ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಚರ್ಚಿತ ಮತ್ತು ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರಗಳಲ್ಲಿ ಒಂದಾದ ಬೆಳಗಾವಿಯ ಅಥಣಿಯಲ್ಲಿ. ಬಿಜೆಪಿಯ ಕಟ್ಟಾಳು ಲಕ್ಷ್ಮಣ ಸವದಿ ಅವರು ಸುಮಾರು 30 ಸಾವಿರ ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ. ಟಿಕೆಟ್ ವಂಚಿತರಾದ ಬಳಿಕ ಪಕ್ಷಕ್ಕೆ ಗುಡ್ಬೈ ಹೇಳಿ ಸವದಿ ಕಾಂಗ್ರೆಸ್ ಸೇರಿದ್ದರು. ಇದು ಬಿಜೆಪಿಗೆ ನುಂಗಲಾರದ ತುತ್ತಾಗಿತ್ತು.
ಲಕ್ಷ್ಮಣ ಸವದಿ ಅವರು 2018 ರ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಪಕ್ಷ ಉಪಮುಖ್ಯಮಂತ್ರಿ ಮಾಡಿ ಅಧಿಕಾರ ನೀಡಿತ್ತು. ಇಷ್ಟೆಲ್ಲದರ ಮಧ್ಯೆ ಟಿಕೆಟ್ ನೀಡಿಲ್ಲ ಎಂಬ ಕಾರಣಕ್ಕಾಗಿ ಮುನಿಸಿಕೊಂಡ ಇಬ್ಬರೂ ಕಾಂಗ್ರೆಸ್ ಪಾಳಯ ಸೇರಿ ಮಾತೃ ಪಕ್ಷಕ್ಕೆ ಸೆಡ್ಡು ಹೊಡೆದಿದ್ದರು.
ಟಿಕೆಟ್ ನಿರಾಕರಿಸಿದ್ದಕ್ಕೆ ಬಂಡೆದ್ದು ಕಾಂಗ್ರೆಸ್ ಸೇರಿ ಬಿಜೆಪಿಗೆ ಸೆಡ್ಡು ಹೊಡೆದಿರುವ ಲಿಂಗಾಯತ ಸಮುದಾಯ ಇನ್ನೊಬ್ಬ ನಾಯಕ ಲಕ್ಷ್ಮಣ ಸವದಿ. ಬಿಜೆಪಿಯಿಂದ ಸ್ಪರ್ಧಿಸಿ 3 ಬಾರಿ ಶಾಸಕರಾಗಿದ್ದ ಸವದಿ ಈ ಬಾರಿ ಬಿಜೆಪಿ ವಿರುದ್ಧವೇ ಕಣದಲ್ಲಿದ್ದರು. ಮಹೇಶ್ ಕುಮಟಳ್ಳಿ ವಿರುದ್ಧ ಅಥಣಿ ಕ್ಷೇತ್ರದಲ್ಲಿ ಸ್ಪರ್ಧೆ ಒಡ್ಡಿದ್ದರು. ಮಾಜಿ ಡಿಸಿಎಂ ಆಗಿದ್ದ ಸವದಿ 2004, 2008, 2013 ರ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದರು.
2018 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ಕುಮಟಳ್ಳಿ ವಿರುದ್ಧ ಕೇವಲ 2741 ಮತಗಳ ಅಂತರದಿಂದ ಸೋತಿದ್ದರು. ಇದರ ಬಳಿಕ ವಿಧಾನಪರಿಷತ್ಗೆ ಆಯ್ಕೆಯಾಗಿ, ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಡಿಸಿಎಂ ಆಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅಥಣಿಯಿಂದ ವಿಧಾನಸಭೆಗೆ ಸ್ಪರ್ಧಿಸಲು ಬಯಸಿದ್ದ ಸವದಿಗೆ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಈಗ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ವಿರುದ್ಧ ಲಕ್ಷ್ಮಣ ಸವದಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದ್ದಾರೆ.
ಇದನ್ನೂ ಓದಿ:92 ಹರೆಯದಲ್ಲೂ ರಾಜಕೀಯ ರಣೋತ್ಸಾಹ!.. ಶಾಮನೂರು ಶಿವಶಂಕರಪ್ಪಗೆ ಭರ್ಜರಿ ಗೆಲುವು!