ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿದ್ದ ವಿಜಯಕುಮಾರ್ ಗೋಗಿಯವರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪಿಸಿಬಿ ಅಧ್ಯಕ್ಷರಾಗಿ ಬ್ರಿಜೇಶ್ ಕುಮಾರ್ ನೇಮಕಗೊಂಡಿದ್ದಾರೆ. ಪಿಸಿಬಿ ಅಧ್ಯಕ್ಷ ಸ್ಥಾನದ ಜೊತೆಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಜೀವಿ ಪರಿಸ್ಥಿತಿ ಮತ್ತು ಪರಿಸರ) ಹಾಗೂ ಹೆಚ್ಚುವರಿ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ವಿಜಯ್ ಕುಮಾರ್ ಗೋಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಸ್ಮಿತಾ ಬಿಜ್ಜೂರ್ ಅವರ ಸ್ಥಾನಕ್ಕೆ ವರ್ಗಾವಣೆಯಾಗಿದ್ದಾರೆ.
ಡಿ.22ಕ್ಕೆ 3,021 ಗ್ರಾಪಂಗಳಿಗೆ ಮೊದಲ ಹಂತದ ಚುನಾವಣೆ: 1.50 ಲಕ್ಷಕ್ಕೂ ಹೆಚ್ಚು ನಾಮಪತ್ರ ಸಲ್ಲಿಕೆ
ಹೆಚ್ಚುವರಿ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹಾಗೂ ಪಿಸಿಬಿ ಅಧ್ಯಕ್ಷರಾಗಿ ಬ್ರಿಜೇಶ್ ಕುಮಾರ್ ವರ್ಗಾವಣೆಯಾಗಿದ್ದಾರೆ.