ETV Bharat / state

ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿಗಳು : ಬೇರೆ ಪೀಠದಲ್ಲಿ ಅರ್ಜಿ ವಿಚಾರಣೆಗೆ ಸರ್ಕಾರ ನಿರ್ಧಾರ

author img

By

Published : Jan 22, 2022, 7:26 PM IST

ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದ ಕಾರಣ ವಿಚಾರಣೆ ವಿಳಂಭವಾಗುವ ಆತಂಕ ಎದುರಾಗಿದೆ. ಹೊಸ ಪೀಠಕ್ಕೆ ಅರ್ಜಿ ವರ್ಗಾವಣೆಯಾಗಿ ನಂತರ ವಿಚಾರಣೆಗೆ ಬರಬೇಕಿದೆ. ಹಾಗಾಗಿ, ಬೇರೊಂದು ಪೀಠಕ್ಕೆ ಅರ್ಜಿ ವರ್ಗಾವಣೆಯಾಗುವಂತೆ ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಆ ನಿಟ್ಟಿನಲ್ಲಿ ಈಗ ಹೆಜ್ಜೆ ಇರಿಸಬೇಕು ಎಂದು ನಿರ್ಧರಿಸಲಾಗಿದೆ..

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ

ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ತ್ವರಿತವಾಗಿ ಬೇರೊಂದು ಪೀಠಕ್ಕೆ ಅರ್ಜಿ ವರ್ಗಾಯಿಸುವ ಕುರಿತು ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಮನವಿ ಮಾಡಲು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೃಷ್ಣಾ ಮೇಲ್ದಂಡೆ ಯೋಜನೆ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ನ್ಯಾ.ಚಂದ್ರಚೂಡ್ ಮತ್ತು ನ್ಯಾ.ಎ.ಎಸ್.ಬೋಪಣ್ಣ ಜನವರಿ 10 ರಂದು ವಿಚಾರಣೆಯಿಂದ ಹಿಂದೆ ಸರಿದಿದ್ದು, ಈ ಕುರಿತು ಸಿಎಂ ನೇತೃತ್ವದಲ್ಲಿ ನಡೆದ ಕಾನೂನು ತಜ್ಞರು, ಹಿರಿಯ ವಕೀಲರ ಸಭೆಯಲ್ಲಿ ಮಹತ್ವದ ಸಮಾಲೋಚನೆ ನಡೆಸಲಾಯಿತು.

ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದ ಕಾರಣ ವಿಚಾರಣೆ ವಿಳಂಭವಾಗುವ ಆತಂಕ ಎದುರಾಗಿದೆ. ಹೊಸ ಪೀಠಕ್ಕೆ ಅರ್ಜಿ ವರ್ಗಾವಣೆಯಾಗಿ ನಂತರ ವಿಚಾರಣೆಗೆ ಬರಬೇಕಿದೆ. ಹಾಗಾಗಿ, ಬೇರೊಂದು ಪೀಠಕ್ಕೆ ಅರ್ಜಿ ವರ್ಗಾವಣೆಯಾಗುವಂತೆ ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಆ ನಿಟ್ಟಿನಲ್ಲಿ ಈಗ ಹೆಜ್ಜೆ ಇರಿಸಬೇಕು ಎಂದು ನಿರ್ಧರಿಸಲಾಗಿದೆ.

ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸುತ್ತಿರುವ ಹಿರಿಯ ವಕೀಲರ ಮೂಲಕ ರಾಜ್ಯದ ಅಹವಾಲನ್ನು ರಿಜಿಸ್ಟ್ರಾರ್ ಮೂಲಕ ಸುಪ್ರೀಂಕೋರ್ಟ್ ಗಮನಕ್ಕೆ ತರಬೇಕು, ಆ ಮೂಲಕ ಕೃಷ್ಣಾ ಮೇಲ್ದಂಡೆ ಕುರಿತ ಅರ್ಜಿಯನ್ನು ಬೇರೊಂದು ಪೀಠಕ್ಕೆ ಕೂಡಲೇ ವರ್ಗಾಯಿಸಿ ಆದಷ್ಟು ಬೇಗ ಅರ್ಜಿ ವಿಚಾರಣೆ ಆರಂಭವಾಗುವಂತೆ ನೋಡಿಕೊಳ್ಳಬೇಕು ಎಂದು ನಿರ್ಧರಿಸಲಾಯಿತು.

ಅರ್ಜಿ ವಿಚಾರಣೆ ಕೂಡಲೇ ಕೈಗೆತ್ತಿಕೊಳ್ಳುವ ಕುರಿತು ಸುಪ್ರೀಂಕೋರ್ಟ್ ಗಮನಕ್ಕೆ ತರಲು ಬೇಕಾದ ಎಲ್ಲ ರೀತಿಯ ಕಾನೂನು ನೆರವು, ಸಹಕಾರ ನೀಡಲು ಸರ್ಕಾರ ಸಿದ್ದವಿದೆ ಎನ್ನುವ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿರುವ ವಕೀಲರಿಗೆ ನೀಡಿದ್ದು, ಜಲ ವ್ಯಾಜ್ಯಗಳ ವಿಚಾರದಲ್ಲಿ ತ್ವರಿತ ಹೆಜ್ಜೆ ಇರಿಸಲು ಮುಂದಾಗಿ ಎಂದು ಸಲಹೆ ನೀಡಿದರು.

ತಮಿಳುನಾಡಿನ ಯೋಜನೆಗೆ ಅನುಮತಿ ನೀಡದಂತೆ ಒತ್ತಡ : ತಮಿಳುನಾಡು ಸರ್ಕಾರ ಹೊಗೇನಕಲ್ ಯೋಜನೆ 2ನೇ ಹಂತವನ್ನು ಕೈಗೆತ್ತಿಕೊಳ್ಳಲು 4,600 ಕೋಟಿ ವೆಚ್ಚದ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸಲು ಮುಂದಾಗಿದೆ. ಅದಕ್ಕೆ ಅನುಮತಿ ನೀಡದಂತೆ ಕೇಂದ್ರ ಜಲಶಕ್ತಿ ಇಲಾಖೆಗೆ ಮನವಿ ಮಾಡಲು ನಿರ್ಧರಿಸಲಾಯಿತು.

ಪ್ರಸ್ತುತ ಯೋಜನೆಯು ವಿವರಗಳನ್ನು ನ್ಯಾಯಾಧಿಕರಣ ಅಥವಾ ಸರ್ವೋಚ್ಛ ನ್ಯಾಯಾಲಯದ ಮುಂದೆ ಪ್ರಸ್ತುತ ಪಡಿಸದೇ ಇರುವ ತಮಿಳುನಾಡಿನ ಯಾವುದೇ ಯೋಜನೆಯನ್ನು ಕರ್ನಾಟಕ ಸರ್ಕಾರ ವಿರೋಧಿಸಬೇಕು, ಈ ಯೋಜನೆಯನ್ನು ಕರ್ನಾಟಕ ಸರ್ಕಾರ ಎಲ್ಲಾ ಕಾನೂನಾತ್ಮಕ ಕ್ರಮಗಳ ಮೂಲಕ ಆಕ್ಷೇಪಿಸಬೇಕು. ಯಾವ ಕಾರಣಕ್ಕೂ ಯೋಜನೆಗೆ ಅನುಮೋದನೆ ನೀಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲು ಸಭೆಯಲ್ಲಿ ನಿರ್ಧರಿಸಲಾಯಿತು ಎನ್ನಲಾಗಿದೆ.

ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.