ETV Bharat / state

ಹಾಲಿನ ಬೆಲೆ ಲೀಟರಿಗೆ 3 ರೂಪಾಯಿ ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ.. ಕಾಂಗ್ರೆಸ್ಸಿಗರು ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ: ಕುಮಾರಸ್ವಾಮಿ ಕಿಡಿ

ಹಾಲಿನ ಬೆಲೆ ಏರಿಕೆ ಖಂಡಿಸಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್​​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹೆಚ್​ ಡಿ  ಕುಮಾರಸ್ವಾಮಿ
ಹೆಚ್​ ಡಿ ಕುಮಾರಸ್ವಾಮಿ
author img

By

Published : Jul 22, 2023, 12:35 PM IST

ಬೆಂಗಳೂರು: ಆಲ್ಕೋಹಾಲಿನ ಬೆಲೆ ಏರಿಸಿದ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ರೂ. 3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ!!! ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದಿದ್ದಾರೆ.

  • ಆಲ್ಕೊಹಾಲಿನ ಬೆಲೆ ಏರಿಸಿದ ನಂತರ @INCKarnataka ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ!!! 1/4

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023 " class="align-text-top noRightClick twitterSection" data=" ">

ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರ್ಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ಹೆಚ್​ಡಿಕೆ ಟೀಕಿಸಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಹೆಚ್​ಡಿಕೆ ವಾಗ್ದಾಳಿ ನಡೆಸಿದ್ದಾರೆ.

  • ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.3/4#ಬೆಲೆ_ಏರಿಕೆ_ಗ್ಯಾರಂಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿನ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿ, ಪ್ರತಿ ಲೀಟರ್ ಹಾಲಿಗೆ ಕನಿಷ್ಠ 3 ರೂ. ಹೆಚ್ಚಳ ಮಾಡಲು ನಿರ್ಧರಿಸಿದ್ದಾರೆ. ಆ.1ರಿಂದ ಜಾರಿಯಾಗುವಂತೆ ಹಾಲಿನ ದರ ಹೆಚ್ಚಳ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದಿದ್ದಾರೆ.

  • ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ.4/4#ಜನರ_ಬದುಕು_ಹಾಲಾಹಲ

ಕೆಎಂಎಫ್ ಅಧ್ಯಕ್ಷರಾಗಿ ಶಾಸಕ ಭೀಮಾ ನಾಯಕ್ ಆಯ್ಕೆಯಾಗಿದ್ದ ದಿನದಂದೇ ಪ್ರತಿ ಲೀಟರ್ ಹಾಲಿಗೆ ಐದು ರೂಪಾಯಿ ಹೆಚ್ಚಳ ಮಾಡುವ ಘೋಷಣೆ ಮಾಡಿದ್ದರು. ಅದರೇ ಹಾಲನ್ನು ಕೊಳ್ಳುವ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಸಿದ್ದರಾಮಯ್ಯ 3 ರೂ. ಹೆಚ್ಚಳಕ್ಕೆ ಸಮ್ಮತಿ ನೀಡಿದ್ದಾರೆ. ಆ.1ರಿಂದ ಹಾಲಿನ ದರ ಹೆಚ್ಚಳವಾಗಲಿದ್ದು, 5 ರೂ. ಬದಲು 3 ರೂ.ಗೆ ಒಪ್ಪಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರ ಪ್ರಯತ್ನ ಪಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.