ETV Bharat / state

ಕಾವೇರಿ ನೀರು ಬಿಡುಗಡೆಗೆ ಆದೇಶ: ಕುರುಬೂರು ಶಾಂತಕುಮಾರ್ ವಿರೋಧ

ರಾಜ್ಯ ಸರಕಾರವು ಆದೇಶ ಮರುಪರಿಶೀಲನೆಗೆ ಒತ್ತಾಯಿಸಬೇಕು. ಕಾವೇರಿ ಅಚ್ಚುಕಟ್ಟು ಪ್ರದೇಶದ ಸಂಸದರುಗಳು ಕೇಂದ್ರ ಸರಕಾರಕ್ಕೆ, ಕಾವೇರಿ ನದಿ ಪ್ರಾಧಿಕಾರಕ್ಕೆ ಕಾವೇರಿ ಸಮಸ್ಯೆ ಬಗ್ಗೆ ಸ್ಪಷ್ಟ ಮಾಹಿತಿ ನೀಡಬೇಕೆಂದು ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.

author img

By

Published : May 29, 2019, 11:43 AM IST

ಕುರುಬೂರು ಶಾಂತಕುಮಾರ್

ಬೆಂಗಳೂರು: ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುವಂತೆ ಕಾವೇರಿ ನೀರು ಪ್ರಾಧಿಕಾರ ಮಂಡಳಿ ನೀಡಿರುವ ಆದೇಶಕ್ಕೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಬರಗಾಲವಿದೆ, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಇದೆ. ಜೂನ್ ತಿಂಗಳಲ್ಲಿ ಉತ್ತಮ ಮಳೆಯಾಗುವುದು ಅನುಮಾನ. ವಾಡಿಕೆಗಿಂತ ಕಡಿಮೆ ಮುಂಗಾರು ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನೀರು ಬಿಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿಗೂ ಕುಡಿಯುವ ನೀರು ಒದಗಿಸಲು ಕಾವೇರಿ ನೀರಿನ ಅಗತ್ಯತೆ ಇದೆ. ತಮಿಳುನಾಡಿಗೆ ನೀರು ಬಿಟ್ಟ ನಂತರ ಅದನ್ನು ವಾಪಾಸ್ಸು ತರಲು ಸಾಧ್ಯವಿಲ್ಲ. 9.19 ಟಿಎಂಸಿ ನೀರು ಬಿಡುವಂತೆ ನೀಡಿರುವ ಆದೇಶವನ್ನು ಮರುಪರಿಶೀಲಿಸಬೇಕೆಂದು ಕುರುಬೂರು ಒತ್ತಾಯಿಸಿದ್ದಾರೆ.

ಕಾವೇರಿ ನದಿ ನೀರು ಪ್ರಾಧಿಕಾರದ ಆದೇಶವನ್ನು ಕಾರ್ಯಗತಗೊಳಿಸುವುದು ಕಷ್ಟಕರವಾಗಿದ್ದು, ರಾಜ್ಯ ಸರಕಾರವು ಆದೇಶ ಮರುಪರಿಶೀಲನೆಗೆ ಒತ್ತಾಯಿಸಬೇಕು. ಕಾವೇರಿ ಅಚ್ಚುಕಟ್ಟು ಪ್ರದೇಶದ ಸಂಸದರುಗಳು ಕೇಂದ್ರ ಸರಕಾರಕ್ಕೆ, ಕಾವೇರಿ ನದಿ ಪ್ರಾಧಿಕಾರಕ್ಕೆ ಕಾವೇರಿ ಸಮಸ್ಯೆ ಬಗ್ಗೆ ಸ್ಪಷ್ಟ ಮಾಹಿತಿ ನೀಡಬೇಕೆಂದು ತಿಳಿಸಿದರು.

Intro: ಕಾವೇರಿ ನೀರು ಬಿಡುಗಡೆ ಆದೇಶಕ್ಕೆ
ಕುರುಬೂರು ಶಾಂತಕುಮಾರ್ ವಿರೋಧ

ಬೆಂಗಳೂರು : ಜೂನ್ ತಿಂಗಳಲ್ಲಿ ತಮಿಳುನಾಡಿಗೆ ೯.೧೯.ಟಿಎಂಸಿ ನೀರು ಬಿಡುವಂತೆ ಕಾವೇರಿ ನೀರು ಪ್ರಾಧಿಕಾರ ನೀಡಿರುವ ಆದೇಶಕ್ಕೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.

Body: ರಾಜ್ಯದಲ್ಲಿ ತೀವ್ರ ಬರಗಾಲವಿದೆ, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಇದೆ, ಜೂನ್ ತಿಂಗಳಲ್ಲಿ ಉತ್ತಮ ಮಳೆಯಾಗುವುದು ಅನುಮಾನ , ವಾಡಿಕೆ ಗಿಂತ ಕಡಿಮೆ ಮುಂಗಾರು ಬೀಳಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂತಹ ಸಂದರ್ಭದಲ್ಲಿ ಕಾವೇರಿ ನೀರು ಬಿಡಲು ಹೇಗೆ ಸಾದ್ಯ ವೆಂದು ಅವರು ಪ್ರಶ್ನಿಸಿ ದ್ದಾರೆ.

ಬೆಂಗಳೂರಿಗೂ ಕುಡಿಯುವ ನೀರು ಒದಗಿಸಲು ಕಾವೇರಿ ನೀರಿನ ಅಗತ್ಯತೆ ಇದೆ.ತಮಿಳುನಾಡಿಗೆ ನೀರು ಬಿಟ್ಟ ನಂತರ ಅದನ್ನು ವಾಪಾಸ್ಸು ತರಲು ಸಾದ್ಯವಿಲ್ಲ . ೯.೧೯ ಟಿಎಂಸಿ ನೀರು ಬಿಡುವಂತೆ ನೀಡಿರುವ ಆದೇಶವನ್ನು ಮರುಪರಿಶೀಲಿಸಬೇಕೆಂದು ಕುರುಬೂರು ಒತ್ತಾಯಿಸಿದ್ದಾರೆ.

Conclusion: ಕಾವೇರಿ ಪ್ರಾಧಿಕಾರದ ಆದೇಶ ವನ್ನು ಕಾರ್ಯಗತಗೊಳಿಸುವುದು ಕಷ್ಟಕರವಾಗಿದ್ದು ರಾಜ್ಯ ಸರಕಾರವು ಆದೇಶ ಮರುಪರಿಶೀಲನೆಗೆ ಒತ್ತಾಯಿಸಬೇಕು. ಕಾವೇರಿ ಅಚ್ಚುಕಟ್ಟು ಪ್ರದೇಶದ ಸಂಸದರುಗಳು ಕೇಂದ್ರ ಸರಕಾರಕ್ಕೆ ಕಾವೇರಿ ನದಿ ಪ್ರಾಧಿಕಾರಕ್ಕೆ ಕಾವೇರಿ ಸಮಸ್ಯೆ ಬಗ್ಗೆ ಸ್ಪಷ್ಟ ಮಾಹಿತಿ ನೀಡಬೇಕೆಂದು ಕುರುಬೂರು ಶಾಂತ ಕುಮಾರ್ ಒತ್ತಾಯಿಸಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.