ETV Bharat / state

ಇಂದು ಜೆಡಿಎಸ್ ಜನತಾ ಮಿತ್ರ ಸಮಾರೋಪ ಸಮಾವೇಶ: ಸಮಾವೇಶ ಸ್ಥಳ ಪರಿಶೀಲಿಸಿದ ಕುಮಾರಸ್ವಾಮಿ

ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಇಂದು ಜೆಡಿಎಸ್ ಜನತಾ ಮಿತ್ರ ಸಮಾರೋಪ ಸಮಾವೇಶ ನಡೆಯಲಿದ್ದು ಕುಮಾರಸ್ವಾಮಿ ಅವರು ಸಮಾವೇಶ ಸ್ಥಳ ಪರಿಶೀಲನೆ ಮಾಡಿದರು.

author img

By

Published : Oct 8, 2022, 8:02 AM IST

Kumaraswamy inspected the convention venue
ಸಮಾವೇಶ ಸ್ಥಳ ಪರಿಶೀಲನೆ ಮಾಡಿದ ಕುಮಾರಸ್ವಾಮಿ

ಬೆಂಗಳೂರು : ಇಂದು ಮಧ್ಯಾಹ್ನ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಜೆಡಿಎಸ್​​ನ ಮಹತ್ವಾಕಾಂಕ್ಷೆಯ ಜನತಾ ಮಿತ್ರ ಸಮಾರೋಪ ಸಮಾರಂಭವು ನಡೆಯಲಿದ್ದು, ಶುಕ್ರವಾರ ಸಂಜೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೈದಾನಕ್ಕೆ ಭೇಟಿ ನೀಡಿ ವೇದಿಕೆ ಸೇರಿದಂತೆ ಅಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.

ಬೃಹತ್ ವೇದಿಕೆಯನ್ನು ನಿರ್ಮಾಣ ಮಾಡಲಾಗಿದ್ದು, ವೇದಿಕೆ ಹಿಂಭಾಗದಲ್ಲಿ ಅಷ್ಟೇ ದೊಡ್ಡ ಪ್ರಮಾಣದ ಎಲ್​ಇಡಿ ಪರದೆಯನ್ನು ಅಳವಡಿಸಲಾಗಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಸಮಾರಂಭ ಆರಂಭವಾಗಲಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಭೋಜೆಗೌಡ, ಕೆ.ಎನ್.ತಿಪ್ಪೇಸ್ವಾಮಿ, ಜೆಡಿಎಸ್​​ನ ನಗರ ಘಟಕದ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಹಲವು ಮುಖಂಡರು ಸಮಾವೇಶದ ಸ್ಥಳವನ್ನು ವೀಕ್ಷಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್​ ಡಿ ಕುಮಾರಸ್ವಾಮಿ, ಜನತಾ ಮಿತ್ರದ ಸಮಾರೋಪ ಸಮಾರಂಭ ಮಳೆಯಿಂದಾಗಿ ಮೂರು ಬಾರಿ ಮುಂದೂಡಲ್ಪಟ್ಟಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದ ಮೂಲಕ ಬೆಂಗಳೂರಿನ ಸಮಸ್ಯೆ ಅನಾವರಣವಾಗಲಿದೆ. ಸಾವಿರಾರು ಸಮಸ್ಯೆಗಳ‌ ಬಗ್ಗೆ ಸಾರ್ವಜನಿಕರು ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿಯ ನೀಲನಕ್ಷೆ ಸಭೆಯಲ್ಲಿ ಅನಾವರಣವಾಗಲಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶದಲ್ಲಿ ಒಂದು ಲಕ್ಷ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಇದಕ್ಕೂ ಮುನ್ನ ವೀಕ್ಷಣೆ ಮಾಡಿದ ಪರಿಷತ್ ಸದಸ್ಯ ಟಿ.ಎ.ಶರವಣ ಮಾತನಾಡಿ, ಜನರ ಸಮಸ್ಯೆಗಳನ್ನು ಆಲಿಸುವ ಕೆಲಸ ಕಳೆದ 15 ದಿನಗಳಿಂದ ಆಗಿದೆ. ಇದರ ಸಮಾರೋಪ ಸಮಾರಂಭ ಇಂದು ನಡೆಯಲಿದೆ ಎಂದು ತಿಳಿಸಿದರು.

ಬೆಂಗಳೂರು ಜನರ ಸಮಸ್ಯೆ ಆಲಿಸುವ ಕೆಲಸ ಸರ್ಕಾರ ಮಾಡಿಲ್ಲ. ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗಿ ಕೆಲಸ ಮಾಡಿದೆ. ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಕೆಲಸವನ್ನು ಜೆಡಿಎಸ್ ಮಾಡುತ್ತಿದೆ ಎಂದರು.

ಪಕ್ಷದ ಎಲ್ಲಾ ಮುಖಂಡರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈ ಸಮರೋಪ ಸಮಾರಂಭ ದೊಡ್ಡ ಮಟ್ಟದ ಯಶಸ್ಸು ಕಾಣಲಿದೆ. ಮುಂಬರುವ ಬಿಬಿಎಂಪಿ ಚುನಾವಣೆಗೆ ಇದು ದಿಕ್ಸೂಚಿಯಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಬೊಮ್ಮಾಯಿಯವರೇ ಬಿಎಸ್‌ವೈ ಜೊತೆ ತಿರುಗಾಡಿದ್ರೆ ನೀವೂ ಲಾಗ ಹೊಡಿಯುತ್ತೀರಿ: ಯತ್ನಾಳ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.