ಬೆಂಗಳೂರು: ಕೆಎಸ್ಆರ್ಟಿಸಿ ನಿಗಮದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಯ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೂ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.
ಅಧಿಕಾರಿಗಳು ಹಾಗೂ ಸಿಬ್ಬಂದಿಯು ಕರ್ತವ್ಯಕ್ಕೆ ಬರುವ ಹಾಗೂ ಹೋಗುವ ಸಮಯದಲ್ಲಿ ಕಚೇರಿಯ ಮುಖ್ಯ ದ್ವಾರದಲ್ಲಿರುವ ಬಯೋಮೆಟ್ರಿಕ್ (Biometric Attendance System) ಯಂತ್ರದಲ್ಲಿ ಹಾಜರಾತಿ ನಮೂದಿಸುತ್ತಿದ್ದರು. ಆದರೆ ಕೋವಿಡ್-19 ಮತ್ತು ಒಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಈ ಹಾಜರಾತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ.
ಉಳಿದಂತೆ, ಆಯಾ ಇಲಾಖಾ ಮುಖ್ಯಸ್ಥರು ತಮ್ಮ ಇಲಾಖೆಗಳಿಗೆ ಸಂಬಂಧಪಟ್ಟ ಭೌತಿಕ ಹಾಜರಾತಿ ಪುಸ್ತಕವನ್ನು ನಿರ್ವಹಿಸುವಂತೆ ಕೆಎಸ್ಆರ್ಟಿಸಿ ಆದೇಶಿಸಿದೆ.
ರಾಜ್ಯದಲ್ಲಿ ಇಂದು 25,005 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. 2,01,704 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಕೋವಿಡ್ ಅನ್ನೋದು ಒಂದು ಮೆಡಿಕಲ್ ಮಾಫಿಯಾ: ಅಗ್ನಿ ಶ್ರೀಧರ್