ETV Bharat / state

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?: ಹೈಕೋರ್ಟ್ ತರಾಟೆ

ಸರ್ಕಾರಿ ಶಾಲೆಗಳಲ್ಲಿ ಸೂಕ್ತ ಸೌಲಭ್ಯ ಕಲ್ಪಿಸದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

High Court
ಹೈಕೋರ್ಟ್
author img

By

Published : May 30, 2023, 6:52 AM IST

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಡಿಜಿಟಲ್ ಬೋರ್ಡ್(ಫಲಕ)ಗಳಿವೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳನ್ನು ಕಲ್ಪಿಸಲಾಗದೇ ಇರುವುದು ನಾಚಿಕೆಗೇಡಿನ ವಿಚಾರವಲ್ಲವೇ? ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು. ಮಕ್ಕಳಲ್ಲಿನ ಅಪೌಷ್ಠಿಕತೆ ಸಮಸ್ಯೆ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳ ವಿಚಾರವಾಗಿ 2013 ರಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಸ್ವಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತ್ತು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್ ಕಮಲ್ ಅವರಿದ್ದ ನ್ಯಾಯಪೀಠ ರಾಜ್ಯ ಸರ್ಕಾರವನ್ನು ಕಟುವಾಗಿ ಪ್ರಶ್ನಿಸಿದೆ.

ವಿಚಾರಣೆ ವೇಳೆ ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿರುವ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು ರಾಜ್ಯದ ಸುಮಾರು ನಾಲ್ಕು ಸಾವಿರ ಶಾಲೆಗಳಲ್ಲಿ ಕುಡಿಯುವ ನೀರು, ಹೆಣ್ಣು ಮಕ್ಕಳಿಗೆ ಶೌಚಾಲಯ, ತಡೆಗೋಡೆ, ಆಟದ ಮೈದಾನದ ವ್ಯವಸ್ಥೆ ಇಲ್ಲ ಎಂಬ ಅಂಶವನ್ನು ದಾಖಲೆಗಳ ಸಮೇತ ನ್ಯಾಯಪೀಠಕ್ಕೆ ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಹಲವು ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬುದು ಗಂಭೀರ ವಿಷಯ. ಈ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಲಾಗಿದೆ?. ಯಾವಾಗ ಈ ಶಾಲೆಗಳನ್ನು ಆರಂಭಿಸಲಾಗಿದೆ. ಶಿಕ್ಷಕರು ಇಲ್ಲ, ಕೊಠಡಿಗಳು ಇಲ್ಲ ಎಂದರೆ ಹೇಗೋ ಹೊಂದಾಣಿಕೆ ಮಾಡಿಕೊಳ್ಳಬಹುದು. ಆದರೆ ಹೆಣ್ಣು ಮಕ್ಕಳಿಗೆ ಶೌಚಾಲಯವಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬುದು ಗಂಭೀರ ವಿಚಾರವಲ್ಲವೇ ಎಂದು ಪ್ರಶ್ನಿಸಿತು.

ಇದನ್ನೂ ಓದಿ: ಪದೋನ್ನತಿ ಪ್ರಕ್ರಿಯೆ ಪೂರ್ಣಗೊಳಿಸಲು 3 ವರ್ಷ ವಿಳಂಬ : ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ತರಾಟೆ

ಇಲಾಖೆಯ ಜಿಲ್ಲಾ ಕೇಂದ್ರಗಳಲ್ಲಿ ತಂಗಿದರೆ ಸಾಕಾಗುವುದಿಲ್ಲ. ಶಾಲೆಯ ಮೇಲ್ವಿಚಾರಕರು ಇದ್ದಾರಲ್ಲವೇ?. ಕಾಲಕಾಲಕ್ಕೆ ಅವರು ವರದಿ ಸಲ್ಲಿಸಬೇಕು. ಮೇಲಾಧಿಕಾರಿಗಳು ಆ ವರದಿಯನ್ನು ಪರಿಶೀಲಿಸಿದ್ದಾರೆಯೇ?, ವರದಿ ಸಲ್ಲಿಸಲಾಗಿದೆ ಎಂದರೆ ಏನು ಪ್ರಯೋಜನ?. ಮೇಲಾಧಿಕಾರಿಗಳು ಏನು ಮಾಡುತ್ತಿದ್ದಾರೆ?, ಇದು ವಿಷಾದನೀಯ ಪರಿಸ್ಥಿತಿ ಎಂದು ಪೀಠ ತಿಳಿಸಿತು.

ಸರ್ಕಾರ ಸಲ್ಲಿಸಿರುವ ಪಟ್ಟಿಯಲ್ಲಿ ಒಂದೇ ಒಂದು ಶಾಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದರ ಕುರಿತು ಉಲ್ಲೇಖವಿಲ್ಲ, ಇದು ಹೇಗೆ?. ಹೆಣ್ಣು ಮಕ್ಕಳಿಗೆ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕನಿಷ್ಠ ಅವಶ್ಯಕತೆ ಎಂದು ಒತ್ತಿ ಹೇಳಿತು. ಕಲಬುರ್ಗಿಯಲ್ಲಿ 2 ಸಾವಿರ ಶಾಲೆಗಳ ಪೈಕಿ 22 ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. 126 ಶಾಲೆಗಳಲ್ಲಿ ಶೌಚಾಲಯವೇ ಇಲ್ಲ ಎಂದು ವರದಿಯಲ್ಲಿ ವಿವರಿಸಲಾಗಿದೆ. 2013ರಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈಗ ನಾವು 2023ರಲ್ಲಿ ಇದ್ದೇವೆ. ಹತ್ತು ವರ್ಷಗಳಾದರೂ ಪರಿಸ್ಥಿತಿ ಸುಧಾರಿಸಿಲ್ಲ. ಬದಲಿಗೆ ಕೆಟ್ಟದ್ದರಿಂದ ದಯನೀಯ ಸ್ಥಿತಿಗೆ ಪರಿಸ್ಥಿತಿ ಹೋಗುತ್ತಿದೆ ಎಂದು ಹೈಕೋರ್ಟ್ ಕಿಡಿಕಾರಿತು. ಅಮಿಕಸ್ ಕ್ಯೂರಿ ಅವರು ಸಲ್ಲಿಸಿರುವ ಶಿಫಾರಸು ವರದಿಗೆ ಸಂಬಂಧಿಸಿದಂತೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಕೋರ್ಟ್‌ ಜೂನ್ 15ಕ್ಕೆ ಮುಂದೂಡಿತು.

ಇದನ್ನೂ ಓದಿ: ಕೇವಲ ಒಂದು ಜೊತೆ ಸಮವಸ್ತ್ರ ನೀಡುತ್ತಿರುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತರಾಟೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.