ETV Bharat / state

ದೀಪಾವಳಿ ಹಬ್ಬಕ್ಕೆ ಕೆಎಸ್ಆರ್​ಟಿಸಿ ವತಿಯಿಂದ 1600 ಹೆಚ್ಚುವರಿ ಬಸ್​ ಸೇವೆ - ಕೆಎಸ್​ಆರ್​ಟಿಸಿ-ದೀಪಾವಳಿ

ಅಕ್ಟೋಬರ್ 27ರಂದು ನರಕಚತುರ್ದಶಿ ಹಾಗೂ 29ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 25, 26 ಹಾಗೂ 27 ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1600 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್​ ಸೇವೆ,
author img

By

Published : Oct 19, 2019, 4:25 AM IST

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗಾಗಿ ಕೆಎಸ್ಆರ್​ಟಿಸಿ ವತಿಯಿಂದ ಹೆಚ್ಚುವರಿ ವಿಶೇಷ ಬಸ್ಸು ವ್ಯವಸ್ಥೆ ಮಾಡಲಾಗಿದೆ.

‌ಅಕ್ಟೋಬರ್ 27ರಂದು ನರಕಚತುರ್ದಶಿ ಹಾಗೂ 29ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 25, 26 ಹಾಗೂ 27 ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1600 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.‌

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹಾಗೂ ತಮಿಳುನಾಡು ಮತ್ತು ಆಂಧ್ರಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ಹೊರಡಲಿವೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನೂ ಕೂಡ ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್​ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕ್ಕಿಂಗ್‍ನ್ನು ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್​ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಹೋಗುವ & ಬರುವ ಪ್ರಯಾಣದ ಟಿಕೆಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವಾಗ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತೆ.

ಒಟ್ಟಾರೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಅಂತ‌ ಪ್ರಕಟಣೆ ಹೊರಡಿಸಿದೆ.

Intro:‌ದೀಪಾವಳಿ ಹಬ್ಬ; ಕೆಎಸ್ಆರ್ ಟಿಸಿ ವತಿಯಿಂದ 1600 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ...

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗಾಗಿ
ಕೆಎಸ್ ಆರ್ ಟಿಸಿ ವತಿಯಿಂದ ಹೆಚ್ಚುವರಿ ವಿಶೇಷ ಬಸ್ಸು ವ್ಯವಸ್ಥೆ ಮಾಡಲಾಗಿದೆ.. ‌ಅಕ್ಟೋಬರ್
27ರಂದು ನರಕಚತುರ್ದಶಿ ಹಾಗೂ 29ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 25,26 ಹಾಗೂ 27 ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1600 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.‌

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹಾಗೂ
ತಮಿಳುನಾಡು ಮತ್ತು ಆಂಧ್ರಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ಕಾರ್ಯಾಚರಣೆ ಮಾಡಲಾಗುತ್ತೆ..‌

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕ್ಕಿಂಗ್‍ನ್ನು ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತಿದೆ..‌ ಹೋಗುವ & ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವಾಗ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತೆ..‌

ಒಟ್ಟಾರೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಅಂತ‌ ಪ್ರಕಟಣೆ ಹೊರಡಿಸಿದೆ..‌

KN_BNG_03_KSRTC_DEEPAVALI_SPECIAL_BUS_SCRIPT_7201801

Body:.Conclusion:.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.