ETV Bharat / state

ಕೆಎಸ್ಆರ್ಟಿಸಿ ಸಿಬ್ಬಂದಿ ಹೃದ್ರೋಗ ಸಂಬಂಧಿತ ಕಾಯಿಲೆ ತಪಾಸಣೆ: ಜಯದೇವ ಸಂಸ್ಥೆಯೊಂದಿಗೆ ಸಾರಿಗೆ ನಿಗಮ ಒಡಂಬಡಿಕೆ - ಕೆಎಸ್ಆರ್ಟಿಸಿ ಕೇಂದ್ರ ಕಚೇರಿ

KSRTC agreement with jayadeva: ಬೆಂಗಳೂರಿನಲ್ಲಿ ಕೆಎಸ್ಆರ್ಟಿಸಿ ಎಂಡಿ ವಿ ಅನ್ಬುಕುಮಾರ್ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ ಸಿ ಎನ್ ಮಂಜುನಾಥ್ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ ಹಾಕಿದರು.

transport Corporation agreement with Jayadeva
ಕೆಎಸ್ಆರ್ಟಿಸಿ ಸಿಬ್ಬಂದಿಗಾಗಿ ಜಯದೇವ ಸಂಸ್ಥೆಯೊಂದಿಗೆ ಸಾರಿಗೆ ನಿಗಮ ಒಡಂಬಡಿಕೆ ಮಾಡಿಕೊಂಡಿತು.
author img

By ETV Bharat Karnataka Team

Published : Nov 2, 2023, 3:50 PM IST

ಬೆಂಗಳೂರು: ಸಾರಿಗೆ ನಿಗಮದ ಬೆಳವಣಿಗೆಯಲ್ಲಿ ನಮ್ಮ ಸಿಬ್ಬಂದಿ ಪ್ರಮುಖ ಪಾತ್ರ ವಹಿಸುತ್ತಾರೆ. ಆದ್ದರಿಂದ ಅವರ ಆರೋಗ್ಯದ ಕಾಳಜಿ ವಹಿಸುವುದು ನಮ್ಮ ಜವಾಬ್ದಾರಿ ಕೂಡ ಆಗಿದೆ. ಕೆಎಸ್​​ಅರ್​ಟಿಸಿ ಸಮಸ್ತ ಸಿಬ್ಬಂದಿಗೆ ಹತ್ತು ಮಾದರಿ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಲು ಐದು ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯವರೊಂದಿಗೆ ಸಾರಿಗೆ ನಿಗಮ ಒಪ್ಪಂದ ಮಾಡಿಕೊಂಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮ್ಮುಖದಲ್ಲಿ ಕೆಎಸ್ಆರ್ಟಿಸಿ ಎಂಡಿ ವಿ ಅನ್ಬುಕುಮಾರ್ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ ಸಿ ಎನ್ ಮಂಜುನಾಥ್ ಅವರು ಒಡಂಬಡಿಕೆಗೆ ಸಹಿ ಹಾಕಿದರು.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಇಂದು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಸಾರಿಗೆ ನಿಗಮವು ಒಡಂಬಡಿಕೆ ಮಾಡಿಕೊಂಡಿದೆ. ಕೆಎಸ್ಆರ್​​ಟಿಸಿ ಸಿಬ್ಬಂದಿ ತಮ್ಮ ಹೃದಯ ಸಂಬಂಧಿ ಸಮಸ್ಯೆಗಳನ್ನು ತಪಾಸಣೆಗಳನ್ನು ಮಾಡಿಸುವುದರಿಂದ ಸಂಭವನೀಯ ಹೃದಯಾಘಾತ ವನ್ನು ತಪ್ಪಿಸಲು ಮತ್ತು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಜೀವಗಳ ರಕ್ಷಣೆ ಆಗುತ್ತದೆ. ಡಾ ಮಂಜುನಾಥ್‌ ಅವರು ಕಡಿಮೆ ದರದಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಈ ಯೋಜನೆ ಜಾರಿಗೊಳಿಸಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಹೃದಯಾಘಾತ ಪ್ರಮಾಣ ಹೆಚ್ಚಳ: ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ ಸಿ ಎನ್ ಮಂಜುನಾಥ್ ಮಾತನಾಡಿ, ಮನುಷ್ಯನ ಆರೋಗ್ಯ ಬಹಳ ಮುಖ್ಯವಾಗಿದೆ. ಅದನ್ನು ಬೆಲೆ ಕೊಟ್ಟು ಕೊಂಡುಕೊಳ್ಳಲಾಗದು. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಮಾಣ ಅತಿ ಹೆಚ್ಚಳವಾಗಿದೆ. ಚಿಕ್ಕ ವಯಸ್ಸಿನವರಲ್ಲಿ ಇದು ಅಧಿಕವಾಗಿದೆ. ವಯಸ್ಸಾದ ತಂದೆ ತಾಯಿಗಳು ಮಕ್ಕಳನ್ನು ಆಸ್ಪತ್ರೆಗೆ ಕರೆತರುವ ಸ್ಥಿತಿ ಎದುರಾಗಿದೆ ಎಂದು ಹೇಳಿದರು.

