ETV Bharat / state

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ - ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್

ಗಾಂಧಿ ನಗರದ ವಿಧಾನಸಭಾ ಕ್ಷೇತ್ರದಿಂದ ಮಾಲೂರು ಕೃಷ್ಣಯ್ಯ ಶೆಟ್ಟಿ ಮತ್ತು ಯಲಹಂಕ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಸ್ ಆರ್ ವಿಶ್ವನಾಥ್ ನಾಮಪತ್ರ ಸಲ್ಲಿಸಿದರು.

krishnaiah-shetty-files-nomination-from-gandhi-nagara
ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ
author img

By

Published : Apr 19, 2023, 10:53 PM IST

ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಮಾಲೂರು ಕೃಷ್ಣಯ್ಯ ಶೆಟ್ಟಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಗಾಂಧಿ ನಗರದ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಗೌಡ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿದೆ. ಇಂದು ಗಾಂಧಿನಗರದ ಬಿಬಿಎಂಪಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ಬಳಿಕ ಮಾತನಾಡಿದ, ಕೃಷ್ಣಯ್ಯ ಶೆಟ್ಟಿ, ಕೊನೆ ಕ್ಷಣದವರೆಗೆ ತಮಗೆ ಟಿಕೆಟ್ ದೊರೆಯುವ ಭರವಸೆ ಇತ್ತು. ಪಕ್ಷ ನಡೆಸಿದ ಸಮೀಕ್ಷೆಯಲ್ಲಿ ತಮಗೆ ಹೆಚ್ಚಿನ ಮತಗಳು ಬಂದಿದ್ದು, ಕಾರ್ಯಕರ್ತರು ಮತ್ತು ಮತದಾರರ ಒಲವು ಶೇ 95 ಕ್ಕೂ ಹೆಚ್ಚು ಲಭಿಸಿದೆ ಎಂದು ಹೇಳಿದರು.

ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂಬ ಸಮಿಕ್ಷಾ ವರದಿಗಳು ದೊರೆತಿವೆ. ಆದರೆ ಕಾರ್ಯಕರ್ತರು ಸ್ಪರ್ಧಿಸುವಂತೆ ಒತ್ತಡ ಹೆಚ್ಚಿತ್ತು. ಕಾರ್ಯಕರ್ತರ ಒತ್ತಾಸೆಯಿಂದ ಕಣಕ್ಕಿಳಿದಿದ್ದೇನೆ. ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ತಾವು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಆದರೆ ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಮಾಜಿ ಶಾಸಕ ಪಿ.ಎಸ್. ಪ್ರಕಾಶ್ ಉಪಸ್ಥಿತರಿದ್ದರು.

ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಎಸ್ ಆರ್ ವಿಶ್ವನಾಥ್ ಇಂದು ನಾಮಪತ್ರ ಸಲ್ಲಿಸಿದರು. ಬೆಳಗ್ಗೆ 9 ಗಂಟೆಯಿಂದಲೂ ಯಲಹಂಕದಲ್ಲಿ 20 ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಷೋ ನಡೆಸಿ. ಮಧ್ಯಾಹ್ನ12 ಗಂಟೆಗೆ ತಾಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆ ಸಲ್ಲಿಸಿದರು.

