ಬೆಂಗಳೂರು: ಕೇರಳ ರಾಜ್ಯಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್‌ಗಳನ್ನು ಪುನರಾರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ಇದೇ ತಿಂಗಳ 12 ರಿಂದ ಬೆಂಗಳೂರು, ಮೈಸೂರು, ಮಂಗಳೂರು, ಪುತ್ತೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.
ಕರ್ನಾಟಕ ಸರ್ಕಾರದ ಮಾರ್ಗಸೂಚಿಯಂತೆ ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು, 72 ಗಂಟೆಯೊಳಗೆ ಕೋವಿಡ್ ಟೆಸ್ಟ್ ಮಾಡಿಸಿ ಕೋವಿಡ್ ನೆಗೆಟಿವ್ ರಿಪೋರ್ಟ್ ತರಬೇಕು ಅಥವಾ ಕನಿಷ್ಠ ಒಂದು ವ್ಯಾಕ್ಸಿನ್ ಹಾಕಿಸಿರುವ ಪ್ರಮಾಣ ಪತ್ರವನ್ನ ಹೊಂದಿರಬೇಕು ಎಂದು ಹೇಳಿದೆ.
ಶಿಕ್ಷಣ, ವ್ಯವಹಾರ ಇನ್ನಿತರೆ ಕಾರಣಕ್ಕೆ ನಿತ್ಯ ಪ್ರಯಾಣ ಮಾಡುವ ಪ್ರಯಾಣಿಕರು 15 ದಿನಗಳಿಗೊಮ್ಮೆ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಿಸಿ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕು ಎಂದು ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ :35ನೇ ವಯಸ್ಸಿಗೆ ಕೇಂದ್ರ ಸಚಿವ ಸ್ಥಾನ! ಶಾಲಾ ಶಿಕ್ಷಕನಾಗಿ ಸಂಸದನಾದ ಯುವಕನಿಗೆ ಮೋದಿ ಮಣೆ
ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಲು ಮುಖ್ಯ ಸಂಚಾರ ವ್ಯವಸ್ಥಾಪಕರು ಕೋರಿದ್ದಾರೆ.