ETV Bharat / state

ಶೀಘ್ರದಲ್ಲೇ ಮಿನಿ ಸಂಪುಟ ವಿಸ್ತರಣೆ: ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸೇರ್ಪಡೆ ಸಾಧ್ಯತೆ? - ರಮೇಶ್ ಜಾರಕಿಹೊಳಿ ಸೇರ್ಪಡೆ ಸಾಧ್ಯತೆ

ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮಿನಿ ಸಂಪುಟ ವಿಸ್ತರಣೆ ಆಗಲಿದ್ದು, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ರಮೇಶ್​ ಜಾರಕಿಹೊಳಿ ಮತ್ತೆ ಸಂಪುಟ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.

eshwarappa-and-ramesh-jarakiholi-to-join-cabinet-again
ಶೀಘ್ರದಲ್ಲೇ ಮಿನಿ ಸಂಪುಟ ವಿಸ್ತರಣೆ: ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸೇರ್ಪಡೆ ಸಾಧ್ಯತೆ!?
author img

By

Published : Jul 21, 2022, 9:38 AM IST

ಬೆಂಗಳೂರು: ಶೇ. 40ರಷ್ಟು ಕಮಿಷನ್ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ಅವರಿಗೆ ರಿಲೀಫ್ ಸಿಕ್ಕಿದ್ದು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಶ್ವರಪ್ಪ ಕಾರಣ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರವಿಲ್ಲ ಎಂದು ತನಿಖಾಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಹೀಗಾಗಿ ಕೆ.ಎಸ್.ಈಶ್ವರಪ್ಪ ಅವರು ಮತ್ತೆ ಸಂಪುಟ ಸೇರ್ಪಡೆಗೆ ಹಾದಿ ಸುಗಮವಾಗಿದೆ. ಈಶ್ವರಪ್ಪ ಜೊತೆಗೆ ರಮೇಶ್ ಜಾರಕಿಹೊಳಿ ಅವರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳಲು ವರಿಷ್ಠರು ಉದ್ದೇಶಿಸಿದ್ದಾರೆ ಎನ್ನಲಾಗುತ್ತಿದೆ.

ಕಳೆದ ವಾರ ಬಿ ರಿಪೋರ್ಟ್ ಸಲ್ಲಿಕೆಯಾಗುವ ಸಾಧ್ಯತೆ ಇತ್ತು. ಆದರೆ ಬುಧವಾರ ವರದಿ ಸಲ್ಲಿಕೆಯಾಗಿದ್ದು, ಈ ಮೂಲಕ ಶೇ. 40ರಷ್ಟು ಕಮಿಷನ್ ಹಗರಣದಲ್ಲಿ ಈಶ್ವರಪ್ಪ ಅವರಿಗೆ ಮೊದಲ ಗೆಲುವು ದೊರೆತಿದೆ. ಆದರೆ ಈಶ್ವರಪ್ಪ ಸಂಪುಟ ಪ್ರವೇಶಕ್ಕೆ ರಮೇಶ್ ಜಾರಕಿಹೊಳಿ ಅಡ್ಡಿಯಾಗಿದ್ದಾರೆ. ಈ ಹಿಂದೆ ಸಿಡಿ ಹಗರಣದಲ್ಲಿ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೊಳಿ ಪ್ರಕರಣ ಇನ್ನೂ ಇತ್ಯರ್ಥವಾಗಿಲ್ಲ. ಈ ಪ್ರಕರಣವೂ ಕೆಲ ದಿನಗಳಲ್ಲೇ ಬಗೆಹರಿಯಲಿದೆ. ಅವರು ಖುಲಾಸೆಗೊಂಡರೆ, ಇಬ್ಬರೂ ಒಟ್ಟಿಗೆ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಇಬ್ಬರೂ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ. ಈಶ್ವರಪ್ಪ ಹಿಂದೂ ಫೈರ್ ಬ್ರಾಂಡ್, ಜೊತೆಗೆ ಹಿಂದುಳಿದ ವರ್ಗದವರು. ಹೀಗಾಗಿ ಈಶ್ವರಪ್ಪ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ವರಿಷ್ಠರು ಚಿಂತನೆ ನಡೆಸಿದ್ದಾರೆ.

ಇನ್ನೊಂದೆಡೆ ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಹಿಡಿತ ಸಡಿಲಗೊಳ್ಳುತ್ತಿದೆ. ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದ ಬಳಿಕ ಬೆಳಗಾವಿ ಭಾಗದಲ್ಲಿ ಬಿಜೆಪಿ ಸಂಘಟನೆ ದುರ್ಬಲಗೊಂಡಿದೆ. ಲೋಕಸಭೆ ಉಪ ಚುನಾವಣೆಯಲ್ಲಿ ಮಂಗಳ ಅಂಗಡಿ ಪ್ರಯಾಸದ ಗೆಲುವು ಸಾಧಿಸಿದ್ದರು. ಮೇಲ್ಮನೆ ಚುನಾವಣೆಯಲ್ಲೂ ಬಿಜೆಪಿ ಪರಾಭವಗೊಂಡಿತ್ತು. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಿಡಿತ ಬಿಗಿಯಾಗುತ್ತಿದೆ. ಕಾಂಗ್ರೆಸ್​​ಗೆ ಲಗಾಮು ಹಾಕಲು ರಮೇಶ್ ಜಾರಕಿಹೊಳಿ ಇದೀಗ ಬಿಜೆಪಿಗೆ ಅನಿವಾರ್ಯವಾಗಿದೆ.

ಇದನ್ನೂ ಓದಿ: ಇಂದು ಹೊಸ ರಾಷ್ಟ್ರಪತಿ ಘೋಷಣೆ: ಒಡಿಶಾದಲ್ಲಿ ಸಿದ್ಧವಾದ ಗೆಲುವಿನ "ಸಿಹಿ"

ETV Bharat Logo

Copyright © 2024 Ushodaya Enterprises Pvt. Ltd., All Rights Reserved.