ETV Bharat / state

ನನ್ನ ಬಗ್ಗೆ ಮಾತನಾಡುವಾಗ ಸಿಎಂ ನೋಡಿಕೊಂಡು ಮಾತನಾಡಲಿ: ಕುಮಾರಸ್ವಾಮಿ ವಾರ್ನಿಂಗ್​

ಕಾಂಗ್ರೆಸ್ ಬಗ್ಗೆ ಬೊಮ್ಮಾಯಿ ಏನು ಬೇಕಾದರೂ ಮಾತನಾಡಲಿ, ಆದರೆ ನನ್ನ ಬಗ್ಗೆ ನೋಡಿಕೊಂಡು ಮಾತನಾಡಲಿ ಎಂದು ಬಸವರಾಜ್​ ಬೊಮ್ಮಾಯಿ ವಿರುದ್ದ ಹೆಚ್​ಡಿಕೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

author img

By

Published : Sep 2, 2022, 7:38 PM IST

KN_BNG_04_JDS_Office_Kumaraswamy_Reaction_Script_7208083
ಕುಮಾರಸ್ವಾಮಿ

ಬೆಂಗಳೂರು: ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದ್ದಾರೆ.

ಮುಂಬರುವ ಚುನಾವಣೆ ಹಾಗೂ ಜೆಡಿಎಸ್​ನ ಪಂಚರತ್ನ ರಥ ಯಾತ್ರೆ ಕಾರ್ಯಕ್ರಮದ ಕುರಿತು ಚರ್ಚಿಸಲು ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕರೆದಿದ್ದ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಬಗ್ಗೆ ಸಿಎಂ ಏನು ಬೇಕಾದರೂ ಮಾತನಾಡಲಿ, ನನ್ನ ಬಗ್ಗೆ ಮಾತನಾಡುವಾಗ ನೋಡಿಕೊಂಡು ಮಾತನಾಡಲಿ ಎಂದು ಗರಂ ಆದರು.

ಸಿಎಂ ವಿರುದ್ದ ಕುಮಾರಸ್ವಾಮಿ ಕಿಡಿ

ಫೆರಿಫೆರಲ್ ರಿಂಗ್ ರೋಡ್​ಗೆ 6 ಸಾವಿರ ಕೋಟಿ ರೂ. ಯೋಜನೆ ರೂಪಿಸಿದ್ದೆ. ಇಂದು 22 ಸಾವಿರ ಕೋಟಿ ರೂ. ಆಗಿದೆ. ಇದು ಕಾಂಗ್ರೆಸ್, ಬಿಜೆಪಿಯ ಸಾಧನೆ ಎಂದು ವಾಗ್ದಾಳಿ ನಡೆಸಿದರು. ರಾಜಕಾಲುವೆ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಬಿಡುಗಡೆ ಮಾಡಿದ್ದೇನೆಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಾದರೆ ಆ ಹಣ ಯಾರ ಮನೆಗೆ ಹೋಯಿತು? ಎಂದು ಪ್ರಶ್ನಿಸಿದರು.

ನನ್ನ ಎರಡು ಅವಧಿಯಲ್ಲಿ ಅಕ್ರಮಕ್ಕೆ ಪೋಷಣೆ ಮಾಡಿರುವ ದಾಖಲಾತಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು. ಸರ್ಕಾರಿ ಜಮೀನು ಲೂಟಿ ಹೊಡೆಯುವ ಬಗ್ಗೆ ಸದನ ಸಮಿತಿ ಮಾಡಿದ್ದೆ. ಯಾರ ಕಾಲದಲ್ಲಿ ಏನಾಗಿದೆಯೆಂದು ಮುಖ್ಯಮಂತ್ರಿಗಳು ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು.

ಈಗೇನೋ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಮಣ್ಣು ಸಂಗ್ರಹ ಮಾಡಿ ಥೀಮ್ ಪಾರ್ಕ್ ಮಾಡುತ್ತೇನೆ ಅಂತಿದ್ದಾರೆ. ಈಗ ರಾಜ್ಯದಲ್ಲಿ ಮಣ್ಣಿನ ಸಂಗ್ರಹ ಅಂತೆ. ಮೊದಲು ಮಳೆಯಿಂದ ಆಗಿರುವ ಸಮಸ್ಯೆಯಿಂದ ಜನರಿಗೆ, ರೈತರಿಗೆ ಅನುಕೂಲ ಮಾಡಿಕೊಡ್ರಪ್ಪ ಎಂದು ವ್ಯಂಗ್ಯವಾಡಿದ ಹೆಚ್​ಡಿಕೆ, ಇವರದ್ದೆಲ್ಲ ಕೇವಲ ಪ್ರಚಾರ ಅಷ್ಟೆ. ಕಳೆದ ಬಾರಿ ಸಿಎಂ ಪ್ರದಕ್ಷಿಣೆ ಹಾಕಿದ್ರು. ಸಮಸ್ಯೆ ಪರಿಹಾರ ಆಗಿಲ್ಲ. ಇದಕ್ಕಿಂತ ಉದಾಹರಣೆ ಬೇಕಾ? ಎಂದು ಸಿಎಂ ವಿರುದ್ದ ಕುಮಾರಸ್ವಾಮಿ ಕಿಡಿಕಾರಿದರು.

ಇದನ್ನೂ ಓದಿ: ನಾ ಖಾವೂಂಗಾ ನಾ ಖಾನೇದೂಂಗಾ ಎಂದು ಹೇಳುವುದು ನಿಜಕ್ಕೂ ಸತ್ಯವೇ ಅಥವಾ ಚುನಾವಣಾ ಘೋಷವಾಕ್ಯವೇ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.