ETV Bharat / state

ಜ.13 ರಂದು ಕೆ-ಸೆಟ್ ಪರೀಕ್ಷೆ: ಮಾಂಗಲ್ಯ ಸರ, ಕಾಲುಂಗುರಕ್ಕೆ ಅನುಮತಿ, ಇನ್ನುಳಿದ ನಿಯಮಗಳೇನು ತಿಳಿಯಿರಿ - kset exam 13th january

ಜ.13ರಂದು ಕೆಸೆಟ್ ಪರೀಕ್ಷೆ ನಡೆಯಲಿದ್ದು, ​ವಸ್ತ್ರಸಂಹಿತೆ ಸೇರಿದಂತೆ ಕೆಲ ನಿಯಮಗಳನ್ನು ಬಿಡುಗಡೆ ಮಾಡಲಾಗಿದೆ.

ಜ.13 ರಂದು ಕೆ-ಸೆಟ್ ಪರೀಕ್ಷೆ
ಜ.13 ರಂದು ಕೆ-ಸೆಟ್ ಪರೀಕ್ಷೆ
author img

By ETV Bharat Karnataka Team

Published : Jan 3, 2024, 4:22 PM IST

ಬೆಂಗಳೂರು: ಜನವರಿ 13 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್ ಪರೀಕ್ಷೆ) ನಡೆಯಲಿದ್ದು, ಮಾಂಗಲ್ಯ ಸರ ಹಾಗು ಕಾಲುಂಗುರಕ್ಕೆ ಅನುಮತಿಸಿ ವಸ್ತ್ರಸಂಹಿತೆಯನ್ನು ಬಿಡುಗಡೆ ಮಾಡಿದೆ. ಪ್ರಾಧಿಕಾರದ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಸುತ್ತೋಲೆ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕೆ-ಸೆಟ್ (KSET) ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲು ರಾಜ್ಯ ಸರ್ಕಾರದಿಂದ ಆದೇಶಿಸಲಾಗಿರುವುದರಿಂದ ಜನವರಿ 13ರ ಶನಿವಾರದಂದು ಪರೀಕ್ಷೆ ನಡೆಸಲಾಗುತ್ತಿದೆ. ಅಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಮೊದಲ ಪ್ರಶ್ನೆ ಪತ್ರಿಕೆ ಪರೀಕ್ಷೆ ಇರಲಿದ್ದು, ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಎರಡನೇ ಪ್ರಶ್ನೆಪತ್ರಿಕೆಯ ಪರೀಕ್ಷೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿ ಪ್ರವೇಶ ಪತ್ರವನ್ನು ಮತ್ತು ಅಭ್ಯರ್ಥಿಗಳಿಗೆ ನೀಡಲಾಗಿರುವ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಅಲ್ಲದೆ, ಮಾರ್ಗದರ್ಶನಗಳನ್ನು / ಕಾರ್ಯವಿಧಾನಗಳನ್ನು ತಪ್ಪದೆ ಅನುಸರಿಸಲು ಮತ್ತು ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ನಿಗದಿತ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ.

ಸೂಚನೆಗಳು

  • ನಿಗದಿತ ಸಮಯಕ್ಕಿಂತ ಒಂದು ಗಂಟೆಯ ಮೊದಲು ಪರೀಕ್ಷಾ ಕೇಂದ್ರವನ್ನು ತಲುಪಲು ಅಭ್ಯರ್ಥಿಗಳು ಮುನ್ನೆಚ್ಚರಿಕೆಯಿಂದ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು.
  • ನಿಗದಿಪಡಿಸಿರುವ ಪರೀಕ್ಷಾ ಕೇಂದ್ರವನ್ನು ಹೊರತುಪಡಿಸಿ ಬೇರೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯಲು ಅಭ್ಯರ್ಥಿಗಳಿಗೆ ಅನುವು ಮಾಡಿಕೊಡುವುದಿಲ್ಲ.
  • ಅಭ್ಯರ್ಥಿಯು ಕಡ್ಡಾಯವಾಗಿ ಪ್ರವೇಶ ಪತ್ರ ಮತ್ತು ಮಾನ್ಯತೆ ಇರುವ ಯಾವುದಾದರು ಒಂದು ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಬೇಕು.
  • ಎರಡನೇ ಅವಧಿಯ ಪರೀಕ್ಷೆಯು ಮ.12 ರಿಂದ ಪ್ರಾರಂಭವಾಗುವುದರಿಂದ, ಅಭ್ಯರ್ಥಿಗಳನ್ನು ಮೊದಲನೆ ಅವಧಿ ಪರೀಕ್ಷೆ ಮುಗಿದ ನಂತರ ಕೇಂದ್ರದಿಂದ ಹೊರಗೆ ಹೋಗಲು ಅನುಮತಿಸಲಾಗುವುದಿಲ್ಲ.
  • ಅಭ್ಯರ್ಥಿಯು ಓಎಂಆರ್ ಉತ್ತರ ಪತ್ರಿಕೆಯಲ್ಲಿ ನೋಂದಣಿ ಸಂಖ್ಯೆಯನ್ನು ಬರೆದು ಸಂಬಂಧಿಸಿದ ವೃತ್ತಗಳನ್ನು ಶೇಡ್ ಮಾಡಬೇಕು. ನಂತರ ಅಭ್ಯರ್ಥಿಯು ಪ್ರಶ್ನೆಪತ್ರಿಕೆಯ ವರ್ಷನ್ ಕೋಡ್ ಅನ್ನು ತಪ್ಪಿಲ್ಲದೆ ಬರೆದು ಸಂಬಂಧಿಸಿದ ವೃತ್ತಗಳನ್ನು ಶೇಡ್ ಮಾಡಬೇಕು.
  • ಲಿಪಿಕಾರರ ಸೇವೆಯನ್ನು ಪಡೆಯುಲು, ಪ್ರಾಧಿಕಾರದ ಲಿಂಕ್‌ನಲ್ಲಿ ಲಿಪಿಕಾರರ ಮಾಹಿತಿಗಳನ್ನು ನೀಡಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಲಿಪಿಕಾರರ ಮಾಹಿತಿಯನ್ನೂ ಸಹ ಪ್ರವೇಶ ಪತ್ರದಲ್ಲಿ ಮುದ್ರಿಸಲಾಗಿದೆ.

ಅಭ್ಯರ್ಥಿಗಳ ಗಮನಕ್ಕೆ: ನೋಂದಣಿ ಸಂಖ್ಯೆ, ಕೇಂದ್ರ ಸಂಖ್ಯೆ ಮತ್ತು ವಿಷಯ ಸಂಕೇತವನ್ನು ತಪ್ಪಾಗಿ ಬರೆಯುವ ಅಭ್ಯರ್ಥಿಗಳ ಉತ್ತರ ಪತ್ರಿಕೆಯನ್ನು ಮೌಲ್ಯ ಮಾಪನ ಮಾಡುವುದಿಲ್ಲ. ಅಭ್ಯರ್ಥಿಗಳು ಓಎಂಆರ್​ನಲ್ಲಿನ ನಿಗದಿತ ಜಾಗದಲ್ಲಿ ಕಡ್ಡಾಯವಾಗಿ ಸಹಿ ಮಾಡಬೇಕು.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು.

ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್​ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.

ಪರೀಕ್ಷಾ ಹಾಲ್​ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು/ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.

ಎತ್ತರವಾದ ಹಿಮ್ಮಡಿಯ ಶೂಗಳನ್ನು ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೂರತುಪಡಿಸಿ)

ನಿಷೇಧಿತ ವಸ್ತುಗಳ ಪಟ್ಟಿ: ಡ್ರೆಸ್​ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್​ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ. ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ.

ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್​ಗಳು ಮತ್ತು ಲಾಗ್ ಟೇಬಲ್​ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
ತಲೆಯ ಮೇಲೆ ಟೋಪಿ/ HAT ಧರಿಸಿಬಾರದು. ಯಾವುದೇ ರೀತಿಯ ಮಾಸ್ಕ ಅನ್ನು ಧರಿಸುವಂತಿಲ್ಲ. ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ. ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು. ಎರಡು ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ತರಬೇಕು.

ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಖಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ. ಕೆ.ಇ.ಎ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕ್ರಮವನ್ನು ಜರುಗಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಫೆ. 29 ರಿಂದ ಮಾ. 7ರ ವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಸೌಹಾರ್ದತೆ, ಸಹಬಾಳ್ವೆಗೆ ಒತ್ತು: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.