ETV Bharat / state

ಉಪ ಚುನಾವಣೆ ಕಾರ್ಯತಂತ್ರ ರೂಪಿಸಲು ಹೆಚ್​​​ಡಿಕೆ​​ ಸಭೆ, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ - ಜೆಡಿಎಸ್​​ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ

ಈ ಉಪ ಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಎರಡೂ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳ ನಡುವೆ ಸಮಾಲೋಚನೆ ನಡೆಸಿರುವ ಹೆಚ್‌ಡಿಕೆ, ವಾರದೊಳಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಕಟ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ..

Kumaraswamy meeting with JDS activists
ಉಪಚುನಾವಣೆ ಕಾರ್ಯತಂತ್ರ ರೂಪಿಸಲು ಹೆಚ್​​​ಡಿಕೆ​​ ಸಭೆ : ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ
author img

By

Published : Oct 2, 2020, 3:06 PM IST

ಬೆಂಗಳೂರು : ರಾಜರಾಜೇಶ್ವರಿನಗರ ಹಾಗೂ ಶಿರಾ ಕ್ಷೇತ್ರಗಳ ಉಪಚುನಾವಣೆ ಘೋಷಣೆ ಹಿನ್ನೆಲೆ ಚುನಾವಣಾ ಕಾರ್ಯತಂತ್ರ ರೂಪಿಸಲು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಇಂದು ತಮ್ಮ ಪಕ್ಷದ ಮುಖಂಡರ ಸಭೆ ಕರೆದಿದ್ದಾರೆ.

ಜೆಪಿನಗರದ ತಮ್ಮ ನಿವಾಸದಲ್ಲಿ ಕರೆದಿರುವ ಸಭೆಯಲ್ಲಿ ಆರ್‌ಆರ್‌ನಗರ ಕ್ಷೇತ್ರದ ಹಲವಾರು ಮುಖಂಡರು ಭಾಗವಹಿಸಿದ್ದಾರೆ. ಅಭ್ಯರ್ಥಿ ಆಯ್ಕೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಹಲವು ಮುಖಂಡರು ತಮ್ಮ ತಮ್ಮ ಅಭಿಪ್ರಾಯಗಳನ್ನು ನೀಡಿದ್ದಾರೆ. ಎಲ್ಲವನ್ನೂ ಕುಮಾರಸ್ವಾಮಿ ಅವರು ಆಲಿಸಿ, ಮುಖಂಡರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ.

ಉಪಚುನಾವಣೆ ಕಾರ್ಯತಂತ್ರ ರೂಪಿಸಲು ಹೆಚ್​​​ಡಿಕೆ​​ ಸಭೆ

ಈ ಉಪ ಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಎರಡೂ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳ ನಡುವೆ ಸಮಾಲೋಚನೆ ನಡೆಸಿರುವ ಹೆಚ್‌ಡಿಕೆ, ವಾರದೊಳಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಕಟ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಎರಡೂ ಕ್ಷೇತ್ರಗಳು ಜೆಡಿಎಸ್‍ಗೆ ಪ್ರತಿಷ್ಠೆಯಾಗಿರುವುದರಿಂದ ಎಲ್ಲಾ ದೃಷ್ಟಿಕೋನದಿಂದಲೂ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಲೆಕ್ಕಾಚಾರವನ್ನ ವರಿಷ್ಠರು ಹಾಕುತ್ತಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಮಾಜಿ ಸಚಿವ ದಿ. ಬಿ.ಸತ್ಯನಾರಾಯಣ ಕುಟುಂಬದವರು ಅಲ್ಲದೆ ಇತರೆ ಆಕಾಂಕ್ಷಿಗಳು ಹೆಚ್ಚಿರುವುದರಿಂದ ಈಗಾಗಲೇ ಎರಡು ಮೂರು ಸುತ್ತಿನ ಸಮಾಲೋಚನೆಯನ್ನು ಮುಖಂಡರ ಜೊತೆ ನಡೆಸಿದ್ದಾರೆ.

ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳಿಗೆ ಸರಿಸಮಾನಾಗಿ ಪೈಪೋಟಿ ನೀಡುವಂತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಉದ್ದೇಶವಿದೆ. ಈಗ ಕ್ಷೇತ್ರದಲ್ಲಿ ಏಳೆಂಟು ಮಂದಿ ಟಿಕೆಟ್ ಆಕಾಂಕ್ಷಿಗಳು ಇರುವುದರಿಂದ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕೂಡ ಹಲವರ ಹೆಸರು ಕೇಳಿಬರುತ್ತಿವೆ. ಜೆಡಿಎಸ್​​ನ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಆರ್ ಪ್ರಕಾಶ್, ಮಾಜಿ ಕಾರ್ಪೊರೇಟರ್ ರಾಮಚಂದ್ರ ಹಾಗೂ ಹನುಮಂತರಾಯಪ್ಪ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಆದರೆ, ಜೆಡಿಎಸ್ ವರಿಷ್ಠರ ಒಲವು ಯಾರ ಕಡೆಗೆ ಇದೆ ಎಂಬುದನ್ನು ಕಾದು ನೋಡಬೇಕಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.