ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳ ಒಕ್ಕೂಟ ರಚಿಸುವ ತಂತ್ರಗಾರಿಕೆ ಪ್ರಾರಂಭವಾಗಿದ್ದು, ಇದರ ಭಾಗವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕೋಲ್ಕತ್ತಾದಲ್ಲಿ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಪ್ರಾದೇಶಿಕ ಪಕ್ಷಗಳಲ್ಲಿ ಒಮ್ಮತ ರೂಪಿಸುವ ಸಲುವಾಗಿ ಸಭೆ: ಕೋಲ್ಕತ್ತಾದ ಭವಾನಿಪುರದಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ದೇಶದ ಪ್ರಸಕ್ತ ರಾಜಕೀಯ ವಿದ್ಯಮಾನ ಕುರಿತು ಉಭಯ ನಾಯಕರು ಸಮಾಲೋಚನೆ ನಡೆಸುತ್ತಿದ್ದಾರೆ. 2024 ರ ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಯನ್ನು ಎದುರಿಸುವ ತಂತ್ರಗಳ ಬಗ್ಗೆ ಚರ್ಚಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಸಹ ಮಣಿಸುವ ಕುರಿತು ಮಾತುಕತೆಯೂ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳಲ್ಲಿ ಒಮ್ಮತ ರೂಪಿಸುವ ಸಲುವಾಗಿ ಸಭೆ ನಡೆಸಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
-
Former CM of Karnataka and @JanataDal_S leader Shri @hd_kumaraswamy called upon Hon'ble CM Smt @MamataOfficial today, in Kalighat, Kolkata.
— All India Trinamool Congress (@AITCofficial) March 24, 2023 " class="align-text-top noRightClick twitterSection" data="
Few glimpses from the meeting 👇 pic.twitter.com/0iitS70Gwy
">Former CM of Karnataka and @JanataDal_S leader Shri @hd_kumaraswamy called upon Hon'ble CM Smt @MamataOfficial today, in Kalighat, Kolkata.
— All India Trinamool Congress (@AITCofficial) March 24, 2023
Few glimpses from the meeting 👇 pic.twitter.com/0iitS70GwyFormer CM of Karnataka and @JanataDal_S leader Shri @hd_kumaraswamy called upon Hon'ble CM Smt @MamataOfficial today, in Kalighat, Kolkata.
— All India Trinamool Congress (@AITCofficial) March 24, 2023
Few glimpses from the meeting 👇 pic.twitter.com/0iitS70Gwy
ಮಮತಾರನ್ನು ಪಕ್ಷದ ಪರವಾಗಿ ಪ್ರಚಾರಕ್ಕೆ ಆಹ್ವಾನಿಸುವ ಸಾಧ್ಯತೆ: ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿನ ವಿಧಾನಸಭಾ ಚುನಾವಣೆಯ ಕುರಿತು ಮಾಹಿತಿ ನೀಡಲಿದ್ದಾರೆ. ಅಲ್ಲದೇ, ಪ್ರಾದೇಶಿಕ ಪಕ್ಷಗಳ ಒಗ್ಗೂಡುವಿಕೆಯಲ್ಲಿ ಸಹಕಾರ ನೀಡುವುದಾಗಿಯೂ ಹೇಳಿದ್ದಾರೆ. ಇದೇ ವೇಳೆ ಮಮತಾ ಬ್ಯಾನರ್ಜಿ ಅವರನ್ನು ವಿಧಾನಸಭಾ ಚುನಾವಣೆಗೆ ಪಕ್ಷದ ಪರವಾಗಿ ಪ್ರಚಾರಕ್ಕೆ ಆಹ್ವಾನಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಅವರು ಆಗಮಿಸಿದ್ದರು. ಮೊದಲಿನಿಂದಲೂ ತೃಣಮೂಲ ಕಾಂಗ್ರೆಸ್ ಜೊತೆ ಜೆಡಿಎಸ್ ಸ್ನೇಹಮಯ ಸಂಬಂಧ ಹೊಂದಿದೆ.
ಕಳೆದ ವಾರ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆ ಮಮತಾ ಬ್ಯಾನರ್ಜಿ ಮಾತುಕತೆ ನಡೆಸಿದ್ದರು. ಇದೀಗ ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಸಮಾನ ಆಂತರ ಕಾಯ್ದುಕೊಳ್ಳುವುದಾಗಿ ಸಮಾಜವಾದಿ ಪಕ್ಷ ಮತ್ತು ಟಿಎಂಸಿ ಘೋಷಣೆ ಮಾಡಿದ್ದವು. ಪ್ರಾದೇಶಿಕ ಪಕ್ಷಗಳನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವ ಸಿದ್ಧತೆಗಳು ತೆರೆಮರೆಯಲ್ಲಿ ನಡೆಯುತ್ತಿವೆ ಎಂದು ಹೇಳಲಾಗಿದೆ.
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಸಹ ಕೆಲ ತಿಂಗಳಗಳ ಹಿಂದೆ ರಾಜ್ಯಕ್ಕೆ ಭೇಟಿ ನೀಡಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತೃತೀಯರಂಗ ರಚನೆ ಕುರಿತು ಚರ್ಚೆ ನಡೆಸಿದ್ದರು. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯ ಶಕ್ತಿಯನ್ನು ಹುಟ್ಟುಹಾಕುವುದು ಪ್ರಾದೇಶಿಕ ಪಕ್ಷಗಳ ಉದ್ದೇಶವಾಗಿದ್ದು. ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎನ್ನಲಾಗಿದೆ. ಇನ್ನು ಮಮತಾ ಬ್ಯಾನರ್ಜಿ ಭೇಟಿಯ ನಂತರ ಹೆಚ್ ಡಿ ಕುಮಾರಸ್ವಾಮಿ ಇಂದು ರಾತ್ರಿಯೇ ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ.
ಇದನ್ನೂ ಓದಿ:ಚಿಂಚನಸೂರ್ ಕಾಂಗ್ರೆಸ್ ಸೇರ್ಪಡೆಯಿಂದ ಜೆಡಿಎಸ್ ಮೇಲೆ ಯಾವುದೇ ಪರಿಣಾಮ ಉಂಟಾಗಲ್ಲ: ಹೆಚ್ಡಿಕೆ