ETV Bharat / state

ವಿದ್ಯಾರ್ಥಿಗಳೇ, SSLC ಪರೀಕ್ಷೆ ಬರೆಯಲು ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿ : ಶಿವಯೋಗಿ ಕಳಸ ಆದೇಶ - ಎಸ್​ಎಸ್​ಎಲ್​ಸಿ ಪರೀಕ್ಷೆ 2021

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಹಾಜರಾಗುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ..

ksrtc
ಉಚಿತ ಬಸ್​ ಪ್ರಯಾಣ
author img

By

Published : Jul 13, 2021, 1:51 PM IST

ಬೆಂಗಳೂರು : ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪ್ರಯಾಣ ಮಾಡಲು ಅನುಮತಿ ನೀಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಈ ಆದೇಶ ಹೊರ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ವಾಪಸ್ ಬರಲು ಅನುಮತಿ ನೀಡಲಾಗಿದೆ. ಇನ್ನು, ರಸ್ತೆ ಮಧ್ಯದಲ್ಲಿ ಪರೀಕ್ಷಾ ಕೇಂದ್ರಗಳು ಇದ್ದಲ್ಲಿ ಅಲ್ಲಿಯೂ ಸಹ ಕೋರಿಕೆಯ ನಿಲುಗಡೆಗೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್‌ನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರ ಹೊಂದಿರಬೇಕು ಎಂದು ಸೂಚನೆ ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಕೇಂದ್ರಗಳವರೆಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸಲು ಅನುಮತಿಸುವ ಬಗ್ಗೆ ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ವಿಸ್ತೃತ ಆದೇಶ ನೀಡಿದ್ದಾರೆ.

2020-21ನೇ ಸಾಲಿನ ಕರ್ನಾಟಕದ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಗಳನ್ನು ಸರ್ಕಾರದ ಆದೇಶದಂತೆ ಜುಲೈ 19 ಮತ್ತು 22 ರಂದು ನಡೆಸಲು ತೀರ್ಮಾನಿಸಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಕೇಂದ್ರಗಳವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಕೋರಲಾಗಿತ್ತು ಎಂದಿದ್ದಾರೆ.

ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಹಾಜರಾಗುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂಬಂಧ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ನಿಗಮದ ಎಲ್ಲಾ ಚಾಲಕ-ನಿರ್ವಾಹಕರಿಗೆ ಸೂಚಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.