ಬೆಂಗಳೂರು: ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ (ಕೆ.ವಿ.ಅರವಿಂದ್) ಅವರನ್ನು ಕರ್ನಾಟಕ ಹೈಕೋರ್ಟ್ಗೆ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಇಂದು ಆದೇಶಿಸಿದೆ. ರಾಷ್ಟ್ರಪತಿಗಳ ಆದೇಶಾನುಸಾರ ಕೇಂದ್ರ ಕಾನೂನು ಮತ್ತು ನ್ಯಾಯ ಇಲಾಖೆಯ ವಿಶೇಷ ಕಾರ್ಯದರ್ಶಿ ರಾಜೇಂದ್ರ ಕಶ್ಯಪ್ ಈ ಆದೇಶ ಹೊರಡಿಸಿದ್ದಾರೆ. ನ್ಯಾ.ಕೆ.ವಿ.ಅರವಿಂದ್ ಎರಡು ವರ್ಷ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.
ಕರ್ನಾಟಕ, ತೆಲಂಗಾಣ ಹೈಕೋರ್ಟ್ಗಳಿಗೆ ಎಎಸ್‌ಜಿಗಳ ನೇಮಕ: ಕರ್ನಾಟಕ ಹೈಕೋರ್ಟ್ಗೆ ಅರವಿಂದ್ ಕಾಮತ್ ಮತ್ತು ತೆಲಂಗಾಣ ಹೈಕೋರ್ಟ್ಗೆ ನರಸಿಂಹ ಶರ್ಮಾ ಅವರನ್ನು ಸಹಾಯಕ ಸಾಲಿಸಿಟರ್ ಜನರಲ್‌ಗಳನ್ನಾಗಿ (ಎಎಸ್ಜಿ) ನೇಮಿಸಲಾಗಿದೆ. ಕರ್ನಾಟಕ ಹೈಕೋರ್ಟ್‌ನ ಬೆಂಗಳೂರು ಪೀಠದಲ್ಲಿ ಹಿರಿಯ ವಕೀಲ ಅರವಿಂದ್ ಕಾಮತ್ ಅವರು ಕೇಂದ್ರ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಕೆಲಸ ಮಾಡಲಿದ್ದಾರೆ.
ಹೈದರಾಬಾದ್‌ನಲ್ಲಿರುವ ತೆಲಂಗಾಣ ಹೈಕೋರ್ಟ್‌ನಲ್ಲಿ ಹಿರಿಯ ವಕೀಲ ಬಿ.ನರಸಿಂಹ ಶರ್ಮಾ ಅವರು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ ಎಂದು ಕೇಂದ್ರ ಕಾನೂನು ಇಲಾಖೆಯು ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಗಳು 3 ವರ್ಷಗಳು ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿವೆ.
ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ: ಶಿಕ್ಷಣ ಸಚಿವ ಮಧು ಬಂಗಾರಪ್ಪ