ETV Bharat / state

ಬಿಜಿಎಸ್ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆ ಆಗಿ ಬಳಸಿಕೊಳ್ಳಿ : ರಾಮನಗರ ಡಿಸಿಗೆ ಹೆಚ್​ಡಿಕೆ ಸೂಚನೆ - Kumaraswamy Note to Ramanagara DC

ಕ್ವಾರಂಟೈನ್​ಗೆ ಸ್ಥಳದ ಅಭಾವ ಇರುವುದರಿಂದ ವಂದಾರಗುಪ್ಪೆ ಬಳಿಯ ಪೊಲೀಸ್ ತರಬೇತಿ ಕೇಂದ್ರ ಬಳಸಿಕೊಳ್ಳುವ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ. ಗೃಹ ಸಚಿವರು ಕೂಡ ಈ ವಿಷಯದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.

ರಾಮನಗರ ಡಿಸಿಗೆ ಹೆಚ್​ಡಿಕೆ ಸೂಚನೆ
ರಾಮನಗರ ಡಿಸಿಗೆ ಹೆಚ್​ಡಿಕೆ ಸೂಚನೆ
author img

By

Published : Jul 1, 2020, 10:52 PM IST

ಬೆಂಗಳೂರು : ರಾಮನಗರ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಕೇಸ್​ಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಮನಗರದಲ್ಲಿನ ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.

ನಗರದ ಬಿಜಿಎಸ್ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆ ಆಗಿ ಬಳಸಿಕೊಳ್ಳಿ. ಇದಕ್ಕೆ ಹಣಕಾಸಿನ ಕೊರತೆಯಿದ್ದರೆ ಶಾಸಕರ ನಿಧಿಯ ಹಣವನ್ನು ಬಳಸಿಕೊಳ್ಳುವಂತೆ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಕ್ವಾರಂಟೈನ್​ಗೆ ಸ್ಥಳದ ಅಭಾವ ಇರುವುದರಿಂದ ವಂದಾರಗುಪ್ಪೆ ಬಳಿಯ ಪೊಲೀಸ್ ತರಬೇತಿ ಕೇಂದ್ರ ಬಳಸಿಕೊಳ್ಳುವ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ. ಗೃಹ ಸಚಿವರು ಕೂಡ ಈ ವಿಷಯದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.