ಮನುಷ್ಯನ ದೇಹವೇ ಅವನ ಪ್ರಮುಖ ಬಾಳ ಸಂಗಾತಿಯಾಗಿದೆ. ಅದನ್ನು ಯಾವುದೇ ಕಾಯಿಲೆಗಳಿಂದ ರಕ್ಷಿಸಿಕೊಳ್ಳುವುದು ಅವರ ಪ್ರಮುಖ ಜವಾಬ್ದಾರಿ ಆಗಿರುತ್ತದೆ. ಬಿಎಂಟಿಸಿಯಲ್ಲಿ ಈ ಯೋಜನೆಯಡಿ 45 ವರ್ಷದ ಮೇಲ್ಪಟ್ಟ ಸಿಬ್ಬಂದಿ ಈ ಯೋಜನೆಗೆ ಒಳಪಡುತ್ತಾರೆ. ಆದರೆ ಕೆ ಎಸ್‌ ಆರ್‌ ಟಿ ಸಿಯಲ್ಲಿ 40 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಈ ಯೋಜನೆ ಅನುಷ್ಠಾನ ಮಾಡಿರುವುದು ಒಳ್ಳೆಯದು. ಏಕೆಂದರೆ ಈಗ 40 ರ ಆಸುಪಾಸಿನಲ್ಲಿಯೇ ಹೃದಯ ಸಂಬಂಧಿ ತೊಂದರೆಗಳು ಹೆಚ್ಚು ವರದಿಯಾಗುತ್ತಿವೆ ಎಂದರು.

ನಮ್ಮ ಸಂಸ್ಥೆಯ ಮೈಸೂರಿನ ಕೇಂದ್ರದಲ್ಲಿಯೂ ಸಹ ಅಲ್ಲಿಗೆ ಸಮೀಪವಿರುವ ವಿಭಾಗಗಳ ಸಿಬ್ಬಂದಿಗೆ ತಪಾಸಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.

21 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗೆ ಅನುಕೂಲ: ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮಾತನಾಡಿ, ಈಗಾಗಲೇ ನಿಗಮದ ಸಿಬ್ಬಂದಿಗೆ ಹಾಗೂ ಅವರ ಕುಟುಂಬದ ಹಿತದೃಷ್ಟಿಯಿಂದ ಹಲವು ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳನ್ನು ನಿಗಮವು ಜಾರಿಗೆ ತಂದಿದೆ. ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಕೆಎಸ್ಆರ್​ಟಿಸಿ ಸಂಸ್ಥೆ ಮಾಡಿಕೊಂಡಿರುವ ಒಡಂಬಡಿಕೆಯಿಂದ 40 ವರ್ಷ ಮೇಲ್ಪಟ್ಟ 21 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗೆ ಉಪಯೋಗ ಆಗಲಿದೆ. ತಪಾಸಣೆಗೆ ಒಳಗಾಗುವ ಪ್ರತಿ ನೌಕರರ ಪರವಾಗಿ ನಿಗಮದಿಂದ 1200 ರೂ ಅಂದರೆ ವಾರ್ಷಿಕ ರೂ. 2.55 ಕೋಟಿಯನ್ನು ಜಯದೇವ ಆಸ್ಪತ್ರೆಗೆ ಪಾವತಿ ಆಗುತ್ತದೆ. ಈ ಯೋಜನೆಯು ಅಂದಾಜು ಶೇ 62ರಷ್ಟು ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಾರಿಗೆ ನಿಗಮದ ಸೇವೆಯಲ್ಲಿ ಇರುವಾಗ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಸಿಬ್ಬಂದಿ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ ಕೋಟಿ ರೂ ಪರಿಹಾರ ಮೊತ್ತವನ್ನು ವಿತರಿಸಲಾಯಿತು. ಧರ್ಮಸ್ಥಳ ಘಟಕ ಪುತ್ತೂರು ವಿಭಾಗದಡಿ ಸಹಾಯಕ ಸಂಚಾರ ನಿರೀಕ್ಷಕರಾಗಿದ್ದ ಮಂಜುನಾಥ ಟಿ ಅವರ ಕುಟುಂಬಕ್ಕೆ ಹಾಗೂ ಬೆಂಗಳೂರು ಕೇಂದ್ರ ವಿಭಾಗದಲ್ಲಿ ಶ್ರೀನಾಥ್ ಟಿ.ಬಿ ಚಾಲಕ- ನಿರ್ವಾಹಕರಾಗಿದ್ದ ಅವರ ಕುಟುಂಬಕ್ಕೆ ಕೋಟಿ ರೂ ಚೆಕ್‌ ವಿತರಿಸಲಾಯಿತು.

ಇದನ್ನೂಓದಿ:ಮಂಡ್ಯ ಜಿಲ್ಲೆಯ ಎಲ್ಲಾ ಅಂಗಡಿಗಳಿಗೆ ಕನ್ನಡ ನಾಮಫಲಕ ಕಡ್ಡಾಯ: ಜಿಲ್ಲಾಧಿಕಾರಿ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.