ಬೆಂಗಳೂರು/ನ್ಯೂಜೆರ್ಸಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ನ್ಯೂಜೆರ್ಸಿಯಿಂದ ವಾಷಿಂಗ್ಟನ್ ಡಿಸಿಗೆ ತೆರಳಿದ್ದಾರೆ.
ಹೂಡಿಕೆದಾರರ ಸಭೆಯಲ್ಲಿ ಪಾಲ್ಗೊಳ್ಳಲು ವಾಷಿಂಗ್ಟನ್ ಡಿಸಿಗೆ ತೆರಳಿದ ಸಿಎಂ ಕುಮಾರಸ್ವಾಮಿ ಅವರನ್ನು ನ್ಯೂಜೆರ್ಸಿಯ ಕನ್ನಡಿಗರಾದ ಅಮರನಾಥಗೌಡ, ವಿಶ್ವಾಮಿತ್ರ, ಚಿಕ್ಕಸ್ವಾಮಿ ಮತ್ತಿತರರು ಬೀಳ್ಕೊಟ್ಟರು.
ನಾಳೆ ಸಿಎಂ ವಾಷಿಂಗ್ಟನ್ ಡಿಸಿಯಲ್ಲಿ ಕನ್ನಡಿಗರು ಏರ್ಪಡಿಸಿರುವ ಹೂಡಿಕೆದಾರರೊಂದಿಗಿನ ಅನೌಪಚಾರಿಕ ಸಭೆಯಲ್ಲಿ ಪಾಲ್ಗೊಂಡು, ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಜುಲೈ 5ರಂದು ಒಕ್ಕಲಿಗರ ಪರಿಷತ್ ಅಮೆರಿಕದ ಸಮಾವೇಶದಲ್ಲಿ ಭಾಗವಹಿಸಿ, ಅಂದೇ ಬೆಂಗಳೂರಿಗೆ ಹಿಂದಿರುಗುಲಿದ್ದಾರೆ.
ವಾಷಿಂಗ್ಟನ್ ಡಿಸಿಗೆ ತೆರಳುವ ಮುನ್ನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಸಿಎಂ ಜಿ.ಪರಮೇಶ್ವರ್ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಮುಖಂಡರು ಮುಖ್ಯಮಂತ್ರಿಗಳಿಗೆ ಸ್ಪಷ್ಟಪಡಿಸಿದ್ದಾರಂತೆ.