ETV Bharat / state

ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ: ನಿವೃತ್ತ ನ್ಯಾಯಮೂರ್ತಿ ನೇಮಕ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥ - ನಿವೃತ್ತ ನ್ಯಾಯಮೂರ್ತಿ ನೇಮಕ

ಮಾನವ ಹಕ್ಕುಗಳ ಸಂರಕ್ಷಣಾ ಕಾಯಿದೆಯಂತೆ ಯಾವುದೇ ರಾಜ್ಯದ ಮಾನವನ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ದೇಶದ ಯಾವುದೇ ರಾಜ್ಯದಲ್ಲಿ ಮತ್ಯಾವುದೇ ಹುದ್ದೆಯನ್ನು ಹೊಂದುವುದಕ್ಕೆ ಅವಕಾಶವಿಲ್ಲ. ಆದರೆ ನಿವೃತ್ತ ನ್ಯಾಯಮೂರ್ತಿ ಸಿ.ಜೆ.ಹುನಗುಂದ ಅವರನ್ನು ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಸದಸ್ಯರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.

high court
ಹೈಕೋರ್ಟ್
author img

By ETV Bharat Karnataka Team

Published : Jan 5, 2024, 5:25 PM IST

ಬೆಂಗಳೂರು: ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗದ (ಕೆಎಸ್​ಹೆಚ್‌ಆರ್‌ಸಿ) ಮಾಜಿ ಸದಸ್ಯ ಸಿ.ಜೆ.ಹುನಗುಂದ ಅವರನ್ನು ಕರ್ನಾಟಕ ಭೂಕಬಳಿಕ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿರುವ ಆದೇಶವನ್ನು ಸರ್ಕಾರ ಹಿಂಪಡೆದಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಅರ್ಜಿ ಇತ್ಯರ್ಥ ಪಡಿಸಿದೆ.

ವಕೀಲ ಎಸ್.ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿದೆ. ವಿಚಾರಣೆ ವೇಳೆ ಅರ್ಜಿದಾರರೂ ಆಗಿರುವ ವಕೀಲ ಉಮಾಪತಿ, ಅರ್ಜಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಹುನಗುಂದ ಅವರನ್ನು ಭೂ ಕಬಳಿಕೆ ವಿಶೇಷ ನ್ಯಾಯಾಲಯದ ಸದಸ್ಯರನ್ನಾಗಿ ನೇಮಕ ಮಾಡಿದ ಆದೇಶವನ್ನು ಸರ್ಕಾರ ಹಿಂಪಡೆದಿದೆ. ಆದ್ದರಿಂದ ಅರ್ಜಿಯ ವಿಚಾರಣೆ ಮುಂದುವರೆಯುವ ಅಗತ್ಯವಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ಇತ್ಯರ್ಥ ಪಡಿಸಿ ಆದೇಶಿಸಿತು.

ಪ್ರಕರಣದ ಹಿನ್ನೆಲೆ: ಹುನಗುಂದ ಅವರು ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ನಿವೃತ್ತರಾಗಿದ್ದರು. ಇದಾದ ಬಳಿಕ ಅವರು 2012ರ ನವೆಂಬರ್ 29ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದಸ್ಯರಾಗಿದ್ದು, 2017ರ ನವೆಂಬರ್ 28ರಂದು ನಿವೃತ್ತರಾಗಿದ್ದರು. ನಂತರ 2022ರ ಅಕ್ಟೋಬರ್ 20ರಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದು ಕಾನೂನು ಬಾಹಿರವಾಗಿದ್ದು, ಈ ನೇಮಕಾತಿ ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದರು. ಅಲ್ಲದೆ, ಈ ಸಂಬಂಧ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದರೂ ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಆದ್ದರಿಂದ ಅವರ ನೇಮಕ ಆದೇಶ ರದ್ದು ಪಡಿಸಬೇಕು ಎಂದು ಕೋರಿದ್ದಾರೆ.

ಅಲ್ಲದೆ, ಮಾನವ ಹಕ್ಕುಗಳ ಸಂರಕ್ಷಣಾ ಕಾಯಿದೆ ಸೆಕ್ಷನ್ 24(3) ಪ್ರಕಾರ ಯಾವುದೇ ರಾಜ್ಯದ ಮಾನವನ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಾದವರು ದೇಶದ ಯಾವುದೇ ರಾಜ್ಯದಲ್ಲಿ ಮತ್ಯಾವುದೇ ಹುದ್ದೆಯನ್ನು ಹೊಂದುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ಆದರೂ ಕೂಡ 2022ರ ಅಕ್ಟೋಬರ್ ತಿಂಗಳಿನಿಂದ ಅನ್ವಯವಾಗುವಂತೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಉಮಾಪತಿ ಅರ್ಜಿಯಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.