ETV Bharat / state

ವಿಪಕ್ಷ ನಾಯಕರಿಲ್ಲದ ಪರಿಣಾಮ ಪಿಸಿಎ ಸದಸ್ಯರ ನೇಮಕ್ಕೆ ವಿಳಂಬ: ರಾಜ್ಯ ಸರ್ಕಾರ - ನ್ಯಾಯಮೂರ್ತಿ ಎಂಜಿಎಸ್ ಕಮಲ್

ರಾಜ್ಯ ಸರ್ಕಾರವು ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಕಾರಣ ಪಿಸಿಎದಲ್ಲಿ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬವಾಗುತ್ತಿದೆ ಎಂದು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದು, ಹೈಕೋರ್ಟ್ ಸದಸ್ಯರನ್ನು ನೇಮಕ ಮಾಡಬೇಕು ಎಂದು ನಿರ್ದೇಶನ ನೀಡಿದೆ. ​

high court
ಹೈಕೋರ್ಟ್​
author img

By

Published : Aug 10, 2023, 7:25 AM IST

ಬೆಂಗಳೂರು: ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಪರಿಣಾಮ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ (ಪಿಸಿಎ)ದಲ್ಲಿ ಖಾಲಿಯಿರುವ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬವಾಗುತ್ತಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ ಕುರಿತಂತೆ ನಿರ್ದೇಶಿಸಬೇಕು ಎಂದು ವಕೀಲೆ ಸುಧಾ ಕಟ್ವಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಈ ವೇಳೆ ಹಾಜರಾದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ನಾಗರಿಕ ಸಮಾಜದಿಂದ (ಸಿವಿಲ್ ಸೊಸೈಟಿ) ಒಬ್ಬರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರೊಬ್ಬರನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕವಾಗಿಲ್ಲ.

ಇದಕ್ಕೆ ವಿರೋಧ ಪಕ್ಷದ ನಾಯಕರು ಆಯ್ಕೆಯಾಗಿಲ್ಲದಿರುವುದು ಕಾರಣ. ಆಯ್ಕೆ ಸಮಿತಿಯಲ್ಲಿ ವಿರೋಧ ಪಕ್ಷದ ನಾಯಕರೂ ಒಬ್ಬರಾಗಿದ್ದಾರೆ. ಈ ಕಾರಣಕ್ಕಾಗಿ ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಇನ್ನಿಬ್ಬರು ಸದಸ್ಯರ ನೇಮಕಾತಿ ವಿಳಂಬವಾಗುತ್ತಿದೆ ಎಂದು ವಿವರಿಸಿದರು.

ಪೊಲೀಸ್ ದೂರು ಪ್ರಾಧಿಕಾರದಲ್ಲಿ ಅಧ್ಯಕ್ಷರೂ ಸೇರಿ ಐದು ಮಂದಿ ಇದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್ ಕೆ ಸುಧೀಂದ್ರ ರಾವ್ ಅವರನ್ನು 2023 ರ ಜುಲೈ 31 ರಂದು ನೇಮಕ ಮಾಡಲಾಗಿದ್ದು, ಅವರು ಅಧಿಕಾರ ಸ್ವೀಕರಿಸಿದ್ದಾರೆ. ಪ್ರಾಧಿಕಾರವು ಮೂರು ಸ್ಥಾನದೊಂದಿಗೆ ಕೆಲಸ ಮಾಡುತ್ತಿದೆ. ಆದರೂ ಪ್ರಾಧಿಕಾರ ಕೆಲಸ ಮಾಡುತ್ತಿಲ್ಲ ಎಂಬ ಭಾವನೆ ಬೇಡ. ಉಳಿದ ಇಬ್ಬರು ಸದಸ್ಯರನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ಮುಂದಿನ ನಾಲ್ಕು ವಾರದಲ್ಲಿ ನಾಲ್ಕು ಸದಸ್ಯರನ್ನು ನೇಮಕ ಮಾಡಬೇಕು ಎಂದು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

ಆದಷ್ಟು ಬೇಗ ಪ್ರತಿಪಕ್ಷ ನಾಯಕನ ಆಯ್ಕೆ:- ಅಮಿತ್​ ಶಾ: ಮಾಜಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಆಗಸ್ಟ್​ 8 ಮಂಗಳವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದರು. ಈ ವೇಳೆ ಅಮಿತ್​ ಶಾ" ಆದಷ್ಟು ಬೇಗ ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆಯೂ ನಿರ್ಧಾರ ತೆಗೆದದುಕೊಳ್ಳಲಾಗುವುದು. ಪಕ್ಷ ಸಂಘಟನೆ ನಿಟ್ಟಿನಲ್ಲಿ ಒಂದು ಉತ್ತಮ ತಂಡವನ್ನು ಆಯ್ಕೆ ಮಾಡಲಾಗುವುದು" ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಕನಕಪುರ ರಸ್ತೆ ಸುರಕ್ಷತೆ ಕಲ್ಪಿಸದ NHAI ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.