ETV Bharat / state

ದೇವೇಗೌಡರ ನಿವಾಸಕ್ಕೆ ದೌಡಾಯಿಸಿದ ಕುಮಾರಸ್ವಾಮಿ: ಮುಂದಿನ ನಡೆ ಕುರಿತು ಗಂಭೀರ ಚರ್ಚೆ

ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಅಸಮಾಧಾನದ ಹೊಗೆ ಇದೀಗ ನಿರ್ಣಾಯಕ ಘಟ್ಟಕ್ಕೆ ತಲುಪಿದೆ. ಈ ಅಸಮಾಧಾನದ ಹೊಗೆ ಹತ್ತಿಕ್ಕಲು ಮೈತ್ರಿ ಮುಖಂಡರು ಚರ್ಚೆಯಲ್ಲಿ ತೊಡಗಿದ್ದಾರೆ. ಸದ್ಯ ಸಿಎಂ ಕುಮಾರಸ್ವಾಮಿಯವರು, ಜೆಡಿಎಸ್​ ವರಿಷ್ಠ ಹೆಚ್​ ಡಿ ದೇವೇಗೌಡರೊಂದಿಗೆ ಚರ್ಚೆ ನಡೆಸಿದ್ದಾರೆ.

ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ
author img

By

Published : Jul 8, 2019, 10:11 AM IST

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ವಿಪ್ಲವ ಶುರುವಾಗಿದೆ. ಮೈತ್ರಿ ಸರ್ಕಾರದ ಕೆಲವು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಉಂಟಾಗಿರುವ ರಾಜಕೀಯ ತಲ್ಲಣ ತಣಿಸಲು ಉಭಯ ಪಕ್ಷಗಳ ವರಿಷ್ಠರು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ.

ತೀವ್ರಗೊಂಡ ರಾಜಕೀಯ ಬಿಕ್ಕಟ್ಟನ್ನು ತಣಿಸಲು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾತುಕತೆ ನಡೆಸುತ್ತಿದ್ದಾರೆ. ಇಂದು ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಆಗಮಿಸಿರುವ ಸಿಎಂ, ದೇವೇಗೌಡರ ಜೊತೆ ಮುಂದಿನ ಹೆಜ್ಜೆ ಕುರಿತು ಗಹನವಾದ ಚರ್ಚೆಯಲ್ಲಿ ತೊಡಗಿದ್ದಾರೆ. ಇದೀಗ ಸಚಿವರಾದ ಹೆಚ್.ಡಿ. ರೇವಣ್ಣ, ಜಿ.ಟಿ. ದೇವೇಗೌಡ ಅವರು ಸಹ ಜೆಡಿಎಸ್​ ವರಿಷ್ಠರ ನಿವಾಸಕ್ಕೆ ಆಗಮಿಸಿದ್ದು, ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ದೇವೇಗೌಡರ ನಿವಾಸಕ್ಕೆ ಆಗಮಿಸಿದ ಕುಮಾರಸ್ವಾಮಿ

ಜೆಡಿಎಸ್ ಶಾಸಕರನ್ನು ರೆಸಾರ್ಟ್​ಗೆ ಕರೆದೊಯ್ಯಲು ಸಿಎಂ ನಿರ್ಧಾರ:

ದೇವೇಗೌಡರ ನಿವಾಸದಲ್ಲಿ ಸಿಎಂ ಕುಮಾರಸ್ವಾಮಿ, ರೇವಣ್ಣ ಅವರು ದೇವೇಗೌಡರ ಜೊತೆಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು ಶತಾಯಗತಾಯ ಸರ್ಕಾರ ಉಳಿಸಿಕೊಳ್ಳುವ ಕೊನೆ ಹಂತದ ಕಸರತ್ತು ಮಾಡುತ್ತಿದ್ದಾರೆ.

ಬಿಜೆಪಿ ನಾಯಕರು ಆಪರೇಷನ್ ಕಮಲ ನಡೆಸಿದ್ದಾರೆ. ಸಿಎಂ ಎಲ್ಲರೂ ಒಗ್ಗಟ್ಟಾಗಿರಿ ಎಂದು ಸೂಚಿಸಿದ್ದಾರೆ. ಕಾಂಗ್ರೆಸ್ - ಜೆಡಿಎಸ್ ಪಕ್ಷದ ಹಿರಿಯ ‌ಸಚಿವರು ರಾಜೀನಾಮೆ ನೀಡುವ ಸಾಧ್ಯತೆ ‌ಇದೆ. ಜೆಡಿಎಸ್‌ ತೊರೆದಿರುವ ಶಾಸಕರ ಮನವೊಲಿಸುವ ಜವಾಬ್ದಾರಿಯನ್ನು ಸಿಎಂ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಅಗತ್ಯಬಿದ್ದರೆ ಜೆಡಿಎಸ್ ಶಾಸಕರನ್ನು ರೆಸಾರ್ಟ್​ಗೆ ಕರೆತರಲು ಚಿಂತನೆ ಮಾಡಿದ್ದಾರೆ ಎಂದು ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.

Intro:Body:

cm

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.