ETV Bharat / state

'ಭಾರತದ ಪ್ರಗತಿಗೆ ಸಂಕಲ್ಪ ಮಾಡೋಣ': ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಬಳಿಕ ಸಿಎಂ ಕರೆ - ಪದ್ಮ ಪ್ರಶಸ್ತಿ

ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ಮಾಡಿ ನಾಡಿನ ಜನತೆಗೆ ಗಣರಾಜ್ಯೋತ್ಸವ ಶುಭಾಶಯ ತಿಳಿಸಿದ ಸಿಎಂ ಬಸವರಾಜ ಬೊಮ್ಮಾಯಿ.

cm bommai
ಸಿಎಂ ಬೊಮ್ಮಾಯಿ
author img

By

Published : Jan 26, 2023, 10:45 AM IST

ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ನಮ್ಮನ್ನು ಸಂವಿಧಾನಕ್ಕೆ ಸಮರ್ಪಣೆ ಮಾಡಿಕೊಂಡು ಸಂವಿಧಾನಬದ್ಧವಾಗಿ ನಡೆದು ಭಾರತದ ಪ್ರಗತಿಗೆ ಸಂಕಲ್ಪ ಮಾಡಿಕೊಳ್ಳುವ ದಿನ. ನಾವೆಲ್ಲರೂ ಈ ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ಮಾಡಿದ ಬಳಿಕ ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿ ಅವರು ಮಾತನಾಡಿದರು.

"ಭಾರತದ ವಿಸ್ತೃತವಾಗಿರುವ ಶಕ್ತಿ, ಭಾರತದ ಭವ್ಯ ಪರಂಪರೆ ಸದಾ ಕಾಲ ಜಗತ್ತಿನಲ್ಲಿ ಪ್ರತ್ಯೇಕವಾಗಿ, ವಿಭಿನ್ನವಾಗಿ ನಿಲ್ಲುತ್ತದೆ. ಆಧುನಿಕ, ಪ್ರಗತಿಪರವಾದ ಭಾರತ, ಮಾನವೀಯತೆಯ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್ ಎಂಬ ಧ್ಯೇಯ ನುಡಿಯಿಂದ ಮುನ್ನಡೆಯುತ್ತಿದ್ದೇವೆ" ಎಂದರು.

ರಾಜ್ಯದ 8 ಗಣ್ಯರಿಗೆ ಪದ್ಮ ಪ್ರಶಸ್ತಿ- ನಮ್ಮ ಹೆಮ್ಮೆ: "ರಾಜ್ಯದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಪದ್ಮವಿಭೂಷಣ, ಸುಧಾಮೂರ್ತಿ, ಎಸ್.ಎಲ್.ಭೈರಪ್ಪ ಸೇರಿದಂತೆ ಒಟ್ಟು ಎಂಟು ಗಣ್ಯರಿಗೆ ಪದ್ಮಪ್ರಶಸ್ತಿ ಘೋಷಣೆಯಾಗಿವೆ. ಕಳೆದ ಹಲವಾರು ವರ್ಷಗಳಿಂದ ತಮ್ಮ ತಮ್ಮ ವೃತ್ತಿಯಲ್ಲಿ ಶ್ರೇಷ್ಠತೆ ಕಂಡುಕೊಂಡವರು, ದೇಶಕ್ಕೆ ಕೊಡುಗೆ ನೀಡಿದವರು, ಯಾವ ಅಪೇಕ್ಷೆಯೂ ಇಲ್ಲದೆ ಎಲೆಮರೆಕಾಯಿಯಾಗಿ ಕೆಲಸ ಮಾಡಿದವರನ್ನು ಪ್ರಧಾನಿ ಗುರುತಿಸಿ ಪದ್ಮಪ್ರಶಸ್ತಿಗಳನ್ನು ನೀಡುವ ವಿನೂತನ ಪದ್ಧತಿಯನ್ನು ಅಳವಡಿಸಿದ್ದಾರೆ. ಇದು ಅವರ ಕಾರ್ಯವೈಖರಿ. ಗುಣಾತ್ಮಕ ಕಾರ್ಯಕ್ಕೆ ಬೆಲೆ ನೀಡಿದ್ದಾರೆ. ಎಲ್ಲರಿಗೂ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಅವರಿಂದ ಇನ್ನಷ್ಟು ಜನರಿಗೆ ಪ್ರೇರಣೆ ದೊರೆಯುವ ಆಶಾಭಾವನೆ ಇದೆ" ಎಂದು ತಿಳಿಸಿದರು.

ನಳಿನ್‍ಕುಮಾರ್ ಕಟೀಲ್ ಅಭಿನಂದನೆ: ಸಾರ್ವಜನಿಕ ಸೇವೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಡಾ.ಎಸ್.ಎಲ್.ಭೈರಪ್ಪ, ಸಮಾಜಸೇವೆಗೆ ಶ್ರೀಮತಿ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಒಲಿದಿದೆ. ಕಲಾ ಕ್ಷೇತ್ರದಲ್ಲಿ ರಾಣಿ ಮಾಚಯ್ಯ, ಮುನಿವೆಂಕಟಪ್ಪ, ಷಾ ರಶೀದ್ ಅಹ್ಮದ್ ಖಾದ್ರಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಖಾದರ್ ವಲ್ಲಿ ದಡೇಕುಲ, ಪ್ರಾಚ್ಯವಸ್ತು ಸಂಶೋಧನೆಯಲ್ಲಿ ಎಸ್.ಸುಬ್ಬರಾಮನ್ ಅವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರೆಲ್ಲರಿಗೂ ಅಭಿನಂದನೆಗಳು. ಈ ಅಪೂರ್ವ ಸಾಧಕರು ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಪದ್ಮ ಪ್ರಶಸ್ತಿಗೆ ನೈಜ ಅರ್ಹತೆಯನ್ನೇ ಮಾನದಂಡವನ್ನಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಅವರ ಸಂಪುಟ ಪರಿಗಣಿಸುತ್ತಿದೆ. ಇದರಿಂದ ಈ ಪ್ರಶಸ್ತಿಯ ಘನತೆಯೂ ಹೆಚ್ಚಾಗಿದೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇದೇ ವೇಳೆ, ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಮರ್ಪಿಸಿದ್ದಾರೆ.

ಇದನ್ನೂ ಓದಿ: ಪ್ರಪ್ರಥಮ ಬಾರಿಗೆ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.