ETV Bharat / state

ಈಶ್ವರಪ್ಪ ನಿರ್ಧಾರ ಸ್ವಾಗತಾರ್ಹ: ಶಾಸಕ ಬೆಲ್ಲದ್​​, ರೇಣುಕಾಚಾರ್ಯ, ರಾಘವೇಂದ್ರ ಪ್ರತಿಕ್ರಿಯೆ - ಈಟಿವಿಭಾರತ ಕನ್ನಡ

ಬಿಜೆಪಿ ಹಿರಿಯ ನಾಯಕ ಕೆ.ಎಸ್​ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವ ಬಗ್ಗೆ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ.

vks-eshwarappa-announced-retirement-reactions-of-bjp-leaders
ಈಶ್ವರಪ್ಪನವರ ನಿರ್ಧಾರ ಸ್ವಾಗತಾರ್ಹ: ಶಾಸಕ ಬೆಲ್ಲದ್​​, ರೇಣುಕಾಚಾರ್ಯ, ರಾಘವೇಂದ್ರ ಪ್ರತಿಕ್ರಿಯೆ
author img

By

Published : Apr 11, 2023, 7:06 PM IST

Updated : Apr 11, 2023, 7:54 PM IST

ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಶಾಸಕ ಬೆಲ್ಲದ್​​ ಪ್ರತಿಕ್ರಿಯೆ

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಕೆ.ಎಸ್​ ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸಂಬಂಧ ಹಲವು ಬಿಜೆಪಿ ನಾಯಕರು ಈಶ್ವರಪ್ಪ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಅರವಿಂದ್​ ಬೆಲ್ಲದ್​​​, ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗಿದ್ದಾರೆ. ಇವರ ನಿರ್ಧಾರ ಸ್ವಾಗತಿಸುವುದಾಗಿ ಹೇಳಿದರು. ಇನ್ನು, ಪಕ್ಷದ ಪ್ರಚಾರದಲ್ಲಿ ಈಶ್ವರಪ್ಪ ಇದ್ದೇ ಇರುತ್ತಾರೆ ಎಂದು ಹೇಳಿದರು.

ಧಾರವಾಡದಲ್ಲೂ ಯಾವುದಾದರೂ ನಾಯಕರು‌ ನಿವೃತ್ತಿ ಹೊಂದಲಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನೂ ಹಿರಿಯರು ತೀರ್ಮಾನ ಮಾಡುತ್ತಾರೆ. ಲಕ್ಷ್ಮಣ ಸವದಿ ಕಾಂಗ್ರೆಸ್ ಹೋಗುವ ವಿಚಾರ ನನಗೆ ಗೊತ್ತಿಲ್ಲ. ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಟಿಕೆಟ್​ ಕೊಡಬಾರದು ಎಂಬ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

ಈಶ್ವರಪ್ಪ ಮೇಲಿನ ಗೌರವ ಹೆಚ್ಚಾಗಿದೆ.. ಬಿ.ವೈ ರಾಘವೇಂದ್ರ : ಈಶ್ವರಪ್ಪ ಅವರ ನಿವೃತ್ತಿ ಬಗ್ಗೆ ಪ್ರತಿಕ್ರಿಯಿಸಿರು ಸಂಸದ ಬಿ.ವೈ ರಾಘವೇಂದ್ರ, ಈಶ್ವರಪ್ಪ ಅವರ ಮೇಲಿನ ಗೌರವ ಹೆಚ್ಚಾಗಿದೆ ಎಂದು ಹೇಳಿದರು. ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ರಾಜಕೀಯ ನಿವೃತ್ತಿ ಪತ್ರ ನೋಡಿ ಆಶ್ಚರ್ಯ ಆಯ್ತು. ಒಂದೆಡೆ ನೋವು ಹಾಗೂ ಇನ್ನೊಂದೆಡೆ ಅವರ ಮೇಲಿನ ಗೌರವ ಹೆಚ್ಚಾಗಿದೆ. ನಮ್ಮ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶಕರಾಗಿ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಮುಂದೆ ಅವರ ಸಹಕಾರ ಮತ್ತು ಆಶೀರ್ವಾದದಿಂದ ಪಕ್ಷ ಸಂಘಟನೆಗೆ ಏನು ಗಮನ ಕೊಡಬೇಕೊ ಅದನ್ನು ನಾವೆಲ್ಲ ಒಟ್ಟಾಗಿ ಮಾಡುತ್ತೇವೆ ಎಂದರು.

ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಸಂಸದ ರಾಘವೇಂದ್ರ ಪ್ರತಿಕ್ರಿಯೆ

ಈ ಬಾರಿ ಸ್ಪಷ್ಟ ಬಹುಮತದಿಂದ ಬಿಜೆಪಿ ಗೆಲ್ಲುತ್ತದೆ. ಮೋದಿಯವರ ಆಶೀರ್ವಾದ ದಿಂದ ರಾಜ್ಯದಲ್ಲಿ ಮತ್ತೆ ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ಈಶ್ವರಪ್ಪ ಅವರ ನಿವೃತ್ತಿ ಘೋಷಣೆ ಶಾಕ್ ತಂದಿದೆ...ರೇಣುಕಾಚಾರ್ಯ : ಬಿಜೆಪಿ ಹಿರಿಯ ಮುಖಂಡ ಕೆ. ಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು ನನಗೆ ಶಾಕ್ ಆಗಿದೆ. ಏನು‌ ಮಾತನಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ ಎಂದು ಹೊನ್ನಾಳಿಯಲ್ಲಿ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದಾರೆ.

ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯೆ

ಈ ಹಿಂದೆ ಬಿಜೆಪಿಯಲ್ಲಿ ಹಿಂದುಳಿದ ವರ್ಗವೇ ಇರಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಈಶ್ವರಪ್ಪ ಅವರು ಹಿಂದುಳಿದ ವರ್ಗದ ಜನರನ್ನು ಬಿಜೆಪಿಗೆ ತಂದರು. ಜೊತೆಗೆ ಆ ವರ್ಗದ ಜನರನ್ನು ಮತಗಳಲ್ಲಿ ಬಿಜೆಪಿಗೆ ತಂದಿದ್ದಾರೆ. ಶಿವಮೊಗ್ಗದಂತಹ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿ ಆಗಿದ್ದರು. ಇವರು ಘೋಷಣೆ ಮಾಡಿರುವ ನಿವೃತ್ತಿ ಈ ಕೂಡಲೇ ಹಿಂದಕ್ಕೆ ಪಡೆಯಬೇಕು. ಅವರು ಮತ್ತೆ ಶಾಸಕರಾಗಬೇಕು ಎಂಬುದು ನನ್ನ ಒತ್ತಾಯ. ಯಾವುದೇ ಕಾರಣಕ್ಕೂ ಅವರು ನಿವೃತ್ತಿ ಘೋಷಣೆ ಮಾಡಬಾರದು ಎಂದು ಹೇಳಿದರು.

ಬಿಜೆಪಿ ಹೈಕಮಾಂಡ್​​ನಿಂದ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಅವಮಾನ ಆಗಿಲ್ಲ. ಈ ವಿಚಾರವಾಗಿ ಸ್ವತಃ ಯಡಿಯೂರಪ್ಪ ಅವರೇ ಹೇಳಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ತೆರೆದಿದ್ದೇ ಯಡಿಯೂರಪ್ಪ. ಹೀಗಾಗಿ ಅವರಿಗೆ ಅವಮಾನ ಆಗುವ ಸಾಧ್ಯತೆಯೇ ಇಲ್ಲ ಎಂದು ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದರು.

ಶೆಟ್ಟರ್ ಟಿಕೆಟ್​​​ ವಿಚಾರವಾಗಿ ಕಣ್ಣೀರು ಹಾಕಿದ ಮಹಿಳೆ : ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತೆ ಕಣ್ಣೀರು ಹಾಕಿದ್ದಾರೆ. ಭಾರತಿ ಟಪಾಲ ಎಂಬ ಬಿಜೆಪಿ ಕಾರ್ಯಕರ್ತೆ ಕಣ್ಣೀರು ಹಾಕಿದ್ದು, ಶೆಟ್ಟರ್ ಅವರು ಹಿರಿಯ ರಾಜಕಾರಣಿ. ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರಿಗೆ ಟಿಕೆಟ್ ಕೊಡುವ ಮೂಲಕ ಬಿಜೆಪಿಯನ್ನು ಮತ್ತಷ್ಟು ಬಲಪಡಿಸುವ ಕಾರ್ಯವನ್ನು ಮಾಡಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ : ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ..! ನಡ್ಡಾಗೆ ಪತ್ರ

Last Updated : Apr 11, 2023, 7:54 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.