ಇನ್ನೂ ನಾಮಪತ್ರ ಸಲ್ಲಿಸಿ ಮಾತನಾಡಿದ ಎಸ್ ಆರ್ ವಿಶ್ವನಾಥ್, ನಾನು ಇದೇ ಕ್ಷೇತ್ರದವನು, ಹೊರಗಿನವನಲ್ಲ. ಬಹಳ ದೊಡ್ಡ ಸಂಖ್ಯೆಯಲ್ಲಿ ಜನ ಬಂದು ಬೆಂಬಲ ಕೊಟ್ಟಿದ್ದಾರೆ ಈ ಸಲ 1ಲಕ್ಷ ಮತಗಳ ಅಂತರದಿಂದ ಗೆಲ್ಲಬೇಕು ಎನ್ನೋದು ನಮ್ಮ ಗುರಿ ಎಂದರು. ಇಲ್ಲಿ ಭಯದ ವಾತಾವರಣ ಇದೆ ಎನ್ನುವ ವಿರೋಧಿಗಳ ಹೇಳಿಕೆ ವಿಚಾರಕ್ಕೆ ಅವರೇ ಭಯದ ವಾತಾವರಣ ಮೂಡಿಸುತ್ತಾ ಇದ್ದಾರೆ. ಅವರ ಜೊತೆಯಲ್ಲಿ ಇರೋರು ರೌಡಿ ಶೀಟರ್​ಗಳು. ಅವರು ಸೋಲಿನ ಭಯದಿಂದ ಈ ಆರೋಪ ಮಾಡ್ತಿದ್ದಾರೆ ಎಂದು ವಿರೋಧಿಗಳಿಗೆ ಟಾಂಗ್ ಕೊಟ್ಟರು.

ಮತದಾನ ಮಾಡುವಂತೆ ಪ್ರೇರೇಪಿಸಲು ಪಾಲಿಕೆ ಮುಖ್ಯ ಆಯುಕ್ತ ಕರೆ: ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರೀಸ್ ಮತ್ತು ಕಾಮರ್ಸ್(ಬಿಸಿಐಸಿ) ಎಲ್ಲ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮತದಾನದ ಅರಿವು ಮೂಡಿಸಿ, ತಪ್ಪದೇ ಚುನಾವಣೆಯಲ್ಲಿ ಮತದಾನ ಮಾಡುವಂತೆ ಪ್ರೇರೇಪಿಸಲು ಪಾಲಿಕೆ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಕೈಗಾರಿಕೋದ್ಯಮಿಗಳಲ್ಲಿ ಕೋರಿದರು.

ಬಿಸಿಐಸಿಯ ಎಂಜಿ ರಸ್ತೆಯ ಮಿಡ್ ಫೋಟ ಹೌಸ್ ನಲ್ಲಿ ಏರ್ಪಡಿಸಿದ್ದ ಮತದಾನ ಜಾಗೃತಿ ಅಭಿಯಾನಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಎಲ್ಲಾ ವಲಯಗಳಲ್ಲೂ ಮತದಾನದ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಬಿಸಿಐಸಿನಲ್ಲಿ ನೊಂದಣಿಯಾಗಿರುವ ಹಲವಾರು ಪ್ರಸಿದ್ಧ ಕೈಗಾರಿಗೆ, ಐಟಿ-ಬಿಟಿ ಹಾಗೂ ಇತರೆ ಮಲ್ಟಿನ್ಯಾಷನಲ್ ಕಂಪನಿಗಳಿಗೆ ತಮ್ಮ ಸಂಸ್ಥೆ ವತಿಯಿಂದ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡು ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಬೇಕೆಂದು ಕೋರಿದರು. ಈ ವೇಳೆ ಬಿಸಿಐಸಿ ಅಧ್ಯಕ್ಷರಾದ ಎಲ್.ರವೀಂದ್ರನ್, ವಲಯ ಆಯುಕ್ತ ಪಿ.ಎನ್.ರವೀಂದ್ರ, ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ, ವಲಯ ಜಂಟಿ ಆಯುಕ್ತೆ ಪಲ್ಲವಿ, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ್ ಸೇರಿದಂತೆ ಹಲವು ಉದ್ಯಮಿಗಳು ಉಪಸ್ಥಿತರಿದ್ದರು. ಅಲ್ಲದೆ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಹಲವು ಉದ್ಯಮಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ:ಆನೇಕಲ್ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಬಿ ಶಿವಣ್ಣ ನಾಮಪತ್ರ ಸಲ್ಲಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.