ನಿವೃತ್ತ ಸೇನಾ ಅಧಿಕಾರಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ವೇತನ: ಮಾಸಿಕ 27,650 ರಿಂದ 52,650 ರೂ.ವರೆಗೆ ಮಾಸಿಕ ವೇತನವಿದೆ.
ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಸೂಚನೆಯಲ್ಲಿ ನೀಡಿರುವ ಮುನ್ಸೂಚನೆಗಳನ್ನು ಸರಿಯಾಗಿ ಗಮನಿಸಿ, ಅರ್ಥೈಸಿಕೊಂಡು ಅರ್ಜಿ ಹಾಕಿ. ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ, ನಿವೃತ್ತ ಸೇನಾಧಿಕಾರಿಗಳಿಗೆ 50 ರೂ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ.
ಆಯ್ಕೆ ವಿಧಾನ: ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಎದುರಿಸಬೇಕು. ಇಲ್ಲಿ ಪಡೆದ ಅಂಕಗಳನ್ನು ಆಧರಿಸಿ ಮೆರಿಟ್ ಮೂಲಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ದಿನಾಂಕ: ಈಗಾಗಲೇ ಕೆಪಿಎಸ್ಸಿ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆ ದಿನಾಂಕ ಮಾರ್ಚ್ 23 ರಿಂದ ಪ್ರಾರಂಭವಾಗಲಿದೆ. ಏಪ್ರಿಲ್ 23ರವರೆಗೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕ ಪಾವತಿಗೆ ಏಪ್ರಿಲ್ 24 ಕಡೆಯ ದಿನಾಂಕ. ಸಂಪೂರ್ಣ ವಿವರಕ್ಕೆ ಅಭ್ಯರ್ಥಿಗಳು kpsc.kar.nic.in ಜಾಲತಾಣಕ್ಕೆ ಭೇಟಿ ನೀಡಬಹುದು.
ಇದನ್ನೂ ಓದಿ: ಕರ್ನಾಟಕ ಹೈ ಕೋರ್ಟ್ ನೇಮಕಾತಿ: ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