ETV Bharat / state

ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ: ಕುಮಾರಸ್ವಾಮಿ ಟೀಕೆ - ETV Bharath Kannada news

ಕೈ ಸರ್ಕಾರ ಎರಡನೇ ಕ್ಯಾಬಿನೆಟ್​ ಮೀಟಿಂಗ್​ ನಂತರ ಸುದ್ಧಿಗೋಷ್ಠಿ ನಡೆಸಿ ಚುನಾವಣಾ ಪೂರ್ವ ಘೋಷಿಸಿದ್ದ ಪಂಚ ಗ್ಯಾರೆಂಟಿಗಳನ್ನು ಜಾರಿಗೆ ತಂದಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟರ್​ನಲ್ಲಿ ಟೀಕೆ ಮಾಡಿದ್ದಾರೆ.

kumaraswamy
ಕುಮಾರಸ್ವಾಮಿ ಟೀಕೆ
author img

By

Published : Jun 2, 2023, 9:55 PM IST

ಬೆಂಗಳೂರು: ಷರತ್ತು ಸಹಿತವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

  • ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ.5/6

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 2, 2023 " class="align-text-top noRightClick twitterSection" data=" ">

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ 'ಷರತ್ತು ಸಹಿತ' ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದಿದ್ದಾರೆ.

ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರ್ಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು. ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು!

ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ 'ಪ್ರಸಕ್ತ ಸಾಲಿಗೆ ಮಾತ್ರ' ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ 'ನಕಲಿ ಗ್ಯಾರಂಟಿ'ಗೆ ಶಾಸ್ತಿ ದೂರವಿಲ್ಲ ಎಂದು ಟೀಕಿಸಿದ್ದಾರೆ.

ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ ಎಂದು ಹೇಳಿದ್ದಾರೆ.

ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ 'ಷರತ್ತು ಸರಕಾರ'ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದಿದ್ದಾರೆ.

ಎರಡನೇ ಕ್ಯಾಬಿನೆಟ್​ ನಂತರ ಜಾರಿಗೆ ಬಂದ ಗ್ಯಾರಂಟಿಗಳು: ವಿಧಾನಸೌಧದಲ್ಲಿ ಇಂದು ಸರ್ಕಾರ ರಚನೆಯ ನಂತರ ನಡೆದ ಎರಡನೇ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಎಲ್ಲ ಐದು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದರು.

ಕೈ ಪಕ್ಷ ಚುನಾವಣೆಯ ಸಮಯದಲ್ಲಿ ರಾಜ್ಯದ ಜನತೆಗೆ ಪಂಚ ಭರವಸೆಗಳನ್ನು ನೀಡಿದ್ದರು. ಪ್ರಥಮ ಕ್ಯಾಬಿನೆಟ್​ನಲ್ಲಿ ಅವುಗಳಿಗೆ ತಾತ್ವಿಕ ಒಪ್ಪಿಗೆಯನ್ನು ನೀಡಲಾಗಿತ್ತು. ಅಂದು ಎರಡನೇ ಕ್ಯಾಬಿನೆಟ್​ನಲ್ಲಿ ಎಲ್ಲವನ್ನು ಜಾರಿಗೊಳಿಸುವ ಬಗ್ಗೆ ಹೇಳಲಾಗಿತ್ತು ಅದರಂತೆ ಇಂದು ಸಿಎಂ ಮತ್ತು ಡಿಸಿಎಂ ಗ್ಯಾರೆಂಟಿಗಳ ಷರತ್ತು ಮತ್ತು ಅದು ಎಂದಿನಿಂದ ಜಾರಿಗೆ ಬರಲಿದೆ ಎಂಬುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ಎಲ್ಲರಿಗೂ 200 ಯೂನಿಟ್​ ಫ್ರೀ ವಿದ್ಯುತ್​​​ .. ಗೃಹ ಲಕ್ಷ್ಮಿ ಆಗಸ್ಟ್​ 15ರಿಂದ ಜಾರಿ.. ಮಹಿಳೆಯರಿಗೆ ಜೂನ್​ 11 ರಿಂದ ಬಸ್​​ ಫ್ರೀ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.