ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಟ್ಯೂಷನ್ ಗೆ ಬಂದ 10 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ.
ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ: ಮಂಡ್ಯ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ: ಕಾಮುಕನಿಗೆ ಕಠಿಣ ಶಿಕ್ಷೆ ಆಗಲೆಂದು ಸಿದ್ದರಾಮಯ್ಯ ಆಗ್ರಹ