ETV Bharat / state

ಸಿಬ್ಬಂದಿಗೆ ಭರ್ಜರಿ ವಿಮಾ ಯೋಜನೆ ಜಾರಿಗೊಳಿಸಿದ KSRTC: ಅಪಘಾತದಲ್ಲಿ ಮೃತಪಟ್ಟರೆ 50 ಲಕ್ಷ ಪರಿಹಾರ!

author img

By

Published : Oct 19, 2022, 4:04 PM IST

ಕೆಎಸ್‌ಆರ್‌ಟಿಸಿ ಸಿಬ್ಬಂದಿ ಸಂಸ್ಥೆಗಾಗಿ ಹಗಲಿರುಳು ದುಡಿಯುತ್ತಾರೆ. ಅವರ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆ ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು ಎಂಬ ಕಾರಣಕ್ಕೆ ಅವಲಂಬಿತರ ಹಿತ ಕಾಪಾಡಲು ದೊಡ್ಡ ಮೊತ್ತದ ಅಪಘಾತ ವಿಮಾ ಯೋಜನೆ ಜಾರಿಗೊಳಿಸಿದೆ.

ksrtc-implemented-insurance-scheme-for-staff
ಸಿಬ್ಬಂದಿಗೆ ಭರ್ಜರಿ ವಿಮಾ ಯೋಜನೆ ಜಾರಿಗೊಳಿಸಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ಇತಿಹಾಸದಲ್ಲಿಯೇ ಮೊದಲ ಬಾರಿ ತಿಂಗಳ ಮೊದಲ ದಿನದಂದೇ ವೇತನ ಬಿಡುಗಡೆ ಮಾಡಿ ಸಿಬ್ಬಂದಿಗೆ ಖುಷಿ ನೀಡಿದ್ದ ರಾಜ್ಯ ಸಾರಿಗೆ ನಿಗಮ, ಇದೀಗ 50 ಲಕ್ಷ ರೂ.ಗಳ ಅಪಘಾತ ವಿಮಾ ಯೋಜನೆ ಸೌಲಭ್ಯ ಕಲ್ಪಿಸುವ ಮೂಲಕ ಸಂಸ್ಥೆಯ ಕಾರ್ಮಿಕರ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸಲು ಮುಂದಾಗಿದೆ.

ಇದುವರೆಗೂ ಸಾರಿಗೆ ನಿಗಮದ ಸಿಬ್ಬಂದಿ ಅಪಘಾತದಲ್ಲಿ (ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ ಅಥವಾ ಶಾಶ್ವತ / ಭಾಗಶಃ ಅಂಗವೈಕಲ್ಯತೆಗೆ ತುತ್ತಾದರೆ ಯಾವುದೇ ದೊಡ್ಡ ಮೊತ್ತದ ಪರಿಹಾರದ ಹಣ ಅವರ ಅವಲಂಬಿತರಿಗಾಗಲಿ ಅಥವಾ ಅವರಿಗಾಗಲಿ ಲಭಿಸುತ್ತಿರಲಿಲ್ಲ. ಸಿಬ್ಬಂದಿ ಸಂಸ್ಥೆಗಾಗಿ ಹಗಲಿರುಳು ದುಡಿಯುತ್ತಾರೆ. ಅವರ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು ಎಂಬ ಕಾರಣಕ್ಕೆ ಅವರ ಅವಲಂಬಿತರ ಹಿತ ಕಾಪಾಡಲು ದೊಡ್ಡ ಮೊತ್ತದ ಅಪಘಾತ ವಿಮಾ ಯೋಜನೆ ಜಾರಿಗೊಳಿಸಿದೆ.

KSRTC implemented insurance scheme for staff

ಈ ನೂತನ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯ ಒಡಂಬಡಿಕೆಗೆ ಇಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜೊತೆ ಶಾಂತಿ ನಗರದಲ್ಲಿರುವ ನಿಗಮದ ಕೇಂದ್ರ ಕಚೇರಿಯಲ್ಲಿ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ. ಚಂದ್ರಪ್ಪ ಸಮ್ಮುಖದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ
ವಿ.ಅನ್ಬುಕುಮಾರ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಡಿಜಿಎಂ ಪಂಕಜ್ ತಪ್ಲಿಯಾಲ್. ಡಿ ಸಹಿ ಹಾಕಿದರು.

ಸಾರಿಗೆ ಸಿಬ್ಬಂದಿ ವೇತನ ಪ್ಯಾಕೇಜ್ ಅಪಘಾತ ವಿಮಾ ಯೋಜನೆ ವಿವರ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ತಮ್ಮ ವೇತನದ ಖಾತೆ ಹೊಂದಿರುವ ನಿಗಮದ ನೌಕರರಿಗೆ ಪ್ರೀಮಿಯಂ ರಹಿತ ವೈಯುಕ್ತಿಕ ಅಪಘಾತ ವಿಮೆಯನ್ನು ಈ ಯೋಜನೆ ಒಳಗೊಂಡಿದೆ. ಈ ವೈಯುಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಫಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ 50 ಲಕ್ಷ ರೂ. ಪರಿಹಾರದ ಹಣ ಕೂಡಲೇ ದೊರೆಯಲಿದೆ.

ಅಫಘಾತದಲ್ಲಿ ಸಿಬ್ಬಂದಿ ಶಾಶ್ವತವಾಗಿ ಪೂರ್ಣ ಅಂಗವೈಕಲ್ಯಕ್ಕೆ ತುತ್ತಾದಲ್ಲಿ 20 ಲಕ್ಷ ರೂ. ಹಣ ಹಾಗೂ ಶಾಶ್ವತ ಭಾಗಶಃ ಅಂಗವೈಕಲ್ಯ ಉಂಟಾದಲ್ಲಿ 10 ಲಕ್ಷ ರೂ. ವಿಮಾ ಪರಿಹಾರ ದೊರೆಯಲಿದೆ. ಈ ವಿಮಾ ಯೋಜನೆಯಲ್ಲಿ ಮತ್ತೊಂದು ಉಪಯಕ್ತ ಕ್ರಮ ಎಂದರೆ ಕರ್ತವ್ಯ ನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ (On duty and Off duty) ಸಮಯದಲ್ಲೂ ಆಗುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ.

ಸಿಬ್ಬಂದಿ ಅಪಘಾತದಲ್ಲಿನ ಪ್ಲಾಸ್ಟಿಕ್ ಸರ್ಜರಿ ಚಿಕಿತ್ಸೆಗಾಗಿ ಗರಿಷ್ಟ 10 ಲಕ್ಷ ರೂ. ಔಷಧಗಳ ಆಮದಿಗಾಗಿ ಗರಿಷ್ಠ 5 ಲಕ್ಷ ರೂ. ಕೋಮಾದಲ್ಲಿ ಮೃತಪಟ್ಟರೆ ಹೆಚ್ಚುವರಿಯಾಗಿ 2 ಲಕ್ಷ ರೂ. (ರೂ.50 ಲಕ್ಷ + ರೂ.2 ಲಕ್ಷ), ಏರ್ ಆ್ಯಂಬುಲೆನ್ಸ್​ ಸೇವೆಗೆ 10 ಲಕ್ಷ ರೂ. ವಿಮಾ ಪರಿಹಾರ ನೀಡಲಾಗುವುದು. ಸಾರಿಗೆ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟರೆ ಮಕ್ಕಳ ಪದವಿ ಶಿಕ್ಷಣಕ್ಕೆ ಗರಿಷ್ಠ 5 ಲಕ್ಷ ರೂ. ಹಾಗೂ ಹೆಣ್ಣು ಮಗಳ ವಿವಾಹಕ್ಕೆ ಗರಿಷ್ಟ 5 ಲಕ್ಷ ರೂ. ವರೆಗೆ ಆರ್ಥಿಕ ಸಹಾಯವನ್ನು ಈ ವಿಮಾ ಯೋಜನೆ ಒಳಗೊಂಡಿರುತ್ತದೆ.

ಅಪಘಾತ ವಿಮಾ ಯೋಜನೆಗೆ ಒಡಂಬಡಿಕೆ ನಂತರ ಮಾತನಾಡಿದ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ನಿಗಮವು ಜಾರಿಗೊಳಿಸುತ್ತಿರುವ ಈ ವಿಮಾ ಯೋಜನೆಯು ಕಾರ್ಮಿಕ ಮತ್ತು ಅವರ ಕುಟುಂಬದವರ ಹಿತದೃಷ್ಟಿಯಿಂದ ಜಾರಿಗೊಳಿಸುತ್ತಿರುವ ಉತ್ತಮವಾದ ಯೋಜನೆಯಾಗಿದೆ. ರಸ್ತೆ ಸಾರಿಗೆ ನಿಗಮಗಳಲ್ಲಿಯೇ ಅತ್ಯಧಿಕ ಮೊತ್ತದ ಅಪಘಾತ (On duty ಮತ್ತು Off duty ಒಳಗೊಂಡಂತೆ ನೀಡಲಾಗುವ) ವಿಮಾ ಯೋಜನೆಯಾಗಿರುವುದಾಗಿ ಸಂತಸ ವ್ಯಕ್ರಪಡಿಸಿದರು.

ಇದನ್ನೂ ಓದಿ : ದೀಪಾವಳಿ ಹಬ್ಬದ ಪ್ರಯುಕ್ತ 1500ಕ್ಕೂ ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಲಿದೆ ಕೆಎಸ್​ಆರ್​ಟಿಸಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.