ETV Bharat / state

ಜ. 13ಕ್ಕೆ ಕೆ-ಸೆಟ್ ಪರೀಕ್ಷೆ,: ಒಂದು ಲಕ್ಷಕ್ಕೂ ಅಧಿಕ ಮಂದಿ ಬರೆಯುವ ಪರೀಕ್ಷೆಗೆ ಸಕಲ ಸಿದ್ಧತೆ - Qualifying Test

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಕೆ-ಸೆಟ್ ಪರೀಕ್ಷೆಯು ಜನವರಿ 13ರಂದು ನಡೆಯಲಿದೆ.

kset-exam-will-be-held-on-january-13
ಜ. 13ಕ್ಕೆ ಕೆ-ಸೆಟ್ ಪರೀಕ್ಷೆ,: 1.17 ಲಕ್ಷ ಮಂದಿ ಬರೆಯುವ ಪರೀಕ್ಷೆಗೆ ಸಕಲ ಸಿದ್ಧತೆ
author img

By ETV Bharat Karnataka Team

Published : Jan 11, 2024, 7:51 PM IST

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಶನಿವಾರ (ಜನವರಿ 13) ನಡೆಯಲಿದೆ. ಇದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಕಲ ಸಿದ್ಧತೆಗಳನ್ನು‌ ಮಾಡಿಕೊಂಡಿದೆ.

ವಿವಿಧ ರೀತಿಯ 41 ವಿಷಯಗಳಿಗೆ (Subjects) ಪರೀಕ್ಷೆ ನಡೆಯುತ್ತಿದ್ದು, ಒಟ್ಟೂ 1,17,302 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ. ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಶನಿವಾರ‌ ಬೆಳಗ್ಗೆ 10 ರಿಂದ 11 ಗಂಟೆವರೆಗೆ ಎಲ್ಲ ವಿಷಯಗಳ ಅಭ್ಯರ್ಥಿಗಳಿಗೆ ಸಾಮಾನ್ಯ ಪರೀಕ್ಷೆ (ಪೇಪರ್-1) ನಡೆಯಲಿದೆ. ಅದಾದ ನಂತರ ಅದೇ ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪರೀಕ್ಷೆ (ಪೇಪರ್-2) ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಇರಲಿದೆ. ಒಮ್ಮೆ ಪರೀಕ್ಷಾ ಕೇಂದ್ರದೊಳಗೆ‌ ಅಭ್ಯರ್ಥಿಗಳು ಹೋದ‌ ಮೇಲೆ ಎರಡೂ ಪತ್ರಿಕೆಗಳ ಪರೀಕ್ಷೆಗಳು ಮುಗಿದ ನಂತರವೇ ಹೊರಹೋಗಲು‌ ಅವಕಾಶ ನೀಡಲಾಗಿದೆ. ಕಟ್ಟುನಿಟ್ಟಿನ ತಪಾಸಣೆ ಇರುವ ಕಾರಣ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ‌‌ ಮೊದಲೇ ಬರಬೇಕು ಎಂದು ನಿರ್ದೇಶಕರು ಸೂಚಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಜವಾನ, ಟೈಪಿಸ್ಟ್​​ ಹುದ್ದೆಗೆ ಅರ್ಜಿ ಆಹ್ವಾನ

41 ವಿಷಯಗಳ ಪೈಕಿ ವಾಣಿಜ್ಯ ಶಾಸ್ತ್ರದ ಪರೀಕ್ಷೆಯನ್ನು ಅತಿ ಹೆಚ್ವು ಅಂದರೆ, 16,000 ಮಂದಿ ತೆಗೆದುಕೊಂಡಿದ್ದಾರೆ. ಕನ್ನಡ ವಿಷಯವನ್ನು 11 ಸಾವಿರ ಜನರು ತೆಗೆದುಕೊಂಡಿದ್ದಾರೆ. ಅತಿ ಕಡಿಮೆ ಅಂದರೆ 25 ಮಂದಿ ಮಾತ್ರ ಭಾಷಾಶಾಸ್ತ್ರದ ವಿಷಯದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆ ಬರೆಯುವ ಒಟ್ಟೂ ಅಭ್ಯರ್ಥಿಗಳ ಪೈಕಿ‌ ಅತಿ ಹೆಚ್ಚು ಅಂಕ ಪಡೆದ ಶೇ 6ರಷ್ಟು ಮಂದಿ ಅಂತಿಮವಾಗಿ ಕೆ- ಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲಿದ್ದಾರೆ. ಇದರಲ್ಲಿ ರೋಸ್ಟರ್ ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ತಿಳಿಸಿದರು.

800 ಇ-ಮೇಲ್: ನೋಂದಣಿ ಸಂಖ್ಯೆ ಕಳೆದುಕೊಂಡ‌ 800ಕ್ಕೂ ಹೆಚ್ಚು ಮಂದಿ ಕೆ- ಸೆಟ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳದ ಕಾರಣ ಅವರ ಎಲ್ಲ ಇ-ಮೇಲ್​​ಗಳಿಗೆ ನೋಂದಣಿ ಸಂಖ್ಯೆ ರವಾನಿಸುವ ಕೆಲಸವನ್ನು ಕೆಇಎ ಮಾಡಿದ್ದು, ಎಲ್ಲರೂ ಪರೀಕ್ಷೆ ತೆಗೆದುಕೊಳ್ಳಲು ಇದು ನೆರವಾಗಿದೆ.

ಇದನ್ನೂ ಓದಿ: 5,124 ಹುದ್ದೆಗಳ ಭರ್ತಿಗೆ KEA ಅಧಿಸೂಚನೆ; BMTC ಸೇರಿದಂತೆ ಹಲವು ನಿಗಮದಲ್ಲಿ ನೇಮಕಾತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.