ಬೆಂಗಳೂರು: ಭೂ ಕಬಳಿಕೆ ಆರೋಪ ಪ್ರಕರಣದಲ್ಲಿ ಸಚಿವ ಭೈರತಿ ಬಸವರಾಜ್ ಹಾಗೂ ಶಾಸಕ ಆರ್. ಶಂಕರ್ ವಿರುದ್ಧದ ಖಾಸಗಿ ದೂರಿಗೆ ಸಂಬಂಧಿಸಿದಂತೆ, ವಿಚಾರಣಾ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಫೆ. 2ನೇ ವಾರದವರೆಗೂ ವಿಸ್ತರಿಸಿ ಆದೇಶಿಸಿದೆ.
ಇದನ್ನೂ ಓದಿ: ಮದುವೆಯಾಗುವ ಭರವಸೆ ಈಡೇರಿಸದಿರುವುದು ವಂಚನೆಯಲ್ಲ : ಹೈಕೋರ್ಟ್
ಭೂ ಕಬಳಿಕೆ ಆರೋಪ ಸಂಬಂಧ ತಮ್ಮ ವಿರುದ್ಧದ ದೂರನ್ನು ವಿಚಾರಣೆಗೆ ಅಂಗೀಕರಿಸಿ (ಕಾಗ್ನಿಜೆನ್ ತೆಗೆದುಕೊಂಡ) ಸಮನ್ಸ್ ಜಾರಿಗೊಳಿಸಿರುವ 42ನೇ ಎಸಿಎಂಎಂ ನ್ಯಾಯಾಲಯದ ಆದೇಶ ರದ್ದು ಕೋರಿ ಸಚಿವ ಭೈರತಿ ಬಸವರಾಜ್, ಶಾಸಕ ಆರ್.ಶಂಕರ್ ಮತ್ತು ಎ.ಎಂ. ಮಾದಪ್ಪ ಎಂಬುವರು ಅರ್ಜಿಯನ್ನು ಸಲ್ಲಿಸಿದ್ದರು. ನ್ಯಾ. ಸುನೀಲ್ ದತ್ ಯಾದವ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ಪೀಠ ವಿಚಾರಣೆಯನ್ನು ಫೆಬ್ರವರಿ 2ನೇ ವಾರಕ್ಕೆ ಮುಂದೂಡಿತು.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಇದೇ ವೇಳೆ, ಅರ್ಜಿದಾರರ ವಿರುದ್ಧ ನಗರದ 42ನೇ ಎಸಿಎಂಎಂ ನ್ಯಾಯಾಲಯ ನಡೆಸುತ್ತಿರುವ ವಿಚಾರಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ, 2021ರ ಡಿ. 21ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿರುವುದಾಗಿ ತಿಳಿಸಿತು.