ETV Bharat / state

ಆರ್​ಆರ್​ ನಗರ ಜನತೆಗೆ ಧನ್ಯವಾದ, ತೀರ್ಪು ಸ್ವೀಕರಿಸುವೆ; ಕುಸುಮ ಹನುಮಂತರಾಯಪ್ಪ

author img

By

Published : Nov 10, 2020, 5:54 PM IST

ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ 58,113 ಮತಗಳ ಅಂತರದ ಸೋಲಿನ ನಂತರ ಸಾಮಾಜಿಕ ಜಾಲತಾಣದ ಮೂಲಕ ಕುಸುಮ ಹನುಮಂತರಾಯಪ್ಪ ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ.

Kusuma Hanumantarayappa
ಕುಸುಮ ಹನುಮಂತರಾಯಪ್ಪ

ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರರು ನೀಡಿದ ತೀರ್ಪನ್ನು ತಲೆಬಾಗಿ ಸ್ವೀಕರಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕುಸುಮ ಹನುಮಂತರಾಯಪ್ಪ ತಿಳಿಸಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ 58,113 ಮತಗಳ ಅಂತರದ ಸೋಲಿನ ನಂತರ ಸಾಮಾಜಿಕ ಜಾಲತಾಣದ ಮೂಲಕ ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ. ನಮ್ಮ ರಾಜರಾಜೇಶ್ವರಿ ನಗರ ಕ್ಷೇತ್ರದ ಸಮಸ್ತ ಜನತೆಗೆ ನಮಸ್ಕಾರ, ಚುನಾವಣೆಯಲ್ಲಿ ನೀವು ಕೊಟ್ಟಿರುವ ಈ ತೀರ್ಪನ್ನು ತಲೆಬಾಗಿ ಸ್ವೀಕರಿಸುತ್ತೇನೆ. ಕಾಂಗ್ರೆಸ್ ಪಕ್ಷವನ್ನು, ಆ ಮೂಲಕ ನನ್ನನ್ನು ಬೆಂಬಲಿಸಿದ ನಿಮಗೆ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದಿದ್ದಾರೆ.

Kusuma
ಜನರಿಗೆ ಧನ್ಯವಾದ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕುಸುಮ

ಮತಯಾಚನೆಗಾಗಿ ಮನೆ ಬಾಗಿಲಿಗೆ ಬಂದಾಗ, ಮನೆ ಮಗಳಂತೆ ಬರಮಾಡಿಕೊಂಡು ಕುಂಕುಮ ಇಟ್ಟು, ಹೂ ಮುಡಿಸಿ, ಉಡಿ ತುಂಬಿ ನೀವು ತೋರಿದ ಪ್ರೀತಿಗೆ ಋಣಿ. ನಮ್ಮ ರಾಜರಾಜೇಶ್ವರಿ ನಗರ ಕ್ಷೇತ್ರ ಎಂದೆಂದಿಗೂ ನನ್ನ ಕರ್ಮಭೂಮಿ. ಎಂದಿನಂತೆ ನಿಮ್ಮೊಂದಿಗಿದ್ದು ನನ್ನ ಸಮಾಜ ಸೇವಾ ಕಾರ್ಯಗಳನ್ನು ಮುಂದುವರಿಸುವ ಮೂಲಕ ನೊಂದವರ ದನಿಯಾಗುತ್ತೇನೆ ಎಂದಿದ್ದಾರೆ.

ಇಂದು ಬೆಳಗ್ಗೆ ಮತ ಎಣಿಕೆ ಆರಂಭಕ್ಕೆ ಮುನ್ನ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಹನುಮಂತರಾಯಪ್ಪ ನಂತರ ರಾಜರಾಜೇಶ್ವರಿ ದೇವಾಲಯಕ್ಕೆ ಸಹ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದರು. ಇದಾದ ಬಳಿಕ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಬೇಕಿದ್ದ ಅವರು ಮೊದಲ 5 ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ ಕಾರಣ ದೇವಾಲಯದಿಂದ ನೇರವಾಗಿ ನಿವಾಸಕ್ಕೆ ತೆರಳಿದ್ದಾರೆ. ಇದಾದ ಬಳಿಕ ಅವರು ಎಲ್ಲಿಯೂ ತಿರಂಗ ಹೇಳಿಕೆ ನೀಡಿರಲಿಲ್ಲ. ಇದೀಗ ಸಾಮಾಜಿಕ ಜಾಲತಾಣದ ಮೂಲಕ ರಾಜರಾಜೇಶ್ವರಿನಗರದ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